Just In
- 10 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 11 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 12 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 12 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಂಜಿ ಮೋಟಾರ್ 'ಹೆಕ್ಟರ್'
ದೇಶದ ಆಟೋಮೊಬೈಲ್ ಕ್ಷೇತ್ರದಲ್ಲಿ ಇತ್ತೀಚೆಗೆ ಭಾರೀ ಬದಲಾವಣೆ ಕಂಡುಬರುತ್ತಿದ್ದು, ಹೊಸ ಕಾರು ಉತ್ಪಾದನಾ ಸಂಸ್ಥೆಗಳು ಭಾರತದಲ್ಲಿ ತಮ್ಮ ಜನಪ್ರಿಯ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಬೃಹತ್ ಯೋಜನೆಗಳನ್ನು ರೂಪಿಸುತ್ತಿವೆ. ಇವುಗಳಲ್ಲಿ ಎಂಜಿ (ಮೊರಿಸ್ ಗ್ಯಾರೆಜ್) ಮೋಟಾರ್ ಕೂಡಾ ಒಂದು.
ಬ್ರಿಟನ್ ಮೂಲದ ಎಂಜಿ ಮೋಟಾರ್ ಸಂಸ್ಥೆಯು ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯ ಪ್ರವೇಶ ಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಬೃಹತ್ ಬಂಡವಾಳದೊಂದಿಗೆ ಕಳೆದ ವರ್ಷವಷ್ಟೇ ತನ್ನ ಮೊದಲ ಉತ್ಪಾದನಾ ಘಟಕವನ್ನು ಆರಂಭಗೊಳಿಸಿದ್ದಲ್ಲೇ ಇದೀಗ ಬಿಡುಗಡೆಯಾಗಲಿರುವ ಮೊದಲ ಕಾರಿನ ಟೀಸರ್ ಬಹಿರಂಗಗೊಳಿಸಿದೆ. ಹೀಗಾಗಿ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತದ ಸ್ಪಾಟ್ ಟೆಸ್ಟಿಂಗ್ ನಡೆಸಿದ್ದು, ನಮ್ಮ ಬೆಂಗಳೂರಿನಲ್ಲೂ ಕೂಡಾ ಹೊಸ ಕಾರು ಕಂಡು ಬಂದಿದ್ದು ವಿಶೇಷವಾಗಿತ್ತು.
ಹೆಕ್ಟರ್ ಹೆಸರಿನಲ್ಲಿ ಭಾರತೀಯ ರಸ್ತೆಗಳಲ್ಲಿ ಸದ್ದು ಮಾಡಲಿರುವ ಹೊಸ ಎಂಜಿ ಮೋಟಾರ್ ಕಾರು ಜೀಪ್ ಕಂಪಾಸ್ ಎಸ್ಯುವಿ ಮಾದರಿಯಲ್ಲಿ ಬಾಡಿ ಕಿಟ್ ಹೊಂದಿದ್ದು, 2019ರ ಮಧ್ಯಂತರದಲ್ಲಿ ಹೊಸ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.
ಬಿಎಸ್-6 ಎಂಜಿನ್ ಸೌಲಭ್ಯ ಹೊಂದಿರುವ ಹೊಸ ಹೆಕ್ಟರ್ ಕಾರು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್(ಎಫ್ಸಿಎ ಯಿಂದ ಎರವಲು) ಪಡೆದುಕೊಂಡಿದ್ದು, ಪೆಟ್ರೋಲ್ ಆವೃತ್ತಿಯು 160ಬಿಎಚ್ಪಿ/200ಎನ್ಎಂ ಮತ್ತು ಡೀಸೆಲ್ ಆವೃತ್ತಿಯು 170ಬಿಎಚ್ಪಿ/340ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಹೆಕ್ಟರ್ ಕಾರು ಸದ್ಯ ಇಂಡೋನೇಷ್ಯಾದಲ್ಲಿ ವುಲಿಂಗ್ ಅಲ್ಮಾಜ್ ಮತ್ತು ಚೀನಾದಲ್ಲಿ ಬಾಔನ್ 530 ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರು ಕೆಲವು ತಾಂತ್ರಿಕ ಬದಲಾವಣೆಗಳೊಂದಿಗೆ ಭಾರತದಲ್ಲಿ ಹೆಕ್ಟರ್ ಹೆಸರಿನಲ್ಲಿ ರಸ್ತೆಗಿಳಿಯುತ್ತಿದೆ.
ಇನ್ನು 1924ರಿಂದಲೇ ಎಂಜಿ ಮೋಟಾರ್ ಸಂಸ್ಥೆಯು ಆಟೋ ಉದ್ಯಮದಲ್ಲಿ ಕಾರ್ಯಚರಣೆ ನಡೆಸುತ್ತಿದ್ದು, ಇತ್ತೀಚೆಗೆ ಹಣಕಾಸು ಮುಗ್ಗಟ್ಟು ಎದುರಿಸಿತ್ತು. ಈ ಹಿನ್ನೆಲೆಯಲ್ಲಿ ನಷ್ಟದ ಸುಳಿಯಲ್ಲಿದ್ದ ಸಂಸ್ಥೆಯನ್ನು ಚೀನಾ ಮೂಲದ ಎಸ್ಎಐಸಿ( SAIC) ಸಂಸ್ಧೆಯು ಸ್ಪಾಧೀನಪಡಿಸಿಕೊಂಡು ಭಾರತದಲ್ಲಿ ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುತ್ತಿದೆ.
ಈ ಸಂಬಂಧ ತನ್ನ ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸಲು ಭಾರತದಿಂದ ಡ್ರೈವ್ಸ್ಪಾರ್ಕ್ ಸೇರಿದಂತೆ ಹಲವು ಮಾಧ್ಯಮ ಪ್ರತಿನಿಧಿಗಳಿಗೆ ಆಹ್ವಾನ ನೀಡಿದ್ದ ಎಸ್ಎಐಸಿ ಸಂಸ್ಥೆಯು, ಚೀನಾದಲ್ಲಿರುವ ತನ್ನ ಅತಿದೊಡ್ಡ ಕಾರು ಉತ್ಪಾದನಾ ಘಟಕದಲ್ಲಿ ಕಳೆದ ತಿಂಗಳ ಹಿಂದಷ್ಟೇ ವಿಶೇಷ ಕಾರ್ಯಗಾರ ಹಮ್ಮಿಕೊಂಡಿತ್ತು.
ಈ ವೇಳೆ ಭಾರತದಲ್ಲಿ ತನ್ನ ಭವಿಷ್ಯ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದ ಎಸ್ಎಐಸಿ ಸಂಸ್ಥೆಯು, ಸಿ ಸೆಗ್ಮೆಂಟ್ ಎಸ್ಯುವಿ ಕಾರುಗಳ ಮಾರಾಟದಲ್ಲಿ ಬಹುದೊಡ್ಡ ಬದಲಾವಣೆ ತರುವುದಲ್ಲದೇ ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆ ಮಾಡುವುದಾಗಿ ಮಾಹಿತಿ ಹಂಚಿಕೊಂಡಿತ್ತು.
ಹೀಗಾಗಿಯೇ ಎಲೆಕ್ಟ್ರಿಕ್ ಕಾರುಗಳು ಮತ್ತು ಕಾರುಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 5 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, 2019ರ ಎರಡನೇ ತ್ರೈಮಾಸಿಕ ಅವಧಿಗೆ ತನ್ನ ಹೊಸ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಸುಳಿವು ನೀಡಿದೆ.
MOST READ: 15 ಸಾವಿರ ಸಿಸಿ ಎಂಜಿನ್ ಸಾಮರ್ಥ್ಯದೊಂದಿಗೆ ರಸ್ತೆಗಿಳಿದ ವಿಶ್ವದ ಅತಿದೊಡ್ಡ ಮಾಡಿಫೈ ಎಸ್ಯುವಿ ಕಾರು
ಜೊತೆಗೆ ಎಂಜಿ ಮೋಟಾರ್ ಸಂಸ್ಥೆಯು 2017ರ ಸಪ್ಟೆಂಬರ್ನಲ್ಲಿಯೇ 2 ಸಾವಿರ ಕೋಟಿ ವೆಚ್ಚದಲ್ಲಿ ಗುಜರಾತಿನಲ್ಲಿ ಮೊದಲ ಕಾರು ಉತ್ಪಾದನಾ ಘಟಕವನ್ನು ಈಗಾಗಲೇ ಆರಂಭಗೊಳಿಸಿದ್ದು, ಮಧ್ಯಮ ಗಾತ್ರದ ಎಸ್ಯುವಿ, ಹ್ಯಾಚ್ಬ್ಯಾಕ್ ಮತ್ತು ಸೆಡಾನ್ ಕಾರುಗಳನ್ನು ಪರಿಚಯಿಸುವ ತವಕದಲ್ಲಿದೆ.
ಇದಕ್ಕಾಗಿ 170 ಎಕರೆ ಭೂಮಿಯನ್ನು ಕೂಡಾ ಖರೀದಿಸಲಾಗಿದ್ದು, ಪ್ರತಿ ವರ್ಷ 80 ಸಾವಿರ ಕಾರುಗಳ ಉತ್ಪಾದನೆಯ ಗುರಿ ಹೊಂದಿರುವ ಎಂಜಿ ಮೋಟಾರ್ ಸಂಸ್ಥೆಯು 2019ರ ಮೊದಲ ತ್ರೈಮಾಸಿಕ ವೇಳೆಗೆ ತನ್ನ ಹೊಸ ಉತ್ಪನ್ನಗಳನ್ನು ಬಹಿರಂಗಗೊಳಿಸಿ ತದನಂತರವಷ್ಟೇ ಬಿಡುಗಡೆ ಮಾಡಲಿದೆ.
MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!
ಜೊತೆಗೆ ದೇಶಾದ್ಯಂತ ಈಗಾಗಲೇ 45ಕ್ಕೂ ಹೆಚ್ಚು ಅಧಿಕೃತ ಕಾರು ಮಾರಾಟ ಮಳಿಗೆಗಳನ್ನು ಹೊಂದಿರುವ ಎಂಜಿ ಮೋಟಾರ್ ಸಂಸ್ಥೆಯು, ಕಾರು ಮಾರಾಟಕ್ಕೆ ಚಾಲನೆ ನೀಡುವ ವೇಳೆಗೆ 100ಕ್ಕೂ ಹೆಚ್ಚು ಡೀಲರ್ಸ್ ಹೊಂದುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಒಟ್ಟಿನಲ್ಲಿ ಮಧ್ಯಮ ಗಾತ್ರದ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯನ್ನು ಪರಿಚಯಿಸುತ್ತಿರುವ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಚೀನಾದಲ್ಲಿ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಎಸ್ಎಐಸಿ( SAIC) ಸಂಸ್ಧೆಯು ಎಂಜಿ ಮೋಟಾರ್ ಕಾರುಗಳ ಉತ್ಪಾದನೆಯ ಉಸ್ತುವಾರಿ ವಹಿಸಿರುವುದು ಮತ್ತೊಂದು ವಿಶೇಷ ಎನ್ನಬಹುದು.
Source: Rushlane