ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಸಧ್ಯ ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಮೊದಲ ವಾಹನವನ್ನು ಬಿಡುಗಡೆ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಬೇಡಿಕೆಯನ್ನು ಪಡೆಯುತ್ತಿರುವ ಎಂಜಿ ಮೋಟಾರ್ಸ್ ಸಂಸ್ಥೆಯು, ದೇಶಿಯ ಮಾರುಕಟ್ಟೆಯಲ್ಲಿ ಇನ್ನು ನಾಲ್ಕು ಹೊಸ ವಾಹನಗಳನ್ನು ಬಿಡುಗಡೆಗೊಳಿಸಲಿದೆ. ಸಂಸ್ಥೆಯು ಬಿಡುಗಡೆಗೊಳಿಸಲಿರುವ ಹೊಸ ಕಾರುಗಳಲ್ಲಿ ಇಜೆಡ್ಎಸ್ ಎಂಬ ಎಲೆಕ್ಟ್ರಿಕ್ ಕಾರು ಕೂಡಾ ಒಂದಾಗಿದ್ದು, ಈ ಕಾರಿನ ಎಂಜಿನ್ ಕಾರ್ಯಕ್ಷಮತೆಯನ್ನು ಪರೀಕ್ಷಿಸುವ ಕಾರ್ಯದಲ್ಲಿದೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಹೀಗಿರುವಾಗ ಎಂಜಿ ಮೋಟಾರ್‍ ಬಿಡುಗಡೆಗೊಳಿಸಲಿರುವ ತಮ್ಮ ಮೊದಲ ಎಲೆಕ್ಟ್ರಿಕ್ ಕಾರು ಇಜೆಡ್ಎಸ್ ಮಾದರಿಯು ಇದೆ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಳ್ಳಲಿದೆ. ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಎರಡನೆಯ ವಾಹನವಾದ ಇಜೆಡ್ಎಸ್ ಕಾರನ್ನು ಮೊದಲಿಗೆ ದೆಹಲಿ ಎನ್‍ಸಿಆರ್, ಮುಂಬೈ, ಹೈದೆರಾಬಾದ್, ಬೆಂಗಳೂರು ಮತ್ತು ಅಹ್ಮದಾಬಾದ್‍‍ನಲ್ಲಿ ಬಿಡುಗಡೆ ಮಾಡಲಿದ್ದು, ನಂತರ ಬೇಡಿಕೆಯ ಅನುಸಾರ ಇನ್ನಿತರೆ ನಗರಗಳಲ್ಲಿ ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್ಸ್.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಸದ್ಯ ಮಹೀಂದ್ರಾ ಸಂಸ್ಥೆ ಮಾತ್ರ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮಾರುತಿ ಸುಜುಕಿ, ಹ್ಯುಂಡೈ, ನಿಸ್ಸಾನ್, ಎಂಜಿ ಮೋಟಾರ್ ಸಂಸ್ಥೆಗಳು ಸಹ ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುವ ನಿಟ್ಟಿನಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳ ರೋಡ್ ಟೆಸ್ಟಿಂಗ್ ನಡೆಸುತ್ತಿವೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಎಂಜಿ ಮೋಟಾರ್ ಇಂಡಿಯಾದ ಅಧ್ಯಕ್ಷ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆರ ರಾಜೀವ್ ಚಾಬಾರವರು ಇವಿ ಕಾರಿನ ಬಗ್ಗೆ ಮಾತನಾಡುತ್ತಾ, ನಾವು ಕಾರಿನ ಉತ್ಪಾನೆಗಾಗಿ ತಡ ಮಾಡುವುದಿಲ್ಲ, ಏಕೆಂದರೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆಯು ಭವಿಷ್ಯದಲ್ಲಿ ಅಧಿಕವಾಗಲಿದೆ. ಇವಿ ಕಾರನ್ನು ಉತ್ಪಾದನೆ ಮಾಡಲು ನಮ್ಮಲ್ಲಿ ಉಪಕರಣಗಳು ಇವೆ. ಆದುದರಿಂದ ನಾವು ಇಜೆಡ್ಎಸ್ ಕಾರಿನ ಉತ್ಪಾದನೆ ಮಾದುವಲ್ಲಿ ತಡ ಮಾಡುವುದಿಲ್ಲವೆಂದು ಹೇಳಿದ್ದಾರೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇವುಗಳಲ್ಲಿ ಕೆಲವು ದುಬಾರಿ ಬೆಲೆಯೊಂದಿಗೆ ಉತ್ತಮ ಮೈಲೇಜ್ ಪ್ರೇರಣೆಯ ಬ್ಯಾಟರಿ ಸೌಲಭ್ಯ ಹೊಂದಲಿದ್ದು, ಇನ್ನು ಕೆಲವು ಕಾರು ಮಾದರಿಗಳು ಕೈಗೆಟುಕುವ ಬೆಲೆಗಳೊಂದಿಗೆ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯುವ ತವಕದಲ್ಲಿವೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇದರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ತನ್ನ ಕಾರು ಉತ್ಪನ್ನಗಳನ್ನು ಮಾರಾಟಕ್ಕೆ ಸಿದ್ದವಾಗುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಇದೇ ತಿಂಗಳ ಕೊನೆಯಲ್ಲಿ ತನ್ನ ಮೊದಲ ಕಾರು ಹೆಕ್ಟರ್ ಎಸ್‌ಯುವಿ ಬಿಡುಗಡೆಗೊಳಿಸುತ್ತಿದ್ದು, ತದನಂತರ ಡಿಸೆಂಬರ್‌ ಕೊನೆಯಲ್ಲಿ ಮೊದಲ ಎಲೆಕ್ಟ್ರಿಕ್ ಆವೃತ್ತಿಯಾದ ಇಜೆಡ್ಎಸ್ ಕಾರನ್ನು ಕೂಡಾ ಬಿಡುಗಡೆ ಮಾಡುವ ಸುಳಿವು ನೀಡಿರುವುದಲ್ಲೇ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಗೂ ಚಾಲನೆ ನೀಡಿದೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇಜೆಡ್ಎಸ್ ಎಲೆಕ್ಟ್ರಿಕ್ ಹೊರತುಪಡಿಸಿ ಸಾಮಾನ್ಯ ಮಾದರಿಯ ಜೆಡ್ಎಸ್ ಕಾರು ಈಗಾಗಲೇ ಚೀನಿ ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿದ್ದು, ಮೂಲ ಕಾರಿನ ಮಾದರಿಯಲ್ಲೇ ವಿನೂತನ ವಿನ್ಯಾಸಗಳನ್ನು ಹೊತ್ತುಬರುತ್ತಿರುವ ಇಜೆಡ್ಎಸ್ ಕೂಡಾ ಅತ್ಯುತ್ತಮ ಮೈಲೇಜ್ ರೇಂಜ್‌ ಪ್ರೇರಣೆಯ ಬ್ಯಾಟರಿ ಸೌಲಭ್ಯಗಳನ್ನು ಹೊಂದಿರಲಿದೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಮಾಹಿತಿಗಳ ಪ್ರಕಾರ, ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಮೈಲೇಜ್ ರೇಂಜ್ ಆಧಾರದ ಮೇಲೆ ದೆಹಲಿ ಎಕ್ಸ್‌ಶೋರೂಂ ಪ್ರಕರ ರೂ.12 ಲಕ್ಷದಿಂದ ರೂ.15 ಲಕ್ಷದೊಳಗೆ ಬೆಲೆ ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ಕೊನಾ ಮತ್ತು ಎಕ್ಸ್‌ಯುವಿ ಕಾರುಗಳಿಂತಲೂ ಇದು ಅತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆಯೆಂತೆ.

ಚೀನಾ ಮಾರುಕಟ್ಟೆಯಲ್ಲಿರುವ ಎಂ‍‍ಜಿ ಇ‍‍ಝಡ್‍ಎಸ್ ಕಾರಿನಲ್ಲಿ 150 ಬಿ‍‍ಹೆಚ್‍‍ಪಿ ಉತ್ಪಾದಿಸುವ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಕಾರಿನಲ್ಲೂ ಅಳವಡಿಸುವ ಸಂಭವವಿದೆ. ಎಂ‍‍ಜಿ ಕಂಪನಿಯ ಪ್ರಕಾರ 0-50 ಕಿ.ಮೀ ವೇಗವನ್ನು 3.1 ಸೆಕೆಂಡುಗಳಲ್ಲಿ ಕ್ರಮಿಸುತ್ತದೆ. ಒಂದು ಬಾರಿಗೆ ಚಾರ್ಜ್ ಮಾಡಿದರೆ 335 ಕಿ.ಮೀ ದೂರವನ್ನು ಕ್ರಮಿಸಲಿದೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಆದರೆ ದೇಶಿಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರತಿ ಚಾರ್ಜ್‌ಗೆ 300ಕಿ.ಮಿ ನೀಡುವ ಆರಂಭಿಕ ಆವೃತ್ತಿಯನ್ನು ಇಲ್ಲವೇ ಪ್ರತಿ ಚಾರ್ಜ್‌ಗೆ 420 ಕಿ.ಮಿ ಮೈಲೇಜ್ ನೀಡುವ ಹೈ ಎಂಡ್ ಮಾದರಿಯನ್ನು ಖರೀದಿಸಬಹುದಾಗಿದ್ದು, ಹೊಸ ಕಾರಿನ ಬೆಲೆಗಳು ಕೂಡಾ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಭಾರೀ ಅಗ್ಗವಾಗಿರಲಿವೆ.

ಬೆಂಗಳೂರು ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಸದ್ಯ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಇವಿ ಕಾರುಗಳಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಇಲ್ಲದ ಹಿನ್ನಲೆಯಲ್ಲಿ ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳಲಾದ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಮರುಅಭಿವೃದ್ಧಿಪಡಿಸಿ ಮಾರಾಟ ಮಾಡುವ ಯೋಜನೆಯಲ್ಲಿರುವಾಗ ಎಂಜಿ ಮೋಟಾರ್ ಸಂಸ್ಥೆಯು ಪೂರ್ಣ ಪ್ರಮಾಣದಲ್ಲಿ ದೇಶಿಯ ಮಾರುಕಟ್ಟೆಯಲ್ಲೇ ಅಭಿವೃದ್ಧಿಪಡಿಸಲಿದೆ.

Source: AutoCarIndia

More from DriveSpark

Article Published On: Wednesday, July 3, 2019, 12:58 [IST]
English summary
MG eZS Electric SUV To Be Launched In 5 Major Cities Including Bengaluru By End 2019. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+