ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ದೇಶಾದ್ಯಂತ ಸದ್ಯ ಕೈಗೆಟುವಕುವ ದರಗಳಲ್ಲಿ ಅತಿ ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಗ್ರಾಹಕರು ಎದುರು ನೋಡುತ್ತಿದ್ದು, ಎಂಜಿ ಮೋಟಾರ್ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿವೆ.

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಭಾರತದಲ್ಲಿ ಸದ್ಯ ಮಹೀಂದ್ರಾ ಸಂಸ್ಥೆ ಮಾತ್ರ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮಾರುತಿ ಸುಜುಕಿ, ಹ್ಯುಂಡೈ, ನಿಸ್ಸಾನ್, ಎಂಜಿ ಮೋಟಾರ್ ಸಂಸ್ಥೆಗಳು ಸಹ ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸಲಿವೆ. ಇವುಗಳಲ್ಲಿ ಕೆಲವು ದುಬಾರಿ ಬೆಲೆಯೊಂದಿಗೆ ಉತ್ತಮ ಮೈಲೇಜ್ ಪ್ರೇರಣೆಯ ಬ್ಯಾಟರಿ ಸೌಲಭ್ಯ ಹೊಂದಲಿದ್ದು, ಇನ್ನು ಕೆಲವು ಕಾರು ಮಾದರಿಗಳು ಕೈಗೆಟುಕುವ ಬೆಲೆಗಳೊಂದಿಗೆ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯುವ ತವಕದಲ್ಲಿವೆ.

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಆಟೋಮೊಬೈಲ್ ಕ್ಷೇತ್ರದಲ್ಲಿ ಇತ್ತೀಚೆಗೆ ಭಾರೀ ಬದಲಾವಣೆ ಕಂಡುಬರುತ್ತಿರುವುದರಿಂದ ಹೊಸ ಕಾರು ಉತ್ಪಾದನಾ ಸಂಸ್ಥೆಗಳು ಭಾರತದಲ್ಲಿ ತಮ್ಮ ಜನಪ್ರಿಯ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಬೃಹತ್ ಯೋಜನೆಗಳನ್ನು ರೂಪಿಸುತ್ತಿದ್ದು, ಇವುಗಳಲ್ಲಿ ಎಂಜಿ (ಮೊರಿಸ್ ಗ್ಯಾರೆಜ್) ಮೋಟಾರ್ ಕೂಡಾ ಭಾರತೀಯ ಗ್ರಾಹಕರಲ್ಲಿ ಕುತೂಹಲ ಹುಟ್ಟುಹಾಕಿದೆ.

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಯುರೋಪ್ ಮಾರುಕಟ್ಟೆಯಲ್ಲಿ 1924ರಿಂದಲೇ ಎಂಜಿ ಮೋಟಾರ್ ಸಂಸ್ಥೆಯು ಆಟೋ ಉದ್ಯಮದಲ್ಲಿ ಕಾರ್ಯಚರಣೆ ನಡೆಸುತ್ತಿದ್ದು, ಇತ್ತೀಚೆಗೆ ಹಣಕಾಸು ಮುಗ್ಗಟ್ಟು ಎದುರಿಸಿತ್ತು. ಈ ಹಿನ್ನೆಲೆ ನಷ್ಟದ ಸುಳಿಯಲ್ಲಿದ್ದ ಬ್ರಿಟಿಷ್ ಆಟೋ ಉತ್ಪಾದನಾ ಸಂಸ್ಥೆಯನ್ನು ಚೀನಾದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಎಸ್‌ಎಐಸಿ( SAIC) ಸಂಸ್ಥೆಯು ಸ್ಪಾಧೀನಪಡಿಸಿಕೊಂಡು ಭಾರತದಲ್ಲಿ ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುತ್ತಿದೆ.

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಭಾರತದಲ್ಲಿ ಮೊದಲ ಬಾರಿಗೆ ತನ್ನ ಕಾರು ಉತ್ಪನ್ನಗಳನ್ನು ಮಾರಾಟಕ್ಕೆ ಸಿದ್ದವಾಗುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಇದೇ ವರ್ಷ ಜೂನ್‌ನಲ್ಲಿ ತನ್ನ ಮೊದಲ ಹೆಕ್ಟರ್ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸುತ್ತಿದ್ದು, ತದನಂತರ ಡಿಸೆಂಬರ್‌ ಕೊನೆಯಲ್ಲಿ ಮೊದಲ ಎಲೆಕ್ಟ್ರಿಕ್ ಆವೃತ್ತಿಯಾದ ಇಜೆಡ್ಎಸ್ ಕಾರನ್ನು ಕೂಡಾ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಇಜೆಡ್ಎಸ್ ಎಲೆಕ್ಟ್ರಿಕ್ ಹೊರತುಪಡಿಸಿ ಸಾಮಾನ್ಯ ಮಾದರಿಯ ಜೆಡ್ಎಸ್ ಕಾರು ಈಗಾಗಲೇ ಚೀನಿ ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿದ್ದು, ಮೂಲ ಕಾರಿನ ಮಾದರಿಯಲ್ಲೇ ವಿನೂತನ ವಿನ್ಯಾಸಗಳನ್ನು ಹೊತ್ತುಬರುತ್ತಿರುವ ಇಜೆಡ್ಎಸ್ ಕೂಡಾ ಅತ್ಯುತ್ತಮ ಮೈಲೇಜ್ ರೇಂಜ್‌ ಪ್ರೇರಣೆಯ ಬ್ಯಾಟರಿ ಸೌಲಭ್ಯಗಳನ್ನು ಹೊಂದಿರಲಿದೆ.

MOST READ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಖರೀದಿಸಿದ ಬೆಂಝ್ ದುಬಾರಿ ಕಾರಿನ ವಿಶೇಷತೆ ಏನು ಗೊತ್ತಾ?

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಹೀಗಾಗಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರತಿ ಚಾರ್ಜ್‌ಗೆ 300ಕಿ.ಮಿ ನೀಡುವ ಆರಂಭಿಕ ಆವೃತ್ತಿಯನ್ನು ಇಲ್ಲವೇ ಪ್ರತಿ ಚಾರ್ಜ್‌ಗೆ 420 ಕಿ.ಮಿ ಮೈಲೇಜ್ ನೀಡುವ ಹೈ ಎಂಡ್ ಮಾದರಿಯನ್ನು ಖರೀದಿಸಬಹುದಾಗಿದ್ದು, ಹೊಸ ಕಾರಿನ ಬೆಲೆಗಳು ಕೂಡಾ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಭಾರೀ ಅಗ್ಗವಾಗಿರಲಿವೆ.

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಸದ್ಯ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿರುವ ಹ್ಯುಂಡೈ ಕೊನಾ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರುಗಳ ಮೈಲೇಜ್ ರೇಂಜ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸುತ್ತಿರುವ ಇಜೆಡ್ಎಸ್ ಕಾರು ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅಚ್ಚರಿಯ ಬೆಲೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ ಎನ್ನಲಾಗಿದೆ.

MOST READ: ಟ್ರಾಫಿಕ್ ನಿಯಮಗಳನ್ನ ಉಲ್ಲಂಘನೆ ಮಾಡಿದ ಈ ಕಾರಿನ ಮೇಲಿರುವ ದಂಡ ಎಷ್ಟು ಗೊತ್ತಾ.?

ಅಗ್ಗದ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು..!

ಮಾಹಿತಿಗಳ ಪ್ರಕಾರ, ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಮೈಲೇಜ್ ರೇಂಜ್ ಆಧಾರದ ಮೇಲೆ ದೆಹಲಿ ಎಕ್ಸ್‌ಶೋರೂಂ ಪ್ರಕರ ರೂ.12 ಲಕ್ಷದಿಂದ ರೂ.15 ಲಕ್ಷದೊಳಗೆ ಬೆಲೆ ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ಕೊನಾ ಮತ್ತು ಎಕ್ಸ್‌ಯುವಿ ಕಾರುಗಳಿಂತಲೂ ಇದು ಅತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆಯೆಂತೆ.

Most Read Articles

Kannada
English summary
MG Motors Unveils India-bound eZS EV — Launch Confirmed For December-2019. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X