ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು ಮಾದರಿಗಿಂತಲೂ ಸುಧಾರಿತ ತಂತ್ರಜ್ಞಾನ ಪ್ರೇರಿತ 6 ಸೀಟರ್ ಎಸ್‌ಯುವಿ ಬಿಡುಗಡೆ ಮಾಡಲು ಮುಂದಾಗಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರನ್ನು ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಹೆಕ್ಟರ್ ಪ್ಲಸ್ ಕಾರಿನಲ್ಲಿ 6 ಆಸನ ಸೌಲಭ್ಯಕ್ಕಾಗಿ ಮೂರನೇ ಸಾಲನ್ನು ನೀಡಲಾಗಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್ ನೀಡಿರುವುದು ರೋಡ್ ಟೆಸ್ಟಿಂಗ್ ವೇಳೆ ಬಹಿರಂಗಗೊಂಡಿದೆ. ಜೊತೆಗೆ ಹೊಸ ಕಾರಿನ ಹೆಸರನ್ನು ಅಂತಿಮಗೊಳಿಸುವುದಕ್ಕೂ ಮುನ್ನ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ನೋಂದಣಿಯಲ್ಲಿ ಹೆಕ್ಟರ್ ಪ್ಲಸ್ ಎನ್ನುವುದು ಬಹಿರಂಗವಾಗಿದ್ದು, ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಹೊಸ ಕಾರಿನಲ್ಲಿ ಮಧ್ಯದ ಸೀಟು ವಿಭಜನೆ ಮಾಡಿರುವುದರಿಂದ ಮೂರನೇ ಸಾಲಿನ ಸೀಟಿನಲ್ಲಿ ಕೂರುವ ಪ್ರಯಾಣಿಕರಿಗೆ ಅನುಕೂಲಕರವಾಗಲಿದ್ದು, ಹೊಸ ಕಾರು ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ರೂ. 1 ಲಕ್ಷದಿಂದ ರೂ.1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಆದರೆ ಹೊಸ ಕಾರಿನಲ್ಲಿ 5 ಸೀಟರ್ ಹೆಕ್ಟರ್ ಕಾರಿನಲ್ಲಿರುವ ಎಂಜಿನ್ ಆಯ್ಕೆಯನ್ನೇ ಮುಂದುವರಿಸಲಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಟಾ 7 ಸೀಟರ್ ಗ್ರಾವಿಟಾಸ್ ಮತ್ತು ಹ್ಯುಂಡೈ ಕ್ರೆಟಾ 7 ಸೀಟರ್ ಕಾರುಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಿದೆ.

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಜೊತೆಗೆ ಹೊಸ ಕಾರು ಮುಂಬರುವ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಹೊಸ ಎಂಜಿನ್ ಪಡೆದುಕೊಳ್ಳಲಿದ್ದು, ಹೈಬ್ರಿಡ್ ಎಂಜಿನ್ ಆಯ್ಕೆ ಸಹ ಲಭ್ಯವಿರಲಿದೆ. ಮಾಹಿತಿಗಳ ಪ್ರಕಾರ, ಹೆಕ್ಟರ್ ಪ್ಲಸ್ ಕಾರು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, 6 ಸೀಟರ್ ಮತ್ತು 7 ಸೀಟರ್ ಎಸ್‌ಯುವಿ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಇನ್ನು ಜುಲೈ ಮಧ್ಯಂತರದಲ್ಲಿ ಬಿಡುಗಡೆಗೊಂಡಿದ್ದ ಸಾಮಾನ್ಯ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಅಚ್ಚರಿ ಬೆಳವಣಿಯೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು ಈ ಕಾರಿನ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 16.68 ಲಕ್ಷದ ಬೆಲೆಯನ್ನು ಹೊಂದಿದೆ.

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಪೆಟ್ರೋಲ್ ಡಿಸಿಟಿ ಮಾಡೆಲ್‍ಗಳಿಗೆ ಹೆಚ್ಚು ಬೇಡಿಕೆಯಿದ್ದು, ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದೆ.

MOST READ: ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಹೆಕ್ಟರ್ ಕಾರು ಸದ್ಯ ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: ಕೂಲಿ ಕೆಲಸ ಮಾಡುತ್ತಿದ್ದವನು ಇಂದು ಐಷಾರಾಮಿ ಕಾರುಗಳ ಮಾಲೀಕ..!

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಪೈಪೋಟಿ ನೀಡಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೆಕ್ಟರ್ ಪ್ಲಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ 6 ಸೀಟರ್ ಎಸ್‌ಯುವಿ ಕಾರು

ಇದೇ ಎಂಜಿನ್ ಇದೀಗ ಹೊಸ 6 ಸೀಟರ್ ಕಾರು ಮಾದರಿಯಲ್ಲೂ ಮುಂದುವರಿಸುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದು, ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48 ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದೆ. ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

Source: Rushlane

Most Read Articles

Kannada
English summary
MG Hector Plus name registered for 6 seater. Read more in Kannada.
Story first published: Saturday, December 28, 2019, 16:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X