2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಕಳೆದ ತಿಂಗಳ ಹಿಂದಷ್ಟೇ ತನ್ನ ಬಹುನೀರಿಕ್ಷಿತ ಹೆಕ್ಟರ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರಿನಲ್ಲಿ ಸದ್ಯಕ್ಕೆ ಬಿಎಸ್-4 ಎಂಜಿನ್ ಒದಗಿಸಿದ್ದು, 2020ರ ಆರಂಭದಲ್ಲಿ ಬಿಎಸ್-6 ಆವೃತ್ತಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಹೆಕ್ಟರ್ ಕಾರಿನ ಎಂಜಿನ್ ಪರ್ಫಾಮೆನ್ಸಾ ಕುರಿತಾದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಎಂಜಿ ಮೋಟಾರ್ ಇಂಡಿಯಾ ಅಧ್ಯಕ್ಷ ರಾಜೀವ್ ಛಬ್ಬಾ ಅವರು 2020ರ ವೇಳೆಗೆ ಬಿಎಸ್-6 ಎಂಜಿನ್ ಬಿಡುಗಡೆ ಮಾಡಲಿದ್ದು, ಕೇಂದ್ರ ಸರ್ಕಾರದ ಹೊಸ ಸುರಕ್ಷಾ ನಿಯಮದಂತೆ ಹೆಕ್ಟರ್ ಕಾರಿನಲ್ಲಿ ಗರಿಷ್ಠ ಮಟ್ಟದ ಸುರಕ್ಷತೆಯನ್ನು ಒದಗಿಸಿರುವುದಾಗಿ ಹೇಳಿಕೊಂಡಿದ್ದಾರೆ. 2020ರ ಏಪ್ರಿಲ್ 1 ಬಿಎಸ್-6 ನಿಯಮವು ಕಡ್ಡಾಯವಾಗಲಿದ್ದು, ಹೊಸ ನಿಯಮದಂತೆ ಹೊಸ ಎಂಜಿನ್ ಮತ್ತು ಪರ್ಫಾಮೆನ್ಸ್‌ನಲ್ಲಿ ಸಾಕಷ್ಟು ಬದಲಾವಣೆಗಳಾಗುವುದಲ್ಲದೆ ಮೈಲೇಜ್ ಪ್ರಮಾಣ ಹೆಚ್ಚಳದೊಂದಿಗೆ ಮಾಲಿನ್ಯ ಸಾಕಷ್ಟು ತಗ್ಗಲಿದೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಇನ್ನು ಹೆಕ್ಟರ್ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ಎಂಜಿನ್ ಸೌಲಭ್ಯವನ್ನು ಹೊತ್ತು ಬಂದಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಆಯ್ಕೆಗಳನ್ನು ಹೊಂದಿರುವ ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.18 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 16.88 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಸ್ಟೈಲ್, ಸೂಪರ್, ಸ್ಮಾರ್ಟ್ ಮತ್ತು ಶಾರ್ಪ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಹೆಕ್ಟರ್ ಕಾರು ಖರೀದಿಗೆ ಲಭ್ಯವಿದ್ದು, ಪ್ರತಿ ವೆರಿಯೆಂಟ್‌ಗಳಲ್ಲೂ ಬೆಲೆಗೆ ಅನುಗುಣವಾಗಿ ವಿವಿಧ ಮಾದರಿಯ ತಾಂತ್ರಿಕ ಅಂಶಗಳನ್ನು ಜೋಡಿಸಲಾಗಿದೆ. ಇದರಲ್ಲಿ ಸ್ಮಾರ್ಟ್ ಹೈಬ್ರಿಡ್ ಮಾದರಿಗಳು ಸಾಕಷ್ಟು ನೀರಿಕ್ಷೆ ಹುಟ್ಟುಹಾಕಿದ್ದು, ಐಷಾರಾಮಿ ಸೌಲಭ್ಯಗಳು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಿದೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಕಾರಿನ ಮೈಲೇಜ್

*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್‌ಬಾಕ್ಸ್) - ಪ್ರತಿ ಲೀಟರ್‌ಗೆ 15.81 ಕಿ.ಮಿ

*ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಜೊತೆಗೆ ಹೆಕ್ಟರ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬಂದಿದ್ದು, ಬ್ಲ್ಯಾಕ್ ಕಲರ್ ಥೀಮ್ ಇಂಟಿರಿಯರ್‌ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಪೋಟೈನ್‌ಮೆಂಟ್ ಕಂಟ್ರೋಲ್, ನೆವಿಗೇಷನ್ ನಿಯಂತ್ರಿಸಬಲ್ಲ 10.4-ಇಂಚಿನ ವರ್ಟಿಕಲ್ ಸ್ಟ್ರಾಕ್ಡ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೈ ನೀಡಲಾಗಿದೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಬಿಎಸ್-6 ವರ್ಷನ್..!

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Most Read Articles

Kannada
English summary
MG Hector SUV to get BS6 compliant engines in early 2020. Read in Kannada.
Story first published: Saturday, July 6, 2019, 16:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X