ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ತನ್ನ ಹೊಸ ಬೆಂಝ್ ಜಿಎಲ್‍ಇ ಕಾರನ್ನು 2020ರ ಜನವರಿ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಕಂಪನಿಯು 2018ರ ಪ್ಯಾರಿಸ್ ಮೋಟಾರ್ ಶೋನಲ್ಲಿ ಈ ಕಾರನ್ನು ಮೊದಲ ಬಾರಿಗೆ ಅನಾವರಣಗೊಳಿಸಿತ್ತು. ಭಾರತದಲ್ಲಿ ಕಳೆದ ತಿಂಗಳಿನಿಂದ ಬುಕ್ಕಿಂಗ್ ಅನ್ನು ಸ್ವಿಕರಿಸಲು ಪ್ರಾರಂಭಿಸಿದೆ.

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಬೆಂಝ್ ಜಿಎಲ್‍ಇ ಸ್ಪೈ ಚಿತ್ರಗಳು ಬಹಿರಂಗವಾಗಿದೆ. ಡೀಲರ್‍‍ಗಳ ಸಭೆಯಲ್ಲಿ ತೆಗೆದ ಸ್ಪೈ ಚಿತ್ರಗಳನ್ನು ಟೀಮ್ ಬಿ‍ಹೆಚ್‍ಪಿ ಬಹಿರಂಗಪಡಿಸಿದೆ. ಹೊಸ ಮರ್ಸಿಡಿಸ್ ಬೆಂಝ್ ಜಿಎಲ್‍ಇ ಕಾರಿನ ಎಂಜಿನ್ ಮತ್ತು ಇತರ ಫೀಚರ್ಸ್‍‍ಗಳ ಮಾಹಿತಿಗಳನ್ನು ಬಹಿರಂಗಪಡಿಸುತ್ತದೆ. ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಜಿಎಲ್ಇ ಕಾರು ಪೆಟ್ರೋಲ್ ಮತ್ತು ಡೀಸೆಲ್ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಎಲ್ಲಾ ಹೊಸ ಎಂಜಿನ್‍ಗಳು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಸಾರವಾಗರಲಿದೆ.

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಮರ್ಸಿಡಿಸ್ ಬೆಂಝ್ ಕಾರಿನಲ್ಲಿ 3.0 ಲೀಟರ್ ಆರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್‍ನೊಂದಿಗೆ 245 ಬಿ‍‍ಹೆಚ್‍‍ಪಿ ಪವರ್ ಮತ್ತು 500 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎರಡು ಎಂಜಿನ್‍‍ಗಳಲ್ಲಿ 9 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ. ಇದರೊಂದಿಗೆ ಮಾರ್ಕ್‍‍ನ 4ಮ್ಯಾಟಿಕ್ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗುತ್ತದೆ.

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಎರಡನೇ ತಲಮಾರಿನ ಮರ್ಸಿಡಿಸ್ ಬೆಂಝ್ ಜಿಎಲ್ಇ ಎರಡು ಮಾದರಿಗಳಲ್ಲಿ ಲಭ್ಯವಿದೆ. ಈ ಎರಡು ಮಾದರಿಗಳು ಎಕ್ಸ್‌ಕ್ಲೂಸಿವ್ ಮತ್ತು ಎಲೈಟ್‍ಗಳಾಗಿವೆ. ಈ ಮಾದರಿಗಳು ಲಾಂಗ್ ವ್ಹೀಲ್‍ಬೇಸ್ ಪರಿಕಲ್ಪನೆಯನ್ನು ಆಧರಿಸಿದೆ.

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಹೊಸ ಬೆಂಝ್ ಜಿಎಲ್‍ಇ ಕಾರಿನಲ್ಲಿ ಮಲ್ಟಿ ಬೀಮ್ ಎಲ್‍ಇಡಿ ಹೆಡ್‍‍ಲ್ಯಾಂಪ್, 20 ಇಂಚಿನ ಅಲಾಯ್ ವೀಲ್‌ಗಳು, 360 ಡಿಗ್ರಿ ಕ್ಯಾಮೆರಾ, ಏರ್ ಸೆಸ್ಪೆಂಷನ್, ಎಲೆಕ್ಟ್ರಿಕಲ್ ಹೊಂದಾಣಿಕಯ ಹಿಂಭಾಗದ ಸೀಟುಗಳು, ಪನರೊಮಿಕ್ ಸನ್‌ರೂಫ್, ನಾಲ್ಕು ಝೋನ್ ಕ್ಲೈಮೆಟ್ ಕಂಟ್ರೋಲ್, 7 ಏರ್‍‍ಬ್ಯಾಗಗಳು ಮತ್ತು ಬ್ಲೈಂಡ್ ಸ್ಪಾಟ್ ಅಸಿಸ್ಟ್ ಅನ್ನು ಹೊಂದಿದೆ.

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿರುವ ಮಾರಾಟವಾಗುತ್ತಿರುವ ಬೆಂಝ್ ಜಿಎಲ್ಇ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಮಾದರಿಗಳಲ್ಲಿ ಲಭ್ಯವಿದೆ. ಡೀಸೆಲ್ ಮಾದರಿಯು 2.2 ಲೀಟ ಡೀಸೆಲ್ ಎಂಜಿನ್ 201 ಬಿ‍‍ಹೆಚ್‍ಪಿ ಪವರ್ ಮತ್ತು 500 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜಿಎಲ್‍ಇ ಡೀಸೆಲ್ ಮಾದರಿಗೆ ಭಾರತ ಎಕ್ಸ್ ಶೋರೂಂ ಪ್ರಕಾರ ಬೆಲೆಯು ರೂ.67.15 ಲಕ್ಷದಿಂದ ರೂ.77.83 ಲಕ್ಷಗಳಾಗಿದೆ

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಇನ್ನೂ 3.0 ಲೀಟರ್ ಪೆಟ್ರೋಲ್ ಎಂಜಿನ್ 255 ಬಿ‍ಹೆಚ್‍‍ಪಿ ಪವರ್ ಮತ್ತು 620 ಎನ್‍ಎಂ ಪವರ್ ಅನ್ನು ಉತ್ಪಾದಿಸುತ್ತದೆ. ಎರಡು ಎಂಜಿನ್‍‍ಗಳೊಂದಿಗೆ 9 ಸ್ಪೀಡ್ ಆಟೋಮ್ಯಾಟಿ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಜಿಎಲ್ಇ 3.0 ಲೀಟರ್ ಆರು ಸಿಲಿಂಡರ್ ಪೆಟ್ರೋಲ್ ಎಂಜಿನ್‍ನೊಂದಿಗೆ ಲಭ್ಯವಿದೆ. ಈ ಎಂಜಿನ್ 333 ಬಿ‍‍ಹೆಚ್‍‍ಪಿ ಪವರ್ ಮತ್ತು 480 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್‍‍ನೊಂದಿಗೆ 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಜಿಎಲ್ಇ ಪೆಟ್ರೋಲ್ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.78.18 ಲಕ್ಷಗಳಾಗಿದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಮುಂದಿನ ವರ್ಷ ಬಿಡುಗಡೆಯಾಗಲಿದೆ ಹೊಸ ಬೆಂಝ್ ಜಿಎಲ್ಇ

ಹೊಸ ಬೆಂಝ್ ಜಿಎ‍ಲ್ಇ ಎಸ್‍‍ಯು‍ವಿಯು ಆಕರ್ಷಕ ಲುಕ್ ಮತ್ತು ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಹೊ‍ಸ ಜಿಎಲ್ಇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೊಸ ತಲೆಮಾರಿನ ಬಿಎಂಡಬ್ಲ್ಯು ಎಕ್ಸ್ 5, ಲ್ಯಾಂಡ್ ರೋವರ್ ಡಿಸ್ಕವರಿ, ಆಡಿ ಕ್ಯೂ 7 ಮತ್ತು ವೋಲ್ವೋ ಎಕ್ಸ್‌ಸಿ 90 ಕಾರುಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
Mercedes-Benz GLE Second Generation Specs Leaked: Launching January 2020 - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X