ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಎಂಜಿ ಮೋಟಾರ್ ಸಂಸ್ಥೆಯು ಹೆಕ್ಟರ್ ಎಸ್‌ಯುವಿ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆ ಮಾಡುವುದಕ್ಕೆ ಸಜ್ಜುಗೊಳ್ಳುತ್ತಿದ್ದು, ಇದೇ ವರ್ಷ ಡಿಸೆಂಬರ್ ಅಂತ್ಯದಲ್ಲಿ ಬಹುನೀರಿಕ್ಷಿತ ಜೆಡ್ಎಸ್ ಎಸ್‌ಯುವಿ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಎಂಜಿ ಸಂಸ್ಥೆಯು ಹೆಕ್ಟರ್ ನಂತರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಹೊಸ ಕಾರು ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಆಯ್ಕೆಯಲ್ಲೂ ಸಹ ಬಿಡುಗಡೆಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆಯ ಕುರಿತಾಗಿ ಕೇಂದ್ರ ಸಾರಿಗೆ ಇಲಾಖೆಯಿಂದ ಪ್ರಮಾಣ ಪತ್ರವನ್ನು ಸಹ ಪಡೆದುಕೊಂಡಿರುವುದು ಹೊಸ ಕಾರು ವಿವಿಧ ಮಾದರಿಯ ಎಂಜಿನ್ ಆಯ್ಕೆಯನ್ನು ಹೊಂದಿರುವುದು ಬಹುತೇಕ ಖಚಿತವಾಗಿದೆ.

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಬಿಡುಗಡೆಯಾಗಲಿರುವ ಜೆಡ್ಎಸ್ ಎಸ್‌ಯುವಿ ಕಾರು ಹೆಕ್ಟರ್ ಮಾದರಿಯಲ್ಲೇ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಜೊತೆಗೆ ಎಲೆಕ್ಟ್ರಿಕ್ ವರ್ಷನ್‌ನಲ್ಲೂ ಬಿಡುಗಡೆಯಾಗಲಿದೆ.

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಪೆಟ್ರೋಲ್ ಮತ್ತು ಹೈಬ್ರಿಡ್ ಎರಡು ಎಂಜಿನ್‌ಗಳು ಬಿಎಸ್-6 ವೈಶಿಷ್ಟ್ಯತೆಗೆ ಸಮನಾದ ಯುರೋ-6 ನಿಯಮ ಅನುಸಾರ ಅಭಿವೃದ್ದಿ ಹೊಂದಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಇದರೊಂದಿಗೆ ಹೊಸ ಕಾರು ಹೆಕ್ಟರ್ ಕಾರಿಗಿಂತಲೂ ತಳಮಟ್ಟದ ಕಾರು ಮಾದರಿಯಾಗಿ ರಸ್ತೆಗಿಳಿಯಲಿದ್ದು, ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಹಾಗೆಯೇ ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಈ ಮೂಲಕ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಕಿಯಾ ಸೆಲ್ಟೊಸ್ ಮತ್ತು ಟಾಟಾ ಹ್ಯಾರಿಯರ್‌ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ. 9.50 ಲಕ್ಷದಿಂದ ರೂ. 12.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ಹೆಲ್ಮೆಟ್ ಹಾಕಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಟ್ರಾಫಿಕ್ ಪೊಲೀಸರು..!

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ಜೆಡ್ಎಸ್ ಬಿಡುಗಡೆಗೂ ಮುನ್ನ ಎಲೆಕ್ಟ್ರಿಕ್ ಜೆಡ್ಎಸ್ ಕಾರು ಬಿಡುಗಡೆಯಾಗಲಿದ್ದು, ತದನಂತರವಷ್ಟೇ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರವಷ್ಟೇ ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ರಸ್ತೆಗಿಳಿಯಲಿವೆ.

MOST READ: ಹೆದ್ದಾರಿಗಳಲ್ಲಿ ವಾಹನ ಚಾಲನೆ ವೇಳೆ ಓವರ್‌ಟೆಕ್ ಮಾಡುವ ಮುನ್ನ ಹುಷಾರ್..!

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 320ರಿಂದ 350ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.18 ಲಕ್ಷದಿಂದ ರೂ.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ಮಾಲಿನ್ಯ ತಡೆಗೆ ಹೊಸ ಉಪಕರಣ ಅಭಿವೃದ್ಧಿಪಡಿಸಿದ ಐಐಟಿ ಎಂಜಿನಿಯರ್

ವರ್ಷಾಂತ್ಯದಲ್ಲಿ ಎಂಜಿ ಮೋಟಾರ್ ಇಜೆಡ್ಎಸ್ ಕಾರು ಬಿಡುಗಡೆ ಪಕ್ಕಾ..!

ಹಾಗೆಯೇ ಇಜೆಡ್ಎಸ್ ಮೇಲೆ ಎಂಜಿ ಮೋಟಾರ್ ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ. ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯ ಇರಲಿದೆ.

Most Read Articles

Kannada
English summary
MG eZS SUV India Launch Scheduled For Early 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X