ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಕಳೆದ ವಾರವಷ್ಟೇ ಬಿಡುಗಡೆಯಾಗಲಿರುವ ತನ್ನ ಹೊಸ ಹೆಕ್ಟರ್ ಕಾರನ್ನು ಅನಾವರಣಗೊಳಿಸಿರುವ ಎಂಜಿ ಮೋಟಾರ್ ಸಂಸ್ಥೆಯು ಇದೀಗ ಅಧಿಕೃತವಾಗಿ ರೂ. 51 ಸಾವಿರದೊಂದಿಗ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಜೂನ್ ಎರಡನೇ ವಾರದಲ್ಲಿ ಹೊಸ ಕಾರನ್ನು ಬಿಡುಗಡೆ ಮಾಡುವುದಾಗಿ ಸುಳಿವು ಕೊಟ್ಟಿದೆ.

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳ ಪ್ರೇರಿತ ಕಾರು ಮಾದರಿಯಾಗಿರುವ ಎಂಜಿ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಂಡಿರುವ ಟಾಟಾ ಹ್ಯಾರಿಯರ್, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನಲ್ಲಿ ಒದಗಿಸಲಾಗಿರುವ ಅತ್ಯಾಧುನಿಕ ತಾಂತ್ರಿಕ ಸೌಲಭ್ಯಗಳು ಎಸ್‌ಯುವಿ ಪ್ರಿಯರ ಪ್ರಮುಖ ಆಕರ್ಷಣೆಯಾಗಿರಲಿವೆ.

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಎಂಜಿನ್ ಸಾಮರ್ಥ್ಯ

ಹೆಕ್ಟರ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಇದರಲ್ಲಿ ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 141-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಹಾಗೆಯೇ ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಪಡೆದುಕೊಂಡಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಜೊತೆಗೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈಎಂಡ್ ಆವೃತ್ತಿಯು 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಹೊಂದಿರಲಿದ್ದು, ಉತ್ತಮ ಪರ್ಫಾಮೆನ್ಸ್ ನೀಡಬಲ್ಲದು.

ಕಾರಿನ ಮೈಲೇಜ್

* ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

* ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

* ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಕಾರಿನ ಉದ್ದಳತೆ

ಮಾರುಕಟ್ಟೆಯಲ್ಲಿರುವ ಇತರೆ ಸಬ್ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲೇ ವಿಭಿನ್ನ ಗಾತ್ರ ಹೊಂದಿರುವ ಹೆಕ್ಟರ್ ಕಾರು 4,655ಎಂಎಂ ಉದ್ದ, 1,835ಎಂಎಂ ಅಗಲ, 1,760ಎಂಎಂ ಎತ್ತರ, 2,750ಎಂಎಂ ವೀಲ್ಹ್‌ಬೆಸ್ ಮತ್ತು 192ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಇದರೊಂದಿಗೆ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ರಿಮೋಟ್ ಕಾರ್ ಆಪರೇಷನ್, ಸ್ಮಾರ್ಟ್ ಸಿಮ್ ಪ್ರೇರಿತ ಇಂಟರ್‌ನೆಟ್ ಸೌಲಭ್ಯ, 10.4-ಇಂಚಿನ ಟಚ್ ಇನ್ಪೋಟೈನ್ ಸಿಸ್ಟಂ, 8-ಸ್ಪೀಕರ್ಸ್‌ಗಳು, ಆನ್ ಲೈನ್ ನೆವಿಗೇಷನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 7-ಇಂಚಿನ ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ, ಪವರ್ ಅಡ್ಜೆಸ್ಟೆಬಲ್ ರಿಯರ್ ವ್ಯೂ ಮಿರರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಜೊತೆಗೆ ಹೊಸ ಕಾರಿನಲ್ಲಿ ರೂಫ್ ರೈಲ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಎರಡು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ರಿಯರ್ ಎಸಿ ವೆಂಟ್ಸ್, ಸನ್ ಗ್ಲಾಸ್ ಹೊಲ್ಡರ್, ಡ್ರೈವರ್ ಆರ್ಮ್ ರೆಸ್ಟ್, ಪನಾರೊಮಿಕ್ ಸನ್‌ರೂಫ್, 17-ಇಂಚಿನ ಅಲಾಯ್ ವೀಲ್ಹ್, ರಿಯರ್ ಸೀಟ್ ಆರ್ಮ್ ರೆಸ್ಟ್, ಆರು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೌಲಭ್ಯದೊಂದಿಗೆ ಲೆದರ್ ಸೀಟ್‌ಗಳನ್ನು ಜೋಡಿಸಲಾಗಿದೆ.

MOST READ: ಬ್ರೇಕ್ ಫೇಲ್ ಆದಾಗ ಜೀವ ಉಳಿಸಿಕೊಳ್ಳಲು ಈ ಟಿಪ್ಸ್ ಖಂಡಿತ ನಿಮ್ಮ ಸಹಾಯಕ್ಕೆ ಬರುತ್ತೆ..!

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆಗೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಕ್ರೂಸ್ ಕಂಟ್ರೊಲರ್ ISOFIX ಚೈಲ್ಡ್ ಸೀಟ್, ಎಲೆಕ್ಟ್ರಿಕ್ ಹ್ಯಾಂಡಲ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರ್ಸ್ ಈ ಕಾರಿನಲ್ಲಿವೆಯೆಂತೆ.

ಎಂಜಿ ಹೆಕ್ಟರ್ ಎಸ್‌ಯುವಿ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್‌ ಆರಂಭ

ಕಾರಿನ ಬೆಲೆಗಳು(ಅಂದಾಜು)

ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 19 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Source:autocar

Most Read Articles

Kannada
English summary
MG Hector Bookings Open. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X