ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಭಾರತದಲ್ಲಿ ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಹೆಕ್ಟರ್ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಈ ಮಧ್ಯೆ ಹೊಸ ಕಾರಿನ ರೂಫ್ ಟಾಪ್‌ನಲ್ಲಿ ಮಳೆ ನೀರು ಸೋರುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಹೌದು, ಎಂಜಿ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಹೊಂದಿರುವ ಕಾರುಗಳಲ್ಲಿ ಒಂದಾಗಿದ್ದು, ಕೈಗೆಟುಕುವ ಬೆಲೆಗಳಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಹೊಸ ಕಾರಿಗೆ ಭಾರೀ ಬೇಡಿಕೆ ಬಂದಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಿಂದಾಗಿ ಎಂಜಿ ಹೆಕ್ಟರ್ ಗುಣಮಟ್ಟದ ಬಗ್ಗೆ ಪ್ರಶ್ನೆಗಳು ಶುರುವಾಗಿದ್ದು, ಚೀನಿ ಕಾರು ಉತ್ಪನ್ನದ ವಿರುದ್ದ ಕಾರು ಪ್ರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ವಿಡಿಯೋದಲ್ಲಿನ ಮಾಹಿತಿ ಪ್ರಕಾರ ಕಾರಿನ ಮುಂಭಾಗದ ಸೀಟಿನ ಬಳಿ ರೂಫ್ ಟಾಪ್‌ನಿಂದ ಮಳೆ ನೀರು ಸೋರಿಕೆಯಾಗುತ್ತಿದ್ದು, ಕಾರು ಖರೀದಿ ಮಾಡಿ ಕೇವಲ ಎರಡೂವರೆ ತಿಂಗಳ ಅವಧಿಯಲ್ಲಿ ಇಂತಹ ಸಮಸ್ಯೆ ಎದುರಾಗಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ನೀರಿಕ್ಷೆಗಳೊಂದಿಗೆ ಕಾರು ಮಾರಾಟವನ್ನು ಆರಂಭಿಸಿರುವ ಚೀನಿ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ SAIC ಸಂಸ್ಥೆಯು ಯುಕೆ ಮೂಲದ ಎಂಜಿ ಮೋಟಾರ್ ಸಂಸ್ಥೆಯನ್ನು ತೆಕ್ಕೆಗೆ ತೆಗೆದುಕೊಂಡು ಭಾರತದಲ್ಲಿ ಕಾರು ಮಾರಾಟ ಮಾಡುತ್ತಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಎಂಜಿ ಮೋಟಾರ್ ಸಂಸ್ಥೆಯನ್ನು SAIC ಸಂಸ್ಥೆಯು ಕೆಲವು ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಹೆಕ್ಟರ್ ಕಾರನ್ನು ಬಿಡುಗಡೆಗೊಳಿಸಿದ್ದು, ಆಕರ್ಷಕ ಬೆಲೆಗಳಲ್ಲಿಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದೆ. ಹೀಗಿರುವಾಗ ಕಾರಿನ ರೂಫ್ ಟಾಪ್‌ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವುದು ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಖರೀದಿ ಮಾಡಿದ ಕೇವಲ ಎರಡೂವರೆ ತಿಂಗಳಿನಲ್ಲಿ ಈ ರೀತಿಯ ಸಮಸ್ಯೆಯಾಗಿರುವುದು ತುಂಬಾ ವಿರಳ ಎನ್ನಬಹುದಾಗಿದ್ದು, ರೂಫ್ ಟಾಪ್‌ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವುದಕ್ಕೆ ನಿಖರವಾದ ಕಾರಣವು ತಿಳಿದುಬಂದಿಲ್ಲ.

ಆದರೂ ವಿಡಿಯೋದಲ್ಲಿನ ಮಾಹಿತಿ ಪ್ರಕಾರ ಅದು ರೂಫ್ ಟಾಪ್ ಕಳಪೆ ಅಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಸನ್ ರೂಫ್ ಜೋಡಣೆಯಲ್ಲಿ ಆಗಿರಬಹುದಾದ ಕಳಪೆ ತಾಂತ್ರಿಕ ಅಂಶವೇ ಮಳೆ ನೀರು ಸೋರಿಕೆಗೆ ಕಾರಣ ಎನ್ನಲಾಗುತ್ತಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಆದರೂ ಕೂಡಾ ಗ್ರಾಹಕರ ನೀರಿಕ್ಷೆಗೂ ಮೀರಿ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಹೆಕ್ಟರ್ ಕಾರಿನಲ್ಲಿ ಮಳೆ ನೀರು ಸೋರಿಕೆ ಸಮಸ್ಯೆಯು ಬ್ರಾಂಡ್ ಮೌಲ್ಯಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆಗಳಿದ್ದು, ಬೆಲೆ ಕಡಿಮೆ ಮಾಡುವ ಉದ್ದೇಶದಿಂದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುತ್ತಿರುವುದು ಮತ್ತಷ್ಟು ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನಲಾಗುತ್ತಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಇದಲ್ಲದೇ ಇತ್ತೀಚೆಗೆ ಸ್ಕೋಡಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಎಂಜಿ ಸಂಸ್ಥೆಯ ಕಾರು ಉತ್ಪನ್ನಗಳ ಗುಣಮಟ್ಟದ ಕುರಿತಂತೆ ಮಾತನಾಡುತ್ತಾ ಎಂಜಿಗಿಂತಲೂ ಕಿಯಾ ಮೋಟಾರ್ಸ್ ಸಂಸ್ಥೆಯ ಕಾರುಗಳೇ ಬೆಸ್ಟ್ ಎನ್ನುವಂತಹ ಅಭಿಪ್ರಾಯ ಹಂಚಿಕೊಂಡಿದ್ದರು.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಇನ್ನು ಎಂಜಿ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ.12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು ಈ ಕಾರಿನ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 16.68 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ. ಈ ಕಾರಿನ ಪೆಟ್ರೋಲ್ ಡಿಸಿಟಿ ಮಾಡೆಲ್‍ಗಳಿಗೆ ಹೆಚ್ಚು ಬೇಡಿಕೆಯಿದ್ದು, ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ. ಇಷ್ಟೊಂದು ಅತ್ಯುತ್ತಮ ಫೀಚರ್ಸ್ ಹೊಂದಿರುವ ಕಾರಿನಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ ಎನ್ನುವುದೇ ವಿಪರ್ಯಾಸ.

Most Read Articles

Kannada
English summary
MG Hector SVU's water leak problem video is going viral in social media. Hector Owners and lovers has urged MG Motor to check this issue immediately.
Story first published: Saturday, September 28, 2019, 19:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X