ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಸಂಸ್ಥೆಯು ಸದ್ಯ ಬೇಡಿಕೆಗೆ ತಕ್ಕಂತೆ ಹೆಕ್ಟರ್ ಕಾರು ಮಾರಾಟವನ್ನು ಹೆಚ್ಚಿಸುವ ಸಂಬಂಧ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಕಾರು ಉತ್ಪಾದನೆಯನ್ನು 2 ಸಾವಿರ ಯುನಿಟ್‌ನಿಂದ 4 ಯುನಿಟ್‌ಗೆ ಹೆಚ್ಚಳ ಮಾಡಿರುವುದು ಕಾರು ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದೆ.

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಕಳೆದ ಜೂನ್ ಅವಧಿಯಲ್ಲಿ ಬಿಡುಗಡೆಯಾದ ನಂತರ ಹೆಕ್ಟರ್ ಕಾರಿಗೆ ಭಾರೀ ಬೇಡಿಕೆಯಿದ್ದರೂ ಕಾರು ಉತ್ಪಾದನಾ ಸಾಮಾರ್ಥ್ಯ ಕಡಿಮೆ ಇದ್ದ ಪರಿಣಾಮ ತಿಂಗಳಿಗೆ ಸರಾಸರಿಯಾಗಿ 2 ಸಾವಿರ ಕಾರುಗಳನ್ನು ಮಾತ್ರವೇ ಮಾರಾಟ ಮಾಡಿದ್ದ ಎಂಜಿ ಮೋಟಾರ್ ಸಂಸ್ಥೆಯು ಇದೀಗ ಕಾರು ಉತ್ಪಾದನಾ ಘಟಕವನ್ನು ವಿಸ್ತರಣೆ ಮಾಡಿದೆ. ಹೀಗಾಗಿ ಅಕ್ಟೋಬರ್ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಹೆಕ್ಟರ್ ಕಾರು‌ ಮಾರಾಟಗೊಂಡಿದ್ದು, ಇದೇ ಮೊದಲ ಬಾರಿಗೆ 3,536 ಯುನಿಟ್ ಮಾರಾಟ ಪ್ರಮಾಣ ದಾಖಲಾಗಿದೆ.

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಎಂಜಿ ಹೆಕ್ಟರ್ ಖರೀದಿಗಾಗಿ ಈಗಾಗಲೇ 45 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ಮಾಡಿದ್ದು, ಇದರಲ್ಲಿ ಇದುವರೆಗೆ ಸುಮಾರು 10 ಸಾವಿರ ಕಾರುಗಳನ್ನು ಮಾತ್ರವೇ ವಿತರಣೆ ಮಾಡಲಾಗಿದೆ. ಇನ್ನುಳಿದ ಕಾರುಗಳನ್ನು ನಿಗದಿತ ಅವಧಿಯಲ್ಲಿ ವಿತರಣೆ ಮಾಡಲು ಕಾರು ಉತ್ಪಾದನಾ ಪ್ರಕ್ರಿಯೆಯನ್ನು ಹೆಚ್ಚಿಸಲಾಗಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಎಂಜಿ ಸಂಸ್ಥೆಯು ಗರಿಷ್ಠ ಕಾರು ಮಾರಾಟ ಮಾಡುವ ನೀರಿಕ್ಷೆಯಲ್ಲಿದೆ.

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಇನ್ನು ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 12.18 ಲಕ್ಷದಿಂದ ಆರಂಭಿಕ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಹೊಂದಿದೆ. ಗ್ರಾಹಕ ಬೇಡಿಕೆಗೆ ಅನುಗುಣವಾಗಿ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದಿದೆ. ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಹೆಕ್ಟರ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

MOST READ: ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

MOST READ: ಕೆಲವೇ ವರ್ಷಗಳ ಹಿಂದೆ ಟ್ಯಾಕ್ಸಿ ಡ್ರೈವರ್ ಆಗಿದ್ದ ಇವರು ಇದೀಗ ರೋಲ್ಸ್ ರಾಯ್ಸ್ ಕಾರಿಗೆ ಮಾಲೀಕ..!

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

MOST READ: ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಇಳಿಕೆ- ಹೆಚ್ಚಳಗೊಂಡ ಹೊಸ ವಾಹನಗಳ ಮಾರಾಟ..!

ಹೆಚ್ಚಿದ ಹೆಕ್ಟರ್ ಕಾರು ಉತ್ಪಾದನೆ- ಗರಿಷ್ಠ ಮಾರಾಟ ದಾಖಲಿಸಿದ ಎಂಜಿ ಮೋಟಾರ್

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Article Published On: Saturday, November 2, 2019, 12:45 [IST]
English summary
MG Motor India retails 3,536 units of Hector in October 2019. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+