ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಎಂಜಿ ಮೋಟಾರ್ಸ್ ಸಂಸ್ಥೆಯು ತಮ್ಮ ಮೊದಲ ಎಸ್‍ಯುವಿ ಕಾರನ್ನು ಬಿಡುಗಡೆ ಮಾಡುವ ಮೂಲಕ ದೇಶಿಯ ಮಾರುಕಟ್ಟೆಗೆ ಕಾಲಿಟ್ಟಿದ್ದು, ಬಿಡುಗಡೆಗೂ ಮುನ್ನವೇ ಈ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿತ್ತು. ಎನ್‍ಡಿಟಿವಿ ಆಟೋ ವರದಿಗಳ ಪ್ರಕಾರ ಎಂಜಿ ಮೋಟಾರ್ಸ್ ತಮ್ಮ ಹೆಕ್ಟರ್ ಕಾರಿಗೆ ಕೇವಲ 23 ದಿನಗಳಲ್ಲಿ ಸುಮಾರು 10,000ಕ್ಕು ಹೆಚ್ಚಿನ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ.

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಸಧ್ಯ ಈ ಸೆಗ್ಮೆಂಟ್‍ನಲ್ಲಿ ಮುನ್ನುಗ್ಗುತ್ತಿರುವ ಟಾಟಾ ಹ್ಯಾರಿಯರ್ ಕಾರನು ಹಿಂದಿಕ್ಕಲು ಬಿಡುಗಡೆಗೊಂಡ ಎಂಜಿ ಹೆಕ್ಟರ್ ಎಸ್‍ಯುವಿ ಕಾರು ಹ್ಯಾರಿಯರ್ ಕಾರಿಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 12.18 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಟಾಟಾ ಹ್ಯಾರಿಯರ್ ಕಾರು ಮೊನ್ನೆಯಷ್ಟೆ ಮೊದಲ ಬಾರಿಗೆ ಬೆಲೆ ಏರಿಕೆ ಕಂಡಿದ್ದು, ಎಕ್ಸ್ ಶೂರುಂ ಪ್ರಕಾರ ರೂ. 13 ಲಕ್ಷಕ್ಕೆ ಮಾರಾಟವಾಗುತ್ತಿದೆ.

ಎಂಜಿ ಹೆಕ್ಟರ್ ಕಾರಿನ ಉತ್ಪಾದನೆಯನ್ನು ಸಂಸ್ಥೆಯ ಹಲಾಲ್ ಪ್ಲಾಂಟ್‍ನಲ್ಲಿ ಮಾಡುತ್ತಿದ್ದು, ಈ ಪ್ಲಾಂಟ್ ಅನ್ನು ಜಿಎಂ ಸಂಸ್ಥೆಯಿಂದ ಸುಮಾರು ರೂ.2200 ಕೋಟಿ ವೆಚ್ಚದಲ್ಲಿ ಖರೀದಿ ಮಾಡಲಾಗಿದೆ. ಈ ಪ್ಲಾಂಟ್ ಅನ್ನು ಎಂಜಿ ಮೋಟಾರ್ಸ್ ತಮ್ಮ ಹೆಕ್ಟರ್ ಮತ್ತು ತಮ್ಮ ಭವಿಷ್ಯದ ಉತ್ಪನ್ನಗಳನ್ನು ಉತ್ಪಾದಿಸಲು ಖರೀದಿಸಲಾಗಿದ್ದು, ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ಎಂದದಿನಿಂದ ಡೆಲಿವರಿ ನೀಡಲಿದೆ ಎಂದು ಕಾಯ್ದು ನೋಡಬೇಕಿದೆ.

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಸದ್ಯಕ್ಕೆ ಬಿಎಸ್-4 ವೈಶಿಷ್ಟ್ಯತೆಗಳಿಗೆ ಅನುಗುಣವಾಗಿಯೇ ಹೊಸ ಎಂಜಿನ್ ಸೌಲಭ್ಯ ಹೊಂದಿರುವ ಹೆಕ್ಟರ್ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಬಿಎಸ್-6 ಎಂಜಿನ್‌ಗೆ ಉನ್ನತಿಕರಣ ಹೊಂದಲಿದ್ದು, ಸ್ಮಾಟ್ ಹೈಬ್ರಿಡ್ ತಂತ್ರಜ್ಞಾನವು ಮೈಲೇಜ್ ಪ್ರಮಾಣದಲ್ಲಿ ಶೇ.14ರಷ್ಟು ಹೆಚ್ಚಳಕ್ಕೆ ಕಾರಣವಾದರೆ ಶೇ.11 ರಷ್ಟು ಕಾರ್ಬನ್ ಹೊರಸೂಸುವ ಪ್ರಮಾಣವನ್ನು ತಗ್ಗಿಸಲಿದೆ.

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಕಾರಿನ ಮೈಲೇಜ್

*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್‌ಬಾಕ್ಸ್) - ಪ್ರತಿ ಲೀಟರ್‌ಗೆ 15.81 ಕಿ.ಮಿ *ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಜೊತೆಗೆ ಹೆಕ್ಟರ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬಂದಿದ್ದು, ಬ್ಲ್ಯಾಕ್ ಕಲರ್ ಥೀಮ್ ಇಂಟಿರಿಯರ್‌ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಪೋಟೈನ್‌ಮೆಂಟ್ ಕಂಟ್ರೋಲ್, ನೆವಿಗೇಷನ್ ನಿಯಂತ್ರಿಸಬಲ್ಲ 10.4-ಇಂಚಿನ ವರ್ಟಿಕಲ್ ಸ್ಟ್ರಾಕ್ಡ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೈ ನೀಡಲಾಗಿದೆ.

MOST READ: ಹೊಸ ಮೋಟಾರ್ ವೆಹಿಕಲ್ ಕಾಯ್ದೆಗೆ ಸಿಕ್ತು ಗ್ರೀನ್ ಸಿಗ್ನಲ್ - ಯಾವ ನಿಯಮ ಉಲ್ಲಂಘನೆಗೆ ಎಷ್ಟು ದಂಡ.?

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

MOST READ: ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

MOST READ: 2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಕೇವಲ 23 ದಿನಗಳಲ್ಲಿ ಹತ್ತು ಸಾವಿರ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

More from DriveSpark

Article Published On: Thursday, June 27, 2019, 17:19 [IST]
English summary
MG Hector Bags 10,000 Bookings In Junst 23 Days. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+