ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಆಟೋ ಉದ್ಯಮದಲ್ಲಿ ತೀವ್ರ ಬೆಳವಣೆಯ ಹಿನ್ನೆಲೆಯಲ್ಲಿ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳು ಜಾಗತಿಕವಾಗಿ ತಮ್ಮ ಕಾರ್ಯವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದ್ದು, ಭಾರತೀಯ ಮಾರುಕಟ್ಟೆಯಲ್ಲೂ ಕೂಡಾ ಎಂಜಿ ಮೋಟಾರ್, ಕಿಯಾ ಮೋಟಾರ್ಸ್, ಪಿಎಸ್ಎ ಗ್ರೂಪ್ ಸೇರಿದಂತೆ ಹಲವು ಹೊಸ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಸದ್ಯ ತನ್ನ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿರುವ ಎಂಜಿ ಮೋಟಾರ್ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಕಾರು ಉತ್ಪನ್ನಗಳನ್ನು ಸಿದ್ದಗೊಳಿಸಿ ಮಾರಾಟಕ್ಕೆ ಅಣಿಯಾಗುತ್ತಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಿರುವ ಬಹುನೀರಿಕ್ಷಿತ ಹೆಕ್ಟರ್ ಎಸ್‌ಯುವಿ ಮಾದರಿಯನ್ನು ಇಂದು ಅಧಿಕೃತವಾಗಿ ಅನಾವರಣಗೊಳಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಬ್ರಿಟಿಷ್ ಮೂಲದ ಎಂಜಿ ಮೋಟಾರ್ ಸಂಸ್ಥೆಯು ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯ ಪ್ರವೇಶ ಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಬೃಹತ್ ಬಂಡವಾಳದೊಂದಿಗೆ ಕಳೆದ ವರ್ಷವಷ್ಟೇ ತನ್ನ ಮೊದಲ ಉತ್ಪಾದನಾ ಘಟಕವನ್ನು ಆರಂಭಗೊಳಿಸಿದ್ದಲ್ಲೇ ಇದೀಗ ಬಿಡುಗಡೆಯಾಗಲಿರುವ ಮೊದಲ ಕಾರನ್ನು ಅನಾವರಣಗೊಳಿಸಿ ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಹೆಕ್ಟರ್ ಹೆಸರಿನಲ್ಲಿ ಭಾರತೀಯ ರಸ್ತೆಗಳಲ್ಲಿ ಸದ್ದು ಮಾಡಲಿರುವ ಹೊಸ ಎಂಜಿ ಮೋಟಾರ್ ಸಂಸ್ಥೆಯ ಹೊಸ ಕಾರು ಜೀಪ್ ಕಂಪಾಸ್ ಎಸ್‌ಯುವಿ ಮಾದರಿಯಲ್ಲೇ ಬಾಡಿ ಕಿಟ್ ಹೊಂದಿದ್ದು, 2019ರ ಮಧ್ಯಂತರದಲ್ಲಿ ಹೊಸ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಬಿಎಸ್-6 ಎಂಜಿನ್ ಸೌಲಭ್ಯ ಹೊಂದಿರುವ ಹೊಸ ಹೆಕ್ಟರ್ ಕಾರು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್(ಎಫ್‌ಸಿಎ ಯಿಂದ ಎರವಲು) ಪಡೆದುಕೊಂಡಿದ್ದು, ಪೆಟ್ರೋಲ್ ಆವೃತ್ತಿಯು 160-ಬಿಎಚ್‌ಪಿ, 200-ಎನ್ಎಂ ಉತ್ಪಾದಿಸಿದ್ದಲ್ಲಿ ಡೀಸೆಲ್ ಆವೃತ್ತಿಯು 170-ಬಿಎಚ್‌ಪಿ, 340-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಹೆಕ್ಟರ್ ಕಾರು ಸದ್ಯ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ವುಲಿಂಗ್ ಅಲ್ಮಾಜ್ ಹೆಸರಿನೊಂದಿಗೆ ಮತ್ತು ಚೀನಾದಲ್ಲಿ ಬಾಔನ್ 530 ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರು ಕೆಲವು ತಾಂತ್ರಿಕ ಬದಲಾವಣೆಗಳೊಂದಿಗೆ ಭಾರತದಲ್ಲಿ ಹೆಕ್ಟರ್ ಹೆಸರಿನೊಂದಿಗೆ ರಸ್ತೆಗಿಳಿಯುತ್ತಿದೆ. ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಸೌಲಭ್ಯ ಹೊಂದಿರುವ ಹೊಸ ಕಾರು ಸಿ ಸೆಗ್ಮೆಂಟ್ ಎಸ್‌ಯುವಿ ಆವೃತ್ತಿಗಳಲ್ಲಿ ಭಾರೀ ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಕಾರಿನ ಬೆಲೆಗಳು(ಅಂದಾಜು)

ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 19 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಇನ್ನು 1924ರಿಂದಲೇ ಬ್ರಿಟಿಷ್ ಮೂಲದ ಎಂಜಿ ಮೋಟಾರ್ ಸಂಸ್ಥೆಯು ಆಟೋ ಉದ್ಯಮದಲ್ಲಿ ಕಾರ್ಯಚರಣೆ ನಡೆಸುತ್ತಿದ್ದು, ಇತ್ತೀಚೆಗೆ ಹಣಕಾಸು ಮುಗ್ಗಟ್ಟು ಎದುರಿಸಿತ್ತು. ಈ ಹಿನ್ನೆಲೆಯಲ್ಲಿ ನಷ್ಟದ ಸುಳಿಯಲ್ಲಿದ್ದ ಸಂಸ್ಥೆಯನ್ನು ಚೀನಾ ಮೂಲದ ಎಸ್‌ಎಐಸಿ( SAIC) ಸಂಸ್ಧೆಯು ಸ್ಪಾಧೀನಪಡಿಸಿಕೊಂಡು ಭಾರತದಲ್ಲಿ ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುತ್ತಿದೆ.

MOST READ: 7 ಸಾವಿರ ಕೋಟಿ ವೆಚ್ಚದಲ್ಲಿ ತಲೆಎತ್ತಿದ ಕಿಯಾ ಮೋಟಾರ್ಸ್ ಮೊದಲ ಕಾರು ಉತ್ಪಾದನಾ ಘಟಕ

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಗ್ರಾಹಕರ ಬೇಡಿಕೆಯಂತೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ಹ್ಯಾಚ್‌ಬ್ಯಾಕ್. ಸೆಡಾನ್, ಎಸ್‌ಯುವಿ ಕಾರುಗಳನ್ನು ಅಷ್ಟೇ ಅಲ್ಲದೇ ಎಲೆಕ್ಟ್ರಿಕ್ ಕಾರುಗಳನ್ನು ಸಹ ಅಭಿವೃದ್ದಿ ಮಾಡಲಿರುವ ಎಂಜಿ ಮೋಟಾರ್ ಸಂಸ್ಥೆಯು ಭಾರತದಲ್ಲಿ ಬೃಹತ್ ಪ್ರಮಾಣದ ಹೂಡಿಕೆ ಮಾಡಿದ್ದು, 2019ರ ಎರಡನೇ ತ್ರೈಮಾಸಿಕ ಅವಧಿಗೆ ತನ್ನ ಹೊಸ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಬಗ್ಗೆ SAIC ಸಂಸ್ಥೆಯು ಸುಳಿವು ನೀಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಇದಕ್ಕಾಗಿಯೇ ಗುಜರಾತ್‌ನಲ್ಲಿ 170 ಎಕರೆ ಭೂಮಿಯನ್ನು ಕೂಡಾ ಖರೀದಿಸಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರು ಉತ್ಪಾದನಾ ಘಟಕಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಪ್ರತಿ ವರ್ಷ 80 ಸಾವಿರ ಕಾರುಗಳ ಉತ್ಪಾದನೆಯ ಗುರಿಯೊಂದಿಗೆ ಭಾರತದಲ್ಲಿ ಹಲವು ಕಾರು ಉತ್ಪಾದನಾ ಸಂಸ್ಥೆಗಳಿಗೆ ಪ್ರಬಲ ಪೈಪೋಟಿ ನೀಡಲು ಯೋಜನೆ ರೂಪಿಸಿದೆ.

MOST READ: ವಾಹನ ಮಾಲೀಕರೇ ಹುಷಾರ್- ಬೆಂಗಳೂರಿನಲ್ಲಿ ಜೋರಾಗಿದೆ ನಕಲಿ ನಂಬರ್ ಪ್ಲೇಟ್ ಹಾವಳಿ

ಭಾರತದಲ್ಲಿ ಬಿಡುಗಡೆಯಾಗಲಿರುವ ಎಂಜಿ ಮೋಟಾರ್ ಹೆಕ್ಟರ್ ಎಸ್‌ಯುವಿ ಅನಾವರಣ

ಹೀಗಾಗಿ ಹೊಸ ಕಾರುಗಳನ್ನು ನಿಗದಿತ ಅವಧಿಯೊಳಗೆ ಪರಿಚಯಿಸಲು ದೇಶಾದ್ಯಂತ ಈಗಾಗಲೇ 45ಕ್ಕೂ ಹೆಚ್ಚು ಅಧಿಕೃತ ಕಾರು ಮಾರಾಟ ಮಳಿಗೆಗಳನ್ನು ಹೊಂದಿರುವ ಎಂಜಿ ಮೋಟಾರ್ ಸಂಸ್ಥೆಯು, ಕಾರು ಮಾರಾಟಕ್ಕೆ ಚಾಲನೆ ನೀಡುವ ವೇಳೆಗೆ 100ಕ್ಕೂ ಹೆಚ್ಚು ಡೀಲರ್ಸ್ ತೆರೆಯುವ ಯೋಜನೆ ಹೊಂದಿದೆ.

Article Published On: Tuesday, April 2, 2019, 16:33 [IST]
English summary
MG Motors India has revealed the first official photos and connected car features of their upcoming SUV - the Hector.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+