ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಎಂಜಿ ಹೆಕ್ಟರ್ ಎಸ್‍ಯುವಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಉತ್ತಮ ಬೇಡಿಕೆಯನ್ನು ಪಡೆಯುತ್ತಿದ್ದು, ವರದಿ ಪ್ರಕಾರ ಇಲ್ಲಿಯವರೆಗೂ 21,000 ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಮಾರುಕಟ್ಟೆಗೆ ಲಗ್ಗೆಯಿಟ್ಟ ಎಂಜಿ ಹೆಕ್ಟರ್ ಕಾರು ರೂ. 12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಈ ಕಾರಿನ ಪೆಟ್ರೋಲ್ ಡಿಸಿಟಿ ಮಾಡಲ್‍ಗಳಿಗೆ ಡಿಮ್ಯಾಂಡ್ ಹೆಚ್ಚಿದೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಅಧಿಕ ಸಂಖ್ಯೆಯಲ್ಲಿ ಎಂಜಿ ಹೆಕ್ಟರ್ ಕಾರಿಗೆ ಬುಕ್ಕಿಂಗ್ ಬರುತ್ತಿರುವ ಕಾರಣ ಸಂಸ್ಥೆಯು ಕೆಲ ದಿನಗಳ ಕಾಲ ಈ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ನಿಲ್ಲಿಸಲಾಗಿತ್ತು. ಎಕೆಂದರೆ ಈ ಕಾರನ್ನು ಉತ್ಪಾದನೆ ಮಾಡುವ ಪ್ಲಾಂಟ್‍ನಲ್ಲಿ ತಿಂಗಳಿಗೆ ಕೇವಲ 2000 ಯೂನಿಟ್ ಮಾತ್ರ ಉತ್ಪಾನೆ ಮಾಡುವ ಅವಕಾಶವಿದ್ದು, 21000 ಕಾರುಗಳ ಉತ್ಪಾನೆಗಾಗಿ ಸಮಯ ಬೇಕಾಗುತ್ತದೆ ಎಂದು ದೇಶಲ್ಲಿರುವ ಕೆಲ ರಾಜ್ಯಗಳಲ್ಲಿ ಸುಮಾರು 7 ರಿಂದ 9 ತಿಂಗಳು ಕಾಯುವಿಕೆಯ ಅವಧಿಯನ್ನು ನೀಡಲಾಗಿತ್ತು.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಹೀಗಿರುವಾಗ ಬುಕ್ಕಿಂಗ್ ಮಾಡಿಕೊಂಡು ಕಾರಿನ ವಿತರಣೆಗಾಗಿ ಕಾಯುತ್ತಿರುವ ಗ್ರಾಹಕರಿಗೆ ಸಂಸ್ಥೆಯು ಅವರವರ ಪರ್ಸನಲ್ ಮೈಲ್‍‍ಗೆ ಪ್ರತಿಕ್ರಿಯಿಸುತ್ತಿದ್ದು, ಬುಕ್ಕಿಂಗ್ ಮಾಡಿಕೊಳ್ಳಲಾದ ಕಾರುಗಳು ಅತೀ ಶಿಘ್ರವೇ ಗ್ರಾಹಕರ ಕೈ ಸೇರಲಿದೆ ಎಂದು ಮೈಲ್ ಅನ್ನು ರವಾನಿಸಲಾಗುತ್ತಿದೆ. ಮೈಲ್ ಸ್ವೀಕರಿಸಿದ ಗ್ರಾಹಕರೊಬ್ಬರು ತಮ್ಮಗೆ ಬಂದ ಮೈಲ್ ಅನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.

Image Courtesy: Rohit Sharma

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಮೇಲೆ ಹೇಳಿರುವ ಹಾಗೆ ಸಧ್ಯಕ್ಕೆ ಹಲಾಲ್ ಪ್ಲಾಂಟ್‍ನಲ್ಲಿ ತಿಂಗಳಿಗೆ ಕೇವಲ 2000 ಯೂನಿಟ್ ಉತ್ಪಾದನೆ ಮಾಡುವ ಅವಕಾಷವಿದ್ದು, 3000 ಕಾರುಗಳನ್ನು ಉತ್ಪಾದನೆ ಮಾಡುವ ಹಾಗೆ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಕೂಡಾ ವರದಿಗಳು ಹೇಳುತ್ತಿದೆ. ಆದರೂ ಸಹ 3000 ಯೂನಿಟ್ ಪ್ರತೀ ತಿಂಗಳಿಗೆ ಉತ್ಪಾದನೆ ಮಾಡಿದ್ದೇ ಆದಲ್ಲಿ ಲೆಕ್ಕ ಹಾಕಿದರೆ ಕಾಯುವಿಕೆಯ ಅವಧಿ 7 ತಿಂಗಳ ವರೆಗೆ ಇರಬಹುದು.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಏಕೆಂದರೆ 3000 ಕಾರುಗಳನ್ನು ಉತ್ಪಾದನೆ ಮಾಡಿದರೂ ಸಹ ಸಂಸ್ಥೆಯು ಈ ಕಾರನ್ನು ಎಲ್ಲ ಗ್ರಾಹಕರಿಗು ತಲುಪಿಸಲಿದೆ ಎಂದು ಹೇಳಲಾಗುವಿದಿಲ್ಲ, ಹಾಗೆಯೆ ಸಂಸ್ಥೆಯು ಶೀಘ್ರವೇ ಈ ಕಾರಿನ ಬುಕ್ಕಿಂಗ್ ಅನ್ನು ಪುನಃ ಪ್ರಾರಂಭಿಸಲಿದ್ದು, ಬುಕ್ಕಿಂಗ್ ಪುನಃ ಪ್ರಾರಂಭಿಸುವ ದಿನದ ಬಗ್ಗೆ ಸಂಸ್ಥೆಯು ಇನ್ನು ಯಾವುದೇ ಮಾಹಿತಿಯನ್ನು ನೀಡಲಿಲ್ಲ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಇನ್ನು ಈ ಕಾರಿನ ಬಗ್ಗೆ ಹೇಳುವುದಾದರೆ ಎಂಜಿ ಹೆಕ್ಟರ್ ದೇಶಿಯ ಮಾರುಕಟ್ಟೆಯಲ್ಲಿ ಕಾಲಿಟ್ಟಿದ್ದು, ಟಾಟಾ ಹ್ಯಾರಿಯರ್ ಗಿಂತಲೂ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಕೇವಲ ಇದೊಂದು ಕಾರಣ ಮಾತ್ರವಲ್ಲದೆಯೆ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬಯ್‍ಬಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್ ಎಂಬ ಆಕರ್ಷಕ ಕೊಡುಗೆಗಳನ್ನು ಸಹ ನೀಡುತ್ತಿದೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಎಂಜಿನ್ ಸಾಮರ್ಥ್ಯ

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಕಾರಿನ ಮೈಲೇಜ್

*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್‌ಬಾಕ್ಸ್) - ಪ್ರತಿ ಲೀಟರ್‌ಗೆ 15.81 ಕಿ.ಮಿ

*ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಫೀಚರ್ಸ್

ಜೊತೆಗೆ ಹೆಕ್ಟರ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬಂದಿದ್ದು, ಬ್ಲ್ಯಾಕ್ ಕಲರ್ ಥೀಮ್ ಇಂಟಿರಿಯರ್‌ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಪೋಟೈನ್‌ಮೆಂಟ್ ಕಂಟ್ರೋಲ್, ನೆವಿಗೇಷನ್ ನಿಯಂತ್ರಿಸಬಲ್ಲ 10.4-ಇಂಚಿನ ವರ್ಟಿಕಲ್ ಸ್ಟ್ರಾಕ್ಡ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೈ ನೀಡಲಾಗಿದೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಹೆಕ್ಟರ್ ಕಾರಿನ ವಿತರಣೆ ಬಗ್ಗೆ ಗ್ರಾಹಕರಿಗೆ ಸ್ಪಷ್ಟನೆ ನೀಡಿದ ಎಂಜಿ ಮೋಟಾರ್

ಸೇಫ್ಟಿ ಫೀಚರ್ಸ್

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

More from DriveSpark

Article Published On: Wednesday, July 31, 2019, 16:58 [IST]
English summary
MG Hector Delivery Assurance For Waiting Customers. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+