Just In
- 5 min ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- 44 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 1 hr ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 1 hr ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರನ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
Don't Miss!
- News Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
21 ಸಾವಿರಕ್ಕು ಹೆಚ್ಚಿನ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್ - ತಾತ್ಕಾಲಿಕವಾಗಿ ಬುಕ್ಕಿಂಗ್ ಬಂದ್
ಎಂಜಿ ಹೆಕ್ಟರ್ ಎಸ್ಯುವಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಉತ್ತಮ ಬೇಡಿಕೆಯನ್ನು ಪಡೆಯುತ್ತಿದ್ದು, ವರದಿ ಪ್ರಕಾರ ಇಲ್ಲಿಯವರೆಗೂ 21,000 ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಮಾರುಕಟ್ಟೆಗೆ ಲಗ್ಗೆಯಿಟ್ಟ ಎಂಜಿ ಹೆಕ್ಟರ್ ಕಾರು ರೂ. 12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಈ ಕಾರಿನ ಪೆಟ್ರೋಲ್ ಡಿಸಿಟಿ ಮಾಡಲ್ಗಳಿಗೆ ಡಿಮ್ಯಾಂಡ್ ಹೆಚ್ಚಿದೆ.
ಎಂಜಿ ಹೆಕ್ಟರ್ ಎಸ್ಯುವಿ ಕಾರಿಗೆ ಹೆಚ್ಚುತ್ತಿರುವ ಬೇಡಿಕೆಯ ಅನುಸಾರ ಸಂಸ್ಥೆಯು ಸುಮಾರು 7 ರಿಂದ 9 ತಿಂಗಳ ಕಾಯುವಿಕೆಯ ಅವಧಿಯನ್ನು ಘೋಷಿಸಿದೆ. ಆದರೆ ಈಗಾಗಲೇ ಡೀಲರ್ಗಳು ಈ ಕಾರಿನ ಡೆಲಿವರಿ ಕಾರ್ಯವನ್ನು ಸಹ ಪ್ರಾರಂಭಿಸಲಾಗಿದ್ದು, ಈ ವರ್ಷಕ್ಕೆ ಆಗಬೇಕಾಗ ಬುಕ್ಕಿಂಗ್ಗಳು ಆದ ಕಾರಣ ಸಂಸ್ಥೆಯು ತಾತ್ಕಾಲಿಕವಾಗಿ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಬಂದ್ ಮಾಡಲಾಗಿದೆ.
ಏಕೆಂದರೆ ಗುಜರಾತ್ನಲ್ಲಿನ ತಮ್ಮ ಪ್ಲಾಂಟ್ನಲ್ಲಿ ತಿಂಗಳಿಗೆ ಕೇವಲ 3000 ಕಾರುಗಳನ್ನು ಉತ್ಪಾದನೆ ಮಾಡುವ ಅವಕಾಶವಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬುಕ್ಕಿಂಗ್ಸ್ ಬಂದ ಕಾರಣ ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇಷ್ಟರ ಮಟ್ಟಿಗೆ ಜನಪ್ರೀತಯೆತೆಯನ್ನು ಪಡೆಯುತ್ತಿರುವ ಈ ಕಾರಿನಲ್ಲಿ ಅಂತಹ ವಿಶೇಷತೆ ಏನಿದೆ.?
ಎಂಜಿ ಹೆಕ್ಟರ್ ದೇಶಿಯ ಮಾರುಕಟ್ಟೆಯಲ್ಲಿ ಕಾಲಿಟ್ಟಿದ್ದು, ಟಾಟಾ ಹ್ಯಾರಿಯರ್ ಗಿಂತಲೂ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಕೇವಲ ಇದೊಂದು ಕಾರಣ ಮಾತ್ರವಲ್ಲದೆಯೆ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್ಫುಲ್ ಎಂಜಿನ್, ಬಯ್ಬಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ ಕಿಲೋಮೀಟರ್, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್ ಎಂಬ ಆಕರ್ಷಕ ಕೊಡುಗೆಗಳನ್ನು ಸಹ ನೀಡುತ್ತಿದೆ.
ಎಂಜಿನ್ ಸಾಮರ್ಥ್ಯ
ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮೂಲಕ 170-ಬಿಎಚ್ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.
ಕಾರಿನ ಮೈಲೇಜ್
*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್ಬಾಕ್ಸ್)- ಪ್ರತಿ ಲೀಟರ್ಗೆ 13.96 ಕಿ.ಮಿ
*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್ಬಾಕ್ಸ್)- ಪ್ರತಿ ಲೀಟರ್ಗೆ 14.16 ಕಿ.ಮಿ
*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್ಬಾಕ್ಸ್) - ಪ್ರತಿ ಲೀಟರ್ಗೆ 15.81 ಕಿ.ಮಿ
*ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್ಬಾಕ್ಸ್)- ಪ್ರತಿ ಲೀಟರ್ಗೆ 17.41 ಕಿ.ಮಿ
ಫೀಚರ್ಸ್
ಜೊತೆಗೆ ಹೆಕ್ಟರ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಹೊತ್ತುಬಂದಿದ್ದು, ಬ್ಲ್ಯಾಕ್ ಕಲರ್ ಥೀಮ್ ಇಂಟಿರಿಯರ್ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಪೋಟೈನ್ಮೆಂಟ್ ಕಂಟ್ರೋಲ್, ನೆವಿಗೇಷನ್ ನಿಯಂತ್ರಿಸಬಲ್ಲ 10.4-ಇಂಚಿನ ವರ್ಟಿಕಲ್ ಸ್ಟ್ರಾಕ್ಡ್ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಡಿಸ್ಪ್ಲೈ ನೀಡಲಾಗಿದೆ.
ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.
ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.
ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
ಸೇಫ್ಟಿ ಫೀಚರ್ಸ್
ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್ಬ್ಯಾಗ್ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.