ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಕಳೆದ ಜೂನ್ ಮಧ್ಯಂತರದಲ್ಲಿ ಬಿಡುಗಡೆಯಾಗಿದ್ದ ಎಂಜಿ ಹೆಕ್ಟರ್ ಖರೀದಿಗೆ ನೀರಿಕ್ಷಿತ ಮಟ್ಟಕ್ಕಿಂತಲೂ ಹೆಚ್ಚಿನ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗಿದ್ದು, ಜುಲೈ ಮತ್ತು ಸೆಪ್ಟೆಂಬರ್ ಅವಧಿಯಲ್ಲಿನ ಹೆಕ್ಟರ್ ಕಾರು ಮಾರಾಟವು ಎಂಜಿ ಸಂಸ್ಥೆಗೆ ಮತ್ತಷ್ಟು ಬಲತುಂಬಿದೆ.

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಹೆಕ್ಟರ್ ಎಸ್‌ಯುವಿ ಆವೃತ್ತಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಅಲೆ ಸೃಷ್ಠಿಸಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರು ಖರೀದಿಗಾಗಿ ಇದುವರೆಗೆ 35 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಉತ್ಪಾದನೆಗಿಂತ ಬೇಡಿಕೆ ಹೆಚ್ಚಿರುವುದರಿಂದ ನಿಗದಿತ ಮಟ್ಟದಲ್ಲಿ ಮಾತ್ರವೇ ಕಾರು ವಿತರಣೆ ಮಾಡುತ್ತಿದೆ. ಹೀಗಾಗಿ ಸೆಪ್ಟೆಂಬರ್ ಅವಧಿಯಲ್ಲಿ 2,608 ಕಾರುಗಳನ್ನು ಮಾತ್ರವೇ ಮಾರಾಟ ಮಾಡಿದ್ದು, ಕಾರು ವಿತರಣೆ ಹೆಚ್ಚಿಸಲು ಸದ್ಯ ಕಾರ್ಯಾಚರಣೆಯಲ್ಲಿರುವ ಉತ್ಪಾದನಾ ಘಟಕವನ್ನು ಮತ್ತಷ್ಟು ವಿಸ್ತರಣೆ ಮಾಡಿದೆ.

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಹೀಗಾಗಿ ಅಕ್ಟೋಬರ್ ಅವಧಿಯಲ್ಲಿ ಮೂರುವರೆ ಸಾವಿರದಿಂದ ನಾಲ್ಕು ಸಾವಿರ ಯುನಿಟ್ ಮಾರಾಟ ಮಾಡುವ ಗುರಿಹೊಂದಿರುವ ಎಂಜಿ ಮೋಟಾರ್ ಸಂಸ್ಥೆಯು ಇದಕ್ಕಾಗಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದ ಬುಕ್ಕಿಂಗ್ ಪ್ರಕ್ರಿಯೆಗೂ ಮರುಚಾಲನೆ ನೀಡಿದೆ.

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಸದ್ಯ ಹೊಸ ಕಾರು ಖರೀದಿಗಾಗಿ ಸೆಪ್ಟೆಂಬರ್ 29ರ ಮೊದಲು ಬುಕ್ಕಿಂಗ್ ಮಾಡಿರುವ ಗ್ರಾಹಕರನ್ನು ಹೊರತು ಪಡಿಸಿ ಹೊಸದಾಗಿ ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ಅನ್ವಯವಾಗುವಂತೆ ಹೊಸ ಕಾರಿನ ಬೆಲೆಯನ್ನು ಕೂಡಾ ಏರಿಕೆ ಮಾಡಲಾಗಿದ್ದು, ರೂ.30 ಸಾವಿರ ಬೆಲೆ ಹೆಚ್ಚಿಸಲಾಗಿದೆ.

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಹೀಗಾಗಿ ಈ ಹಿಂದೆ ಇದ್ದ ಕಾರಿನ ಆರಂಭಿಕ ಬೆಲೆಯು ಇದೀಗ ರೂ. 12.18 ಲಕ್ಷದಿಂದ ರೂ.12.48 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ವೆರಿಯೆಂಟ್ ಬೆಲೆಗಳಲ್ಲೂ ಈ ಹಿಂದೆ ಇದ್ದ ದರಕ್ಕಿಂತ ಶೇ.2.5 ರಷ್ಟು ಹೆಚ್ಚುವರಿ ದರ ನಿಗದಿಪಡಿಸಲಾಗಿದೆ. ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

MOST READ: ನಂಬರ್ ಪ್ಲೇಟ್ ಇಲ್ಲದೇ ವಾಹನ ಚಾಲನೆ ಮಾಡುವ ಸವಾರರೇ ಎಚ್ಚರ..!

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

MOST READ: 5 ಲಕ್ಷದೊಳಗೆ ದೊರೆಯುವ ಟಾಪ್ ಕಾರ್‍‍ಗಳು

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

MOST READ: ಕೇಂದ್ರದಿಂದ ತೆರಿಗೆ ಇಳಿಕೆ ಬೆನ್ನಲ್ಲೇ ಕಾರುಗಳ ಬೆಲೆ ಇಳಿಕೆ ಮಾಡಿ ನಿರ್ಧಾರ ಪ್ರಕಟಿಸಿದ ಮಾರುತಿ ಸುಜುಕಿ..!

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಸೆಪ್ಟೆಂಬರ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಗಮನಸೆಳೆದ ಎಂಜಿ ಹೆಕ್ಟರ್..!

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Most Read Articles

Kannada
English summary
MG Hector Registers 2,608 Units Of Sales In September 2019. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X