Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೆಕ್ಟರ್ 7 ಸೀಟರ್ ಬಿಡುಗಡೆ ಮಾಹಿತಿ ಬಹಿರಂಗ ಪಡಿಸಿದ ಎಂಜಿ ಮೋಟಾರ್
ಎಂಜಿ ಮೋಟಾರ್ ಸಂಸ್ಥೆಯು ಕಳೆದ ತಿಂಗಳ ಹಿಂದಷ್ಟೇ ಐದು ಆಸನವುಳ್ಳ ಹೆಕ್ಟರ್ ಎಸ್‌ಯುವಿ ಆವೃತ್ತಿಯನ್ನು ಅನಾವರಣಗೊಳಿಸುವ ಮೂಲಕ ಇದೇ ತಿಂಗಳು ಕೊನೆಯಲ್ಲಿ ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ರೂ.15 ಲಕ್ಷದಿಂದ ರೂ.20 ಲಕ್ಷದೊಳಗೆ ದೊರೆಯುವ 7 ಸೀಟರ್ ಎಸ್‌ಯುವಿ ಆವೃತ್ತಿಗಳಿಗೆ ವಿಶೇಷ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಇದೀಗ ಬಿಡುಗಡೆಯಾಗುತ್ತಿರುವ ಐದು ಆಸನವುಳ್ಳ ಹೆಕ್ಟರ್ ಕಾರನಲ್ಲೇ ಮುಂಬರುವ ದಿನಗಳಲ್ಲಿ ಏಳು ಆಸನ ಮಾದರಿಯ ಆಯ್ಕೆಯನ್ನು ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದು ಎಂಜಿ ಮೋಟಾರ್ ಹಿರಿಯ ಅಧಿಕಾರಿಗಳು ಮಾಧ್ಯಮ ಸಂವಾದದಲ್ಲಿ ದೃಡಪಡಿಸಿದ್ದಾರೆ.

ಇಷ್ಟು ದಿನಗಳ ಕಾಲ ಹೆಕ್ಟರ್ ಮಾದರಿಯು ಕೇವಲ ಐದು ಆಸನವುಳ್ಳ ಮಾದರಿಯಲ್ಲಿ ಮಾತ್ರ ಬಿಡುಗಡೆಯಾಗುತ್ತೆ ಎಂದುಕೊಂಡಿದ್ದ ಎಸ್‌ಯುವಿ ಪ್ರಿಯರಿಗೆ ಎಂಜಿ ಮೋಟಾರ್ ಹೊಸ ಸುದ್ದಿ ನೀಡಿದ್ದು, ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಿ ಸಿದ್ದವಾಗಿರುವ ಏಳು ಆಸನವುಳ್ಳ ಟಾಟಾ ಹ್ಯಾರಿಯರ್(ಕ್ಯಾಸಿನಿ) ಕಾರಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಮಾಹಿತಿಗಳ ಪ್ರಕಾರ, ಇದೇ ತಿಂಗಳು ಜೂನ್ ಕೊನೆಯಲ್ಲಿ ಐದು ಆಸನವುಳ್ಳ ಹೆಕ್ಟರ್ ಕಾರು ಬಿಡುಗಡೆಯಾಗಿದ್ದು, ಏಳು ಆಸನ ಮಾದರಿಯನ್ನು 2020ರ ಜನವರಿ ಆರಂಭದಲ್ಲಿ ಬಿಡುಗಡೆ ಮಾಡಲಾಗುತ್ತೆ ಎಂಬ ಮಾಹಿತಿ ಲಭ್ಯವಾಗಿದೆ.

ಹೀಗಾಗಿ ಅನಾವರಣಗೊಳಿಸಲಾದ ಐದು ಆಸನವುಳ್ಳ ಮಾದರಿಗಿಂತ ಏಳು ಆಸನವುಳ್ಳ ಕಾರು ಗಾತ್ರದಲ್ಲಿ ದೊಡ್ಡದಾಗಿರಲಿದ್ದು, ಇತರೆ ಎಸ್‌ಯುವಿ ಕಾರುಗಳಿಂತಲೂ ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸಲಾಗುವುದು ಎನ್ನಲಾಗಿದೆ. ಇದರಿಂದ ಹೊಸ ಕಾರು ಇನೋವಾ ಕ್ರಿಸ್ಟಾ ಕಾರಿಗೂ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.
ಇನ್ನು ಐದು ಆಸನವುಳ್ಳ ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಬರಲಿದ್ದರೆ ಡೀಸೆಲ್ ಮಾದರಿಯು 2.0-ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದುಕೊಳ್ಳಲಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ರಿಮೋಟ್ ಕಾರ್ ಆಪರೇಷನ್, ಸ್ಮಾರ್ಟ್ ಸಿಮ್ ಪ್ರೇರಿತ ಇಂಟರ್‌ನೆಟ್ ಸೌಲಭ್ಯ, 10.4-ಇಂಚಿನ ಟಚ್ ಇನ್ಪೋಟೈನ್ ಸಿಸ್ಟಂ, 8-ಸ್ಪೀಕರ್ಸ್‌ಗಳು, ಆನ್ ಲೈನ್ ನೆವಿಗೇಷನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 7-ಇಂಚಿನ ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ, ಪವರ್ ಅಡ್ಜೆಸ್ಟೆಬಲ್ ರಿಯರ್ ವ್ಯೂ ಮಿರರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಪಡೆದುಕೊಂಡಿದೆ.

ಜೊತೆಗೆ ಹೊಸ ಕಾರಿನಲ್ಲಿ ರೂಫ್ ರೈಲ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಎರಡು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ರಿಯರ್ ಎಸಿ ವೆಂಟ್ಸ್, ಸನ್ ಗ್ಲಾಸ್ ಹೊಲ್ಡರ್, ಡ್ರೈವರ್ ಆರ್ಮ್ ರೆಸ್ಟ್, ಪನಾರೊಮಿಕ್ ಸನ್‌ರೂಫ್, 17-ಇಂಚಿನ ಅಲಾಯ್ ವೀಲ್ಹ್, ರಿಯರ್ ಸೀಟ್ ಆರ್ಮ್ ರೆಸ್ಟ್, ಆರು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೌಲಭ್ಯದೊಂದಿಗೆ ಲೆದರ್ ಸೀಟ್‌ಗಳನ್ನು ಜೋಡಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆಗೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಕ್ರೂಸ್ ಕಂಟ್ರೊಲರ್ ISOFIX ಚೈಲ್ಡ್ ಸೀಟ್, ಎಲೆಕ್ಟ್ರಿಕ್ ಹ್ಯಾಂಡಲ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರ್ಸ್ ಈ ಕಾರಿನಲ್ಲಿವೆಯೆಂತೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಕಾರಿನ ಬೆಲೆಗಳು(ಅಂದಾಜು)
ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14. 50 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 18 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.