ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಎಂಜಿ ಹೆಕ್ಟರ್ ಎಸ್‍ಯುವಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಉತ್ತಮ ಬೇಡಿಕೆಯನ್ನು ಪಡೆಯುತ್ತಿದ್ದು, ದೊರೆತ ಮಾಹಿತಿಗಳ ಪ್ರಕಾರ ಇಲ್ಲಿಯವರೆಗೂ 13,000 ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಮಾರುಕಟ್ಟೆಗೆ ಲಗ್ಗೆಯಿಟ್ಟ ಎಂಜಿ ಹೆಕ್ಟರ್ ಕಾರು ರೂ. 12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಈ ಕಾರಿನ ಪೆಟ್ರೋಲ್ ಡಿಸಿಟಿ ಮಾಡಲ್‍ಗಳಿಗೆ ಡಿಮ್ಯಾಂಡ್ ಹೆಚ್ಚಿದೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಎಂಜಿ ಹೆಕ್ಟರ್ ಎಸ್‍ಯುವಿ ಕಾರಿಗೆ ಹೆಚ್ಚುತ್ತಿರುವ ಬೇಡಿಕೆಯ ಅನುಸಾರ ಸಂಸ್ಥೆಯು ಸುಮಾರು 7 ತಿಂಗಳ ಕಾಯುವಿಕೆಯ ಅವಧಿಯನ್ನು ಘೋಷಿಸಿತು. ಆದರೆ ಇದೀಗ ಕೇರಳದಲ್ಲಿನ ಕೆಲ ಡೀಲರ್‍‍‍ಗಳು ಈ ಕಾರಿನ ಡೆಲಿವರಿ ಕಾರ್ಯವನ್ನು ಸಹ ಪ್ರಾರಂಭಿಸಲಾಗಿದ್ದು, ಕೇರಳದಲ್ಲಿ ಮೊದಲ ಎಂಜಿ ಹೆಕ್ಟರ್ ಎಸ್‍ಯುವಿ ಡೆಲಿವರಿ ಪಡೆದ ಟೆಕ್‍ಟ್ರಾವಲ್ಈಟ್ ಎಂಬ ಇಸ್ಟಾಗ್ರಾಮ್ ಖಾತೆಯ ಮಾಲೀಕ ಎನ್ನಲಾಗಿದೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಈತ ಡೆಲಿವರಿ ಪಡೆದ ಎಂಜಿ ಹೆಕ್ಟರ್ ಕಾರಿನ ಚಿತ್ರಗಳನ್ನು ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಕೇವಲ ಕೇರಳದಲ್ಲಿ ಮಾತ್ರವಲ್ಲದೆಯೆ ತೆಲಂಗಾಣ, ಗುಜರಾತ್ ಸೇರಿದಂತೆ ಇನ್ನು ಹಲವಾರು ರಾಜ್ಯಗಳಲ್ಲಿ ಎಂಜಿ ಹೆಕ್ಟರ್ ಕಾರಿನ ವಿತರಣೆಯನ್ನು ಪ್ರಾರಂಭಿಸಲಾಗಿದ್ದು, ಡೆಲಿವರಿ ಪಡೆದ ಹಲವಾರು ಗ್ರಾಹಕರು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಎಂಜಿ ಹೆಕ್ಟರ್ ದೇಶಿಯ ಮಾರುಕಟ್ಟೆಯಲ್ಲಿ ಕಾಲಿಟ್ಟಿದ್ದು, ಟಾಟಾ ಹ್ಯಾರಿಯರ್ ಗಿಂತಲೂ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಕೇವಲ ಇದೊಂದು ಕಾರಣ ಮಾತ್ರವಲ್ಲದೆಯೆ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬಯ್‍ಬಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್ ಎಂಬ ಆಕರ್ಷಕ ಕೊಡುಗೆಗಳನ್ನು ಸಹ ನೀಡುತ್ತಿದೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಎಂಜಿನ್ ಸಾಮರ್ಥ್ಯ

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಕಾರಿನ ಮೈಲೇಜ್

*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್‌ಬಾಕ್ಸ್) - ಪ್ರತಿ ಲೀಟರ್‌ಗೆ 15.81 ಕಿ.ಮಿ

*ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಫೀಚರ್ಸ್

ಜೊತೆಗೆ ಹೆಕ್ಟರ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬಂದಿದ್ದು, ಬ್ಲ್ಯಾಕ್ ಕಲರ್ ಥೀಮ್ ಇಂಟಿರಿಯರ್‌ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಪೋಟೈನ್‌ಮೆಂಟ್ ಕಂಟ್ರೋಲ್, ನೆವಿಗೇಷನ್ ನಿಯಂತ್ರಿಸಬಲ್ಲ 10.4-ಇಂಚಿನ ವರ್ಟಿಕಲ್ ಸ್ಟ್ರಾಕ್ಡ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೈ ನೀಡಲಾಗಿದೆ.

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಕೇರಳದಲ್ಲಿ ಸೇರಿದಂತೆ ಇನ್ನು ಹಲವಾರು ರಾಜ್ಯದಲ್ಲಿ ಎಂಜಿ ಹೆಕ್ಟರ್ ವಿತರಣೆ ಶುರು

ಸೇಫ್ಟಿ ಫೀಚರ್ಸ್

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Image Courtesy: Techtraveleat/Instagram

Most Read Articles

Kannada
English summary
MG Hector SUV Deliveries Started In Kerala And Telangana. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X