ಬಿಡುಗಡೆಗಾಗಿ ಅಂತಿಮ ಹಂತದ ಸ್ಪಾಟ್ ಟೆಸ್ಟಿಂಗ್ ನಡೆಸಿದ ಎಂಜಿ ಹೆಕ್ಟರ್..!
ಇದೇ ತಿಂಗಳು ಮೇ 15ರಂದು ಭಾರತದಲ್ಲಿ ಅನಾವರಣಗೊಳ್ಳಲಿರುವ ಎಂಜಿ ಹೆಕ್ಟರ್ ಕಾರು ಬಿಡುಗಡೆಗಾಗಿ ಅಂತಿಮ ಹಂತದ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರಿನ ಡಿಸೈನ್‌ಗಳನ್ನು ಯಾವುದೇ ರೀತಿಯಲ್ಲಿ ಮರೆಮಾಚದೆ ಟೆಸ್ಟಿಂಗ್ ನಡೆಸಲಾಗುತ್ತಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ಹೊಸ ಕಾರು ಉತ್ಪಾದನಾ ಸಂಸ್ಥೆಗಳ ಪ್ರವೇಶ ಜೋರಾಗಿದ್ದು, ಎಂಜಿ ಮೋಟಾರ್, ಕಿಯಾ ಮೋಟಾರ್ಸ್, ಪಿಎಸ್ಎ ಗ್ರೂಪ್ ಸೇರಿದಂತೆ ಹಲವು ಹೊಸ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿವೆ. ಇದರಲ್ಲಿ ಎಂಜಿ ಮೋಟಾರ್ ತನ್ನ ವಿನೂತನ ಮಾದರಿಯ ಹೆಕ್ಟರ್ ಎಸ್‌ಯುವಿ ಮೂಲಕ ಗ್ರಾಹಕರ ಆಕರ್ಷಣೆ ಕಾರಣವಾಗಿದ್ದು, ಜೂನ್ ಆರಂಭದಲ್ಲಿ ಬಿಡುಗಡೆಯಾಗುವ ಬಗ್ಗೆ ಈಗಾಗಲೇ ಖಚಿತ ಮಾಹಿತಿ ಲಭ್ಯವಾಗಿದೆ.

ದೇಶಿಯ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಕಾರು ಉತ್ಪನ್ನಗಳನ್ನು ಸಿದ್ದಗೊಳಿಸಿ ಮಾರಾಟಕ್ಕೆ ಅಣಿಯಾಗುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಈಗಾಗಲೇ ಹೊಸ ಕಾರಿನ ಉತ್ಪಾದನೆಗೂ ಸಹ ಚಾಲನೆ ನೀಡಿದ್ದು, ಆಸಕ್ತ ಗ್ರಾಹಕರಿಗೆ ಸದ್ಯದಲ್ಲೇ ಟೆಸ್ಟ್ ಡ್ರೈವ್‌ಗೆ ನೀಡಲು ಸಿದ್ದತೆ ನಡೆಸಿದೆ.

ಹಲವು ವಿಶೇಷತೆಗಳಿಗೆ ಕಾರಣವಾಗಿರುವ ಹೆಕ್ಟರ್ ಎಸ್‌ಯುವಿ ಮಾದರಿಯು ಮಾರುಕಟ್ಟೆಯಲ್ಲಿರುವ ಪ್ರಮುಖ ಎಸ್‌ಯುವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಸುಳಿವು ನೀಡಿದ್ದು, ಇ-ಸಿಮ್ ಪ್ರೇರಿತ ಗೂಗಲ್ ಆಂಡ್ರಾಯಿಡ್ ಆಪರೇಟಿಂಗ್ ಸಿಸ್ಟಂ ಪಡೆದುಕೊಂಡ ದೇಶದ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹೆಕ್ಟರ್ ಕಾರು ಜೀಪ್ ಕಂಪಾಸ್ ಎಸ್‌ಯುವಿ ಮಾದರಿಯಲ್ಲೇ ಬಾಡಿ ಕಿಟ್ ಹೊಂದಿದ್ದು, ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್(ಎಫ್‌ಸಿಎ ಯಿಂದ ಎರವಲು) ಪಡೆದುಕೊಂಡಿದೆ. ಈ ಮೂಲಕ ಪೆಟ್ರೋಲ್ ಆವೃತ್ತಿಯು 160-ಬಿಎಚ್‌ಪಿ, 200-ಎನ್ಎಂ ಉತ್ಪಾದಿಸಿದ್ದಲ್ಲಿ ಡೀಸೆಲ್ ಆವೃತ್ತಿಯು 170-ಬಿಎಚ್‌ಪಿ, 340-ಎನ್ಎಂ ಟಾರ್ಕ್ ಉತ್ಪಾದನೆ ಸಾಮಾರ್ಥ್ಯ ಹೊಂದಿದ್ದು, ಕಾರಿನ ಬೆಲೆಗಳು ಕೂಡಾ ಆಕರ್ಷಕವಾಗಿರಲಿವೆ ಎನ್ನಲಾಗಿದೆ.

ಹೆಕ್ಟರ್ ಕಾರು ಸದ್ಯ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ವುಲಿಂಗ್ ಅಲ್ಮಾಜ್ ಹೆಸರಿನೊಂದಿಗೆ ಮತ್ತು ಚೀನಾದಲ್ಲಿ ಬಾಔನ್ 530 ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರು ಕೆಲವು ತಾಂತ್ರಿಕ ಬದಲಾವಣೆಗಳೊಂದಿಗೆ ಭಾರತದಲ್ಲಿ ಹೆಕ್ಟರ್ ಹೆಸರಿನೊಂದಿಗೆ ರಸ್ತೆಗಿಳಿಯುತ್ತಿದೆ. ಇದು ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಸೌಲಭ್ಯ ಹೊಂದಿದ್ದು, ಸಿ ಸೆಗ್ಮೆಂಟ್ ಎಸ್‌ಯುವಿ ಆವೃತ್ತಿಗಳಲ್ಲಿ ಭಾರೀ ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಕಾರಿನ ಬೆಲೆಗಳು(ಅಂದಾಜು)
ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 19 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಇನ್ನು ಬ್ರಿಟಿಷ್ ಮೂಲದ ಎಂಜಿ ಮೋಟಾರ್ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಚೀನಾದ ಆಟೋ ದೈತ್ಯ SAIC ಸಂಸ್ಥೆಯ ಭಾರತೀಯ ಗ್ರಾಹಕರ ಬೇಡಿಕೆಯಂತೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ಹ್ಯಾಚ್‌ಬ್ಯಾಕ್. ಸೆಡಾನ್, ಎಸ್‌ಯುವಿ ಕಾರುಗಳನ್ನು ಅಷ್ಟೇ ಅಲ್ಲದೇ ಎಲೆಕ್ಟ್ರಿಕ್ ಕಾರುಗಳನ್ನು ಸಹ ಅಭಿವೃದ್ದಿಪಡಿಸುತ್ತಿದ್ದು, ಎಂಜಿ ಮೋಟಾರ್ ಹೆಸರಿನಲ್ಲೇ SAIC ಸಂಸ್ಥೆಯು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಇದಕ್ಕಾಗಿಯೇ ಗುಜರಾತ್‌ನಲ್ಲಿ 170 ಎಕರೆ ಭೂಮಿಯನ್ನು ಕೂಡಾ ಖರೀದಿಸಿರುವ SAIC ಸಂಸ್ಥೆಯು ಹೊಸ ಕಾರು ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ್ದು, ಪ್ರತಿ ವರ್ಷ 80 ಸಾವಿರ ಕಾರುಗಳ ಉತ್ಪಾದನೆಯ ಗುರಿಯೊಂದಿಗೆ ಭಾರತದ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳಿಗೆ ಪ್ರಬಲ ಪೈಪೋಟಿ ನೀಡಲು ಯೋಜನೆ ರೂಪಿಸಿದೆ.
Source: team-bhp


Click it and Unblock the Notifications