ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದ ಹೆಕ್ಟರ್ ಕಾರಿಗಾಗಿ ಎಂಜಿ ಮೋಟಾರ್ ಸಂಸ್ಥೆಯು ಅಕ್ಟೋಬರ್‌ನಲ್ಲಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭಿಸಲು ನಿರ್ಧರಿಸಿದೆ. ಸದ್ಯಕ್ಕೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಎಂಜಿ ಸಂಸ್ಥೆಯು ಕಾರು ವಿತರಣೆ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ಮಹತ್ವದ ಯೋಜನೆ ಕೈಗೊಳ್ಳಲಾಗಿದೆ.

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಜುಲೈ ಮಧ್ಯಂತರದಲ್ಲಿ ಬಿಡುಗಡೆಗೊಂಡಿದ್ದ ಹೆಕ್ಟರ್ ಸದ್ಯ ಮಾರುಕಟ್ಟೆಯಲ್ಲಿ ಅಚ್ಚರಿ ಬೆಳವಣಿಯೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಅಗಸ್ಟ್ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆಯೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ. ಈಗಾಗಲೇ ಹೆಕ್ಟರ್ ಖರೀದಿಗಾಗಿ ಸುಮಾರು 28 ಸಾವಿರಕ್ಕೂ ಹೆಚ್ಚು ಗ್ರಾಹಕರು ರೂ.50 ಸಾವಿರ ಮುಂಗಡ ಪಾವತಿಸಿ ಖರೀದಿಯ ನೀರಿಕ್ಷೆಯಲ್ಲಿದ್ದರೂ, ಕಡಿಮೆ ಕಾರು ಉತ್ಪಾದನಾ ಸಾಮಾರ್ಥ್ಯದಿಂದಾಗಿ ಎಂಜಿ ಸಂಸ್ಥೆಯು ಗ್ರಾಹಕರ ಬೇಡಿಕೆಯನ್ನು ಪೂರೈಸಲು ಹರಸಾಹಸ ಪಡುತ್ತಿದೆ.

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಉತ್ಪಾದನೆಗಿಂತ ಬೇಡಿಕೆ ಹೆಚ್ಚಿದ್ದರಿಂದ ತಾತ್ಕಲಿಕವಾಗಿ ಬುಕ್ಕಿಂಗ್ ಪ್ರಕ್ರಿಯೆ ಬಂದ್ ಮಾಡಿರುವ ಎಂಜಿ ಮೋಟಾರ್ ಸಂಸ್ಥೆಯು ಶೀಘ್ರದಲ್ಲೇ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾರಂಭ ಮಾಡುವುದಾಗಿ ಹೇಳಿದ್ದು, ಕಾರು ಉತ್ಪಾದನಾ ಸಾಮಾರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಗುಜುರಾತ್‌ನಲ್ಲಿರುವ ಎಂಜಿ ಕಾರು ಉತ್ಪಾದನಾ ಘಟಕದಲ್ಲಿ ತಿಂಗಳಿಗೆ ಕೇವಲ 2 ಸಾವಿರ ಕಾರುಗಳ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು. ಈ ಹಿನ್ನಲೆ ಉತ್ಪಾದನಾ ಘಟಕವನ್ನು ವಿಸ್ತರಣೆ ಮಾಡುತ್ತಿರುವುದರಿಂದ ಶೀಘ್ರದಲ್ಲೇ ಕಾರುಗಳ ನಿರ್ಮಾಣ ಪ್ರಮಾಣವು ಕೂಡಾ ಹೆಚ್ಚಳವಾಗಲಿದೆ.

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಇದೇ ಕಾರಣಕ್ಕೆ ಗ್ರಾಹಕರ ಬೇಡಿಕೆಯೆಂತೆ ಕನಿಷ್ಠ ಪ್ರಮಾಣದ ಕಾರು ಮಾರಾಟ ಮಾಡಲು ಸಹ ಹರಸಾಹಸ ಪಡುತ್ತಿರುವ ಎಂಜಿ ಸಂಸ್ಥೆಯು ಮುಂದಿನ ತಿಂಗಳಿನಿಂದ ಕಾರು ಉತ್ಪಾದನಾ ಪ್ರಮಾಣವನ್ನು 3 ಸಾವಿರದಿಂದ 4 ಸಾವಿರಕ್ಕೆ ಹೆಚ್ಚಿಸುವ ಗುರಿಹೊಂದಿದ್ದು, ಅತಿ ಕಡಿಮೆ ಅವಧಿಯಲ್ಲಿ ಕಾರು ವಿತರಣೆಗಾಗಿ ಭರ್ಜರಿ ಸಿದ್ದತೆ ನಡೆಸಿದೆ. ಒಂದು ವೇಳೆ ಎಂಜಿ ನಿರ್ಮಾಣ ಮಾಡುತ್ತಿರುವ ಹೊಸ ಕಾರು ಉತ್ಪಾದನಾ ಘಟಕವು ಶೀಘ್ರದಲ್ಲೇ ಕಾರ್ಯನಿರ್ವಹಣೆ ಆರಂಭಿಸಿದ್ದಲ್ಲಿ ಕಾಯುವಿಕೆಯ ಅವಧಿಯು ಗಣನೀಯವಾಗಿ ತಗ್ಗಲಿದೆ.

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಇನ್ನು ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ ಎಂಜಿ ಹೆಕ್ಟರ್ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು ಈ ಕಾರಿನ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 16.68 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ. ಈ ಕಾರಿನ ಪೆಟ್ರೋಲ್ ಡಿಸಿಟಿ ಮಾಡೆಲ್‍ಗಳಿಗೆ ಹೆಚ್ಚು ಬೇಡಿಕೆಯಿದ್ದು, ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

MOST READ: ವಾಹನ ಮಾರಾಟದಲ್ಲಿ ಸತತ ಕುಸಿತ- ಕಾರು ಉತ್ಪಾದನೆಗೆ ಮತ್ತೆ ಬ್ರೇಕ್ ಹಾಕಿದ ಮಾರುತಿ ಸುಜುಕಿ

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಎಂಜಿನ್ ಸಾಮರ್ಥ್ಯ

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಹೊಸ ಮೋಟಾರ್ ವೆಹಿಕಲ್ ಕಾಯ್ದೆ ಜಾರಿ- ಮೊದಲ ದಿನವೇ ಬೆಚ್ಚಿಬಿದ್ದ ವಾಹನ ಸವಾರರು..!

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

MOST READ: 26 ವರ್ಷಗಳ ಬಳಿಕ ಸ್ವಂತ ಕಾರು ಖರೀದಿಸಿದ ಮಹೀಂದ್ರಾ ಎಂಡಿ

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

ಹೆಕ್ಟರ್ ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಪುನಾರಂಭಿಸಲಿದೆ ಎಂಜಿ ಮೋಟಾರ್

ಇದರೊಂದಿಗೆ ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Article Published On: Thursday, September 5, 2019, 12:23 [IST]
English summary
MG Hector Bookings Restart In October. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+