ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಎಂಜಿ ಮೋಟಾರ್ ಸಂಸ್ಥೆಯು ಹೆಕ್ಟರ್ ಎಸ್‌ಯುವಿ ಬಿಡುಗಡೆ ಯಶಸ್ವಿ ನಂತರ ಮತ್ತೊಂದು ಆಕರ್ಷಕ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಅತ್ಯತ್ತಮ ಬೆಲೆಗಳಲ್ಲಿ ಅತಿಹೆಚ್ಚು ಮೈಲೇಜ್ ನೀಡಬಲ್ಲ ಇಜೆಡ್ಎಸ್ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿರುವ ಇಜೆಡ್ಎಸ್ ಕಾರನ್ನು ಸದ್ಯ ರೋಡ್ ಟೆಸ್ಟಿಂಗ್‌ ನಡೆಸಲಾಗುತ್ತಿದ್ದು, ಎಸ್‌ಯುವಿ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗುತ್ತಿರುವ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಈಗಾಗಲೇ ಯುರೋಪಿನ ರಾಷ್ಟ್ರಗಳಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದ್ದು, ಹೊಸ ಕಾರಿನ ಬೆಲೆಗಳನ್ನು ಸಹ ಬಹಿರಂಗಪಡಿಸಲಾಗಿದೆ. ಯುಕೆ(ಯುನೈಟೆಡ್ ಕಿಂಗ್‌ಡಮ್)ನಲ್ಲಿ ಎಂಜಿ ಇಜೆಡ್ಎಸ್ ಕಾರನ್ನು ಭಾರತೀಯ ಬೆಲೆಗಳಲ್ಲಿ ರೂ.18.36 ಲಕ್ಷದಿಂದ ರೂ.20.07 ಲಕ್ಷಕ್ಕೆ ಬಿಡುಗಡೆ ಮಾಡಲಾಗಿದ್ದು, ಚೀನಿ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ ಜೆಡ್ಎಸ್ ಕಾರು ಮಾದರಿಯಲ್ಲೇ ಎಲೆಕ್ಟ್ರಿಕ್ ವರ್ಷನ್ ಇಜೆಡ್ಎಸ್ ಮಾದರಿಯು 5 ಆಸನ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಸದ್ಯ ಯುರೋಪ್ ಮಾರುಕಟ್ಟೆಗಳಲ್ಲಿ ಬಹಿರಂಗಗೊಳಿಸಲಾಗಿರುವ ಇಜೆಡ್ಎಸ್ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಅಂತ್ಯಕ್ಕೆ ಗ್ರಾಹಕರ ಕೈಸೆರಲಿದ್ದು, ಭಾರತದಲ್ಲಿ ಇದೇ ಕಾರು 2019ರ ಡಿಸೆಂಬರ್ ಆರಂಭದಲ್ಲಿ ಮಾರಾಟದಲ್ಲಿ ಲಭ್ಯವಿರಲಿದೆ ಎನ್ನಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಯುಕೆನಲ್ಲಿ ಬಹಿರಂಗಪಡಿಸಲಾದ ಇಜೆಡ್ಎಸ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯವನ್ನು ಹೊಂದಿದ್ದು, 50kW ಪ್ಲಗ್ ಮೂಲಕ ಕೇವಲ 43 ನಿಮಿಷಗಳಲ್ಲಿ ಶೇ.80 ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದು ಈ ಸೌಲಭ್ಯವು ಈ ಕಾರಿನಲ್ಲಿದೆ. ಈ ಮೂಲಕ 141-ಬಿಎಚ್‌ಪಿ ಮತ್ತು 352-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಉತ್ತಮ ಪರ್ಫಾಮೆನ್ಸ್ ತೊರಬಲ್ಲ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾಗಿ ಹೊರಹೊಮ್ಮಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 262 ಕಿ.ಮಿ ಮೈಲೇಜ್ ಹಿಂದಿರುಗಿಸುವುದಾಗಿ ಎಂಜಿ ಮೋಟಾರ್ ಸಂಸ್ಥೆಯು ಭರವಸೆ ನೀಡಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಹಾಗೆಯೇ ಇಜೆಡ್ಎಸ್ ಮಾದರಿಯ ಮೇಲೆ ಎಂಜಿ ಮೋಟಾರ್ ಸಂಸ್ಥೆಯು ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ. ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯವನ್ನು ಪಡೆದುಕೊಂಡಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಇದೇ ಮಾದರಿಯು ಭಾರತದಲ್ಲೂ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಈಗಾಗಲೇ ಇಜೆಡ್ಎಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡುವುದರ ಮೂಲಕ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಸಹ ಅಂತಿಮಗೊಳಿಸುತ್ತಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಮಾಹಿತಿಗಳ ಪ್ರಕಾರ ಎಂಜಿ ಮೋಟಾರ್ ಸಂಸ್ಥೆಯು ಭಾರತದಲ್ಲಿ ಬಿಡುಗಡೆಯಾಗಲಿರುವ ಇಜೆಡ್ ಕಾರಿನ ತಾಂತ್ರಿಕ ಅಂಶಗಳಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆಗಳಿದ್ದು, ಸದ್ಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ 452 ಕಿ.ಮಿ ಮೈಲೇಜ್ ಸಾಮಾರ್ಥ್ಯದ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿಗೆ ಪ್ರತಿ ಸ್ಪರ್ಧಿಯಾಗಿ ಇನ್ನಷ್ಟು ಹೆಚ್ಚಿನ ಮಟ್ಟದ ಬ್ಯಾಟರಿ ಸೌಲಭ್ಯವನ್ನ ಒದಗಿಸಬಹುದು ಎನ್ನಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಭಾರತದಲ್ಲಿ ಬಿಡುಗಡೆಯಾಗಲಿರುವ ಇಜೆಡ್ಎಸ್ ಮಾದರಿಯು ಪ್ರತಿಚಾರ್ಜ್‌ಗೆ 320ರಿಂದ 350ಕಿ.ಮಿ ಮೈಲೇಜ್ ಸಾಮಾರ್ಥ್ಯವನ್ನು ಒದಗಿಸುವ ಬ್ಯಾಟರಿ ಬಳಕೆಯ ನೀರಿಕ್ಷೆಗಳಿದ್ದು, ಕಾರಿನ ಬೆಲೆಯು ರೂ.19 ಲಕ್ಷದಿಂದ ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಇದಲ್ಲದೇ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಮೇಲೆ ಈ ಹಿಂದೆ ಇದ್ದ ಜಿಎಸ್‌ಟಿ ಪ್ರಮಾಣವನ್ನು ಶೇ. 12ರಿಂದ ಇದೀಗ ಶೇ.5 ಕ್ಕೆ ಇಳಿಕೆ ಮಾಡಲಾಗಿದ್ದು, ಇದು ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆ ಮಾಡಲು ಸಾಕಷ್ಟು ಸಹಕಾರಿಯಾಗಿದೆ. ಈ ಬಗ್ಗೆ ಎಲೆಕ್ಟ್ರಕ್ ವಾಹನ ಉತ್ಪಾದನಾ ಸಂಸ್ಥೆಗಳು ಹರ್ಷ ವ್ಯಕ್ತಪಡಿಸಿದ್ದು, ಇವಿ ವಾಹನ ಖರೀದಿಸುವ ಗ್ರಾಹಕರನ್ನು ಸೆಳೆಯಲು ಜಿಎಸ್‌ಟಿ ಇಳಿಕೆ ಮಾಡಿರುವುದು ಮಹತ್ವದ ಬದಲಾವಣೆಗೆ ಮೊದಲ ದಿಟ್ಟಹೆಜ್ಜೆ ಎಂದು ಹೇಳಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ

ಇದರಿಂದ ಬಿಡುಗಡೆ ಹಂತದಲ್ಲಿರುವ ಎಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರ ಸರ್ಕಾರ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗಲಿದ್ದು, ಎಂಜಿ ಮೋಟಾರ್ ಸೇರಿದಂತೆ ಹಲವು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ಮುಂಬರುವ ಮುಂದಿನ ಕೆಲವೇ ದಿನಗಳಲ್ಲಿ ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಉತ್ಸಾಹದಲ್ಲಿವೆ.

Source: Barodian boy Jatin/YouTube

Most Read Articles

Kannada
English summary
MG eZS pure electric SUV has been spotted on test in India again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X