ಎಂಜಿ ಮೋಟಾರ್ ಹೆಕ್ಟರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ
ಎಂಜಿ ಮೋಟಾರ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಹೆಕ್ಟರ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳು ಕೊನೆಯಲ್ಲಿ ಬಿಡುಗಡೆಯಾಗಿ ಸಿದ್ದತೆ ನಡೆಸುತ್ತಿದ್ದು, ಈ ಮಧ್ಯೆ ಹೊಸ ಕಾರಿನ ಮೈಲೇಜ್ ಕುರಿತಾದ ಅಧಿಕೃತ ಮಾಹಿತಿಯು ಸೋರಿಕೆಯಾಗಿದೆ.

ಹೆಕ್ಟರ್ ಎಸ್‌ಯುವಿ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ಎಂಜಿನ್ ಸೌಲಭ್ಯವನ್ನು ಹೊತ್ತು ಬರಲಿದ್ದು, ಮೈಲೇಜ್ ವಿಚಾರವಾಗಿ ಎಸ್‌ಯುವಿ ಖರೀದಿದಾರರ ಗಮನಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಜೊತೆಗೆ ಹೆಕ್ಟರ್ ಕಾರು ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಮಾದರಿಯನ್ನು ಪಡೆದುಕೊಳ್ಳಲಿದ್ದು, ಮಾಲಿನ್ಯ ಉತ್ಪಾದನೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಹೊಸ ಕಾರಿನಲ್ಲಿ ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 141-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಹಾಗೆಯೇ ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಪಡೆದುಕೊಂಡಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದೆ.
ಕಾರಿನ ಮೈಲೇಜ್
*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ
*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ
*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್‌ಬಾಕ್ಸ್) - ಪ್ರತಿ ಲೀಟರ್‌ಗೆ 15.81 ಕಿ.ಮಿ
*ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಇದರೊಂದಿಗೆ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ರಿಮೋಟ್ ಕಾರ್ ಆಪರೇಷನ್, ಸ್ಮಾರ್ಟ್ ಸಿಮ್ ಪ್ರೇರಿತ ಇಂಟರ್‌ನೆಟ್ ಸೌಲಭ್ಯ, 10.4-ಇಂಚಿನ ಟಚ್ ಇನ್ಪೋಟೈನ್ ಸಿಸ್ಟಂ, 8-ಸ್ಪೀಕರ್ಸ್‌ಗಳು, ಆನ್ ಲೈನ್ ನೆವಿಗೇಷನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 7-ಇಂಚಿನ ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ, ಪವರ್ ಅಡ್ಜೆಸ್ಟೆಬಲ್ ರಿಯರ್ ವ್ಯೂ ಮಿರರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಪಡೆದುಕೊಂಡಿದೆ.

ಜೊತೆಗೆ ಹೊಸ ಕಾರಿನಲ್ಲಿ ರೂಫ್ ರೈಲ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಎರಡು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ರಿಯರ್ ಎಸಿ ವೆಂಟ್ಸ್, ಸನ್ ಗ್ಲಾಸ್ ಹೊಲ್ಡರ್, ಡ್ರೈವರ್ ಆರ್ಮ್ ರೆಸ್ಟ್, ಪನಾರೊಮಿಕ್ ಸನ್‌ರೂಫ್, 17-ಇಂಚಿನ ಅಲಾಯ್ ವೀಲ್ಹ್, ರಿಯರ್ ಸೀಟ್ ಆರ್ಮ್ ರೆಸ್ಟ್, ಆರು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೌಲಭ್ಯದೊಂದಿಗೆ ಲೆದರ್ ಸೀಟ್‌ಗಳನ್ನು ಜೋಡಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆಗೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಕ್ರೂಸ್ ಕಂಟ್ರೊಲರ್ ISOFIX ಚೈಲ್ಡ್ ಸೀಟ್, ಎಲೆಕ್ಟ್ರಿಕ್ ಹ್ಯಾಂಡಲ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರ್ಸ್ ಈ ಕಾರಿನಲ್ಲಿವೆಯೆಂತೆ.
MOST READ: ಟ್ಯೂಬ್‍ಲೆಸ್ ಟಯರ್ ಟ್ರೆಂಡ್ ಮುಗಿತು, ಇನ್ನು ಏರ್‍ಲೆಸ್ ಟಯರ್ ಸದ್ದು ಶುರು

ಕಾರಿನ ಬೆಲೆಗಳು(ಅಂದಾಜು)
ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14. 50 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 18 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications