ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಟದಲ್ಲಿ ಎಂಜಿ ಹೆಕ್ಟರ್ ಕಾರು ಮಾರಾಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಮತ್ತು ಎಕ್ಸ್‌ಯುವಿ500 ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಕಳೆದ ಜುಲೈನಲ್ಲಿ ಬಿಡುಗಡೆಗೊಂಡಿರುವ ಎಂಜಿ ಹೆಕ್ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣದ ಕಾರು ಮಾರಾಟವಾಗುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಯಾಗಿ ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಮತ್ತು ಎಕ್ಸ್‌ಯುವಿ500 ಕಾರುಗಳ ಮಾರಾಟದಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹೆಕ್ಟರ್ ಕಾರಿನ ಖರೀದಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ.

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಅಕ್ಟೋಬರ್ ಅವಧಿಯಲ್ಲಿ ಎಂಜಿ ಸಂಸ್ಥೆಯು 3,536 ಹೆಕ್ಟರ್ ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ ಇದೇ ಅವಧಿಯಲ್ಲಿ ಮಹೀಂದ್ರಾ ಎಕ್ಸ್‌ಯುವಿ500 ಮಾದರಿಯು 1,378, ಟಾಟಾ ಹ್ಯಾರಿಯರ್ ಮಾದರಿಯು 1,258 ಮತ್ತು ಜೀಪ್ ಕಂಪಾಸ್ ಮಾದರಿಯಲ್ಲಿ 854 ಯುನಿಟ್ ಮಾತ್ರವೇ ಮಾರಾಟಗೊಂಡಿವೆ.

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಮಾರಾಟದಲ್ಲಿ ಶೇ.47 ರಷ್ಟು ಪಾಲನ್ನು ತನ್ನದಾಗಿಸಿಕೊಂಡಿರುವ ಎಂಜಿ ಹೆಕ್ಟರ್ ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗುತ್ತಿದ್ದು, ಹೊಸ ಕಾರಿನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿರುವುದು ನಿಗದಿತ ಅವಧಿಯಲ್ಲಿ ಕಾರು ಬೇಡಿಕೆಯನ್ನು ಪೂರೈಸಲು ಸಹಕಾರಿಯಾಗುತ್ತಿದೆ.

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಜೊತೆಗೆ ಹೆಕ್ಟರ್ ಬಿಡುಗಡೆಯ ನಂತರ ಜೀಪ್ ಕಂಪಾಸ್ ಕಾರು ಮಾರಾಟವನ್ನು ಶೇ.50ಕ್ಕಿಂತಲೂ ಹೆಚ್ಚು ಕುಸಿತ ಕಂಡಿದ್ದು, ಹೆಕ್ಟರ್ ಬಿಡುಗಡೆಗೂ ಮುನ್ನ ಪ್ರತಿ ತಿಂಗಳು ಸರಾಸರಿಯಾಗಿ 1 ಸಾವಿರ ಯುನಿಟ್ ಮಾರಾಟ ಪ್ರಮಾಣ ಹೊಂದಿದ್ದ ಕಂಪಾಸ್ ಕಾರು ಇದೀಗ 500 ಯುನಿಟ್‌ಗೆ ಕುಸಿದಿದೆ. ಹಾಗೆಯೇ ಟಾಟಾ ಹ್ಯಾರಿಯರ್ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರು ಮಾರಾಟದಲ್ಲೂ ಕಳೆದ ಮೂರು ತಿಂಗಳಿನಿಂದ ತೀವ್ರ ಕುಸಿತ ದಾಖಲಾಗುತ್ತಿದ್ದು, ಎಂಜಿ ಹೆಕ್ಟರ್ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಇನ್ನು ಎಂಜಿ ಹೆಕ್ಟರ್ ಕಾರು ಗ್ರಾಹಕರ ಬೇಡಿಕೆಯೆಂತೆ ಕೈಗೆಟುವ ಬೆಲೆಯಲ್ಲಿ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಿರುವುದು ಗ್ರಾಹಕರ ಆಕರ್ಷಣೆ ಕಾರಣವಾಗಿದ್ದು, ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದೆ.

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ.12.18 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕ ಬೇಡಿಕೆಗೆ ಅನುಗುಣವಾಗಿ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದಿದೆ.

MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

MOST READ: ಮಾಲಿನ್ಯ ತಡೆಗೆ ಹೊಸ ಉಪಕರಣ ಅಭಿವೃದ್ಧಿಪಡಿಸಿದ ಐಐಟಿ ಎಂಜಿನಿಯರ್

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಹೆಕ್ಟರ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಬರೋಬ್ಬರಿ 12 ಕೋಟಿ ಮೌಲ್ಯದ ಬೆಂಟ್ಲಿ ಮೊಜಾನ್ ಕಾರು ಖರೀದಿಸಿದ ಬೆಂಗಳೂರು ಉದ್ಯಮಿ

ಎಂಜಿ ಹೆಕ್ಟರ್ ಅಬ್ಬರದ ಮುಂದೆ ನೆಲಕಚ್ಚಿದ ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರು ಮಾರಾಟ

ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

Most Read Articles

Kannada
English summary
MG Hector beats Tata Harrier, Jeep Compass, Mahindra XUV500 in October Sales. Read in Kannada.
Story first published: Thursday, November 7, 2019, 13:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X