ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ದೊರೆಯಲಿದೆ ಎಂಜಿ ಹೆಕ್ಟರ್.?

ಬ್ರಿಟಿಶ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಎಂಜಿ ಮೋಟಾರ್ ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಮೊದಲನೆಯ ವಾಹನವನ್ನಾಗಿ ಎಂಜಿನ್ ಹೆಕ್ಟರ್ ಎಸ್‍ಯುವಿ ಕಾರನ್ನು ಬಿಡುಗಡೆ ಮಾಡಲಿದ್ದು, ಕೆಲವು ದಿನಗಳ ಹಿಂದಷ್ಟೆ ಅನಾವರಣಗೊಂಡಿತ್ತು. ಸಧ್ಯ ಈ ಕಾರು ಮಾರುಕಟ್ಟೆಯಲ್ಲಿ ತನ್ನ ವೈಶಿಷ್ಟ್ಯತೆಗಳಿಂದ ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಇದೇ ತಿಂಗಳ 27ರಂದು ಬಿಡುಗಡೆಯಾಗಲಿದೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಟಾಟಾ ಮೋಟಾರ್ಸ್ ಸಂಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್ ಕಾರಿಗೆ ಈ ಕಾರು ಪೈಪೋಟಿ ನೀಡಲಿದ್ದು, ದೇಶದಲ್ಲಿರುವ 70 ಡೀಲರ್‍‍ಗಳಲ್ಲಿ ಈ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಸಹ ಪ್ರಾರಂಭಿಸಲಾಗಿದೆ. ಈ ಕಾರು ಸ್ಟೈಲ್, ಸೂಪರ್, ಸ್ಮಾರ್ಟ್ ಮತ್ತು ಶಾರ್ಪ್ ಎಂಬ ನಾಲ್ಕು ವೇರಿಯೆಂಟ್‍ಗಳಲ್ಲಿ ಲಭ್ಯವಿರಲಿದ್ದು, ಮಾಹಿತಿಗಳ ಪ್ರಕಾರ ಈ ಕಾರು ರೂ. 11 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದಿರಲಿದೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಪ್ರಸ್ಥುತ ಡೀಸೆಲ್ ವೇರಿಯೆಂಟ್‍ನಲ್ಲಿ ಮಾತ್ರ ಲಭ್ಯವಿರುವ ಟಾಟಾ ಹ್ಯಾರಿಯರ್ ಕಾರುಗಳಿಗೆ ಪೈಪೋಟಿಯಾಗಿ ಎಂಜಿ ಹೆಕ್ಟರ್ ಅಕರು ಪೆಟ್ರೋಲ್, ಡೀಸೆಲ್ ಮತ್ತು ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಬ ಮಾದರಿಗಳಲ್ಲಿ ಬಿಡುಗಡೆಯಾಗಲಿದ್ದು, ರಶ್‍ಲೇನ್ ವರದಿಗಳ ಪ್ರಕಾರ ಪೆಟ್ರೋಲ್ ಮಾದರಿಯ ಹೆಕ್ಟರ್ ಕಾರು ರೂ. 11.9 ಲಕ್ಷ ಮತ್ತು ಡೀಸೆಲ್ ಕಾರು ರೂ. 12.9 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿರಲಿದೆಯಂತೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಹೊಸ ಕಾರಿನಲ್ಲಿ ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು. ಹಾಗೆಯೇ ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಪಡೆದುಕೊಂಡಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಸದ್ಯಕ್ಕೆ ಬಿಎಸ್-4 ವೈಶಿಷ್ಟ್ಯತೆಗಳಿಗೆ ಅನುಗುಣವಾಗಿಯೇ ಎಂಜಿನ್ ಸೌಲಭ್ಯ ಹೊಂದಿರುವ ಹೆಕ್ಟರ್ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಬಿಎಸ್-6 ಎಂಜಿನ್‌ಗೆ ಉನ್ನತಿಕರಣ ಹೊಂದಲಿದ್ದು, ಸ್ಮಾಟ್ ಹೈಬ್ರಿಡ್ ತಂತ್ರಜ್ಞಾನವು ಮೈಲೇಜ್ ಪ್ರಮಾಣದಲ್ಲಿ ಶೇ.14ರಷ್ಟು ಹೆಚ್ಚಳಕ್ಕೆ ಕಾರಣವಾದರೆ ಶೇ.11 ರಷ್ಟು ಕಾರ್ಬನ್ ಹೊರಸೂಸುವ ಪ್ರಮಾಣವನ್ನು ತಗ್ಗಿಸಲಿದೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಕಾರಿನ ಮೈಲೇಜ್

*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್‌ಬಾಕ್ಸ್) - ಪ್ರತಿ ಲೀಟರ್‌ಗೆ 15.81 ಕಿ.ಮಿ

*ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಹೆಕ್ಟರ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬಂದಿದ್ದು, ಬ್ಲ್ಯಾಕ್ ಕಲರ್ ಥೀಮ್ ಇಂಟಿರಿಯರ್‌ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಪೋಟೈನ್‌ಮೆಂಟ್ ಕಂಟ್ರೋಲ್, ನೆವಿಗೇಷನ್ ನಿಯಂತ್ರಿಸಬಲ್ಲ 10.4-ಇಂಚಿನ ವರ್ಟಿಕಲ್ ಸ್ಟ್ರಾಕ್ಡ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೈ ನೀಡಲಾಗಿದೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಜೊತೆಗೆ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಸ್ಟೈಲ್, ಸೂಪರ್, ಸ್ಮಾರ್ಟ್ ಮತ್ತು ಶಾರ್ಪ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಲಭ್ಯವಾಗಲಿರುವ ಹೆಕ್ಟರ್ ಕಾರಿನಲ್ಲಿ ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಟಾಟಾ ಹ್ಯಾರಿಯರ್‍‍‍ಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್.?

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Most Read Articles

Kannada
English summary
MG Hector SUV Expected Price: May Be Cheaper Than Tata Harrier. Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X