ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಎಂಜಿ ಹೆಕ್ಟರ್ 5 ಸೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಎಂಜಿ ಮೊಟಾರ್ ಸಂಸ್ಥೆಯು ಹೆಕ್ಟರ್ ಆವೃತ್ತಿಯಲ್ಲಿ 7-ಸೀಟರ್ ವರ್ಷನ್ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸದ್ಯ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಎಂಜಿ ಹೆಕ್ಟರ್, ಟಾಟಾ ಹ್ಯಾರಿಯರ್ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳ ಮಧ್ಯೆ ತೀವ್ರ ಪೈಪೋಟಿಯಿದ್ದು, ಗ್ರಾಹಕರ ಬೇಡಿಕೆಯೆಂತೆ ಎಂಜಿ ಮೋಟಾರ್ ಸಂಸ್ಥೆಯು 7 ಸೀಟರ್ ಆವೃತ್ತಿಯನ್ನು ಅಭಿವೃದ್ದಿಗೊಳಿಸಿ ರೋಡ್ ಟೆಸ್ಟಿಂಗ್ ನಡೆಸುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹೆಕ್ಟರ್‌ಗಿಂತಲೂ 7 ಸೀಟರ್ ಆವೃತ್ತಿಯು ತುಸು ಹೆಚ್ಚಿನ ಉದ್ದಳತೆಯನ್ನು ಹೊಂದಿದ್ದು, ತಾಂತ್ರಿಕವಾಗಿ ಎರಡು ಕಾರುಗಳು ಒಂದೇ ಆಗಿರಲಿವೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಹೊಸ ಕಾರಿನಲ್ಲಿ 7 ಆಸನ ಸೌಲಭ್ಯಕ್ಕಾಗಿ ಮೂರನೇ ಸಾಲನ್ನು ನೀಡಲಾಗಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್ ನೀಡಿರುವುದು ರೋಡ್ ಟೆಸ್ಟಿಂಗ್ ವೇಳೆ ಬಹಿರಂಗಗೊಂಡಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಮಧ್ಯದ ಸೀಟು ವಿಭಜನೆ ಮಾಡಿರುವುದರಿಂದ ಮೂರನೇ ಸಾಲಿನ ಸೀಟಿನಲ್ಲಿ ಕೂರುವ ಪ್ರಯಾಣಿಕರಿಗೆ ಅನುಕೂಲಕರವಾಗಲಿದ್ದು, ಹೊಸ ಕಾರು ಸಾಮಾನ್ಯ ಕಾರಿಗಿಂತಲೂ ರೂ. 1 ಲಕ್ಷದಿಂದ ರೂ.1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಆದರೆ ಹೊಸ ಕಾರಿನಲ್ಲಿ ಈ ಹಿಂದಿನಂತೆಯೇ ಎಂಜಿನ್ ಆಯ್ಕೆಯನ್ನು ಮುಂದುವರಿಸಲಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಟಾ 7 ಸೀಟರ್ ಗ್ರಾವಿಟಾಸ್ ಮತ್ತು ಹ್ಯುಂಡೈ ಕ್ರೆಟಾ 7 ಸೀಟರ್ ಕಾರುಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಿದೆ. ಜೊತೆಗೆ ಹೊಸ ಕಾರು ಮುಂಬರುವ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಹೊಸ ಎಂಜಿನ್ ಪಡೆದುಕೊಳ್ಳಲಿದ್ದು, ಹೈಬ್ರಿಡ್ ಎಂಜಿನ್ ಆಯ್ಕೆ ಸಹ ಲಭ್ಯವಿರಲಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಮಾಹಿತಿಗಳ ಪ್ರಕಾರ, ಹೆಕ್ಟರ್ 7 ಸೀಟರ್ ಹೊಸ ಕಾರು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, 7 ಸೀಟರ್ ಎಸ್‌ಯುವಿ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಇನ್ನು ಜುಲೈ ಮಧ್ಯಂತರದಲ್ಲಿ ಬಿಡುಗಡೆಗೊಂಡಿದ್ದ ಸಾಮಾನ್ಯ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಅಚ್ಚರಿ ಬೆಳವಣಿಯೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು ಈ ಕಾರಿನ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 16.68 ಲಕ್ಷದ ಬೆಲೆಯನ್ನು ಹೊಂದಿದೆ.

MOST READ: ವಾಹನ ಸವಾರರಿಗೆ ಸಿಹಿಸುದ್ದಿ- ಫಾಸ್ಟ್‌ಟ್ಯಾಗ್ ಕಡ್ಡಾಯ ಮತ್ತೆ ಮುಂದೂಡಿಕೆ..!

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಈ ಕಾರಿನ ಪೆಟ್ರೋಲ್ ಡಿಸಿಟಿ ಮಾಡೆಲ್‍ಗಳಿಗೆ ಹೆಚ್ಚು ಬೇಡಿಕೆಯಿದ್ದು, ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದೆ.

MOST READ: ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಹೆಕ್ಟರ್ ಕಾರು ಸದ್ಯ ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ 7 ಸೀಟರ್ ವರ್ಷನ್

ಇದೇ ಎಂಜಿನ್ ಇದೀಗ ಹೊಸ 7 ಸೀಟರ್ ಕಾರು ಮಾದರಿಯಲ್ಲೂ ಮುಂದುವರಿಸುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದು, ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48 ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದೆ. ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

Source: Rushlane

Most Read Articles

Kannada
English summary
MG Hector Seven-Seater BS6 Model Spotted Testing Ahead Of India Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X