ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಎಂಜಿ ಮೋಟಾರ್ ನಿರ್ಮಾಣ ಹೆಕ್ಟರ್ ಎಸ್‌ಯುವಿ ಕಾರು ಮುಂದಿನ ತಿಂಗಳು ಜೂನ್ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖತಿತವಾಗಿದ್ದು, ಇದಕ್ಕೂ ಮುನ್ನು ಡೀಲರ್ಸ್ ಯಾರ್ಡ್ ತಲುಪುತ್ತಿರುವ ಹೊಸ ಕಾರಿನ ತಾಂತ್ರಿಕ ಅಂಶಗಳ ಮಾಹಿತಿಯುಳ್ಳ ಕೈಪಿಡಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಸದ್ಯ ಬಿಡುಗಡೆಯ ಉದ್ದೇಶದಿಂದ ಅಂತಿಮ ಹಂತದ ಸ್ಪಾಟ್ ಟೆಸ್ಟಿಂಗ್‌ನಲ್ಲಿ ಭಾಗಿಯಾಗಿರುವ ಎಂಜಿ ಹೆಕ್ಟರ್ ಕಾರು ಎಸ್‌ಯುವಿ ಪ್ರಿಯರನ್ನು ಸೆಳೆಯುವ ಹಲವು ಆಕರ್ಷಕ ಸೌಲಭ್ಯಗಳನ್ನು ಹೊತ್ತು ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಗ್ರಾಹಕರು ನೀರಿಕ್ಷೆ ಮಾಡಿರುವುದುಕ್ಕಿಂತಲೂ ಹಲವು ಹೊಸ ಮಾದರಿಯ ಫೀಚರ್ಸ್‌ಗಳನ್ನು ಪಡೆದುಕೊಂಡಿರುವುದು ಸೋರಿಕೆಯಾಗಿರುವ ಮಾಹಿತಿ ಕೈಪಿಡಿಯಲ್ಲಿ ಖಚಿತವಾಗಿದೆ.

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಎಂಜಿನ್ ಸಾಮರ್ಥ್ಯ

ಸೋರಿಕೆಯಾಗಿರುವ ಮಾಹಿತಿಗಳ ಪ್ರಕಾರ, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್ ಹೊಂದಿದ್ದರೆ, ಡೀಸೆಲ್ ಮಾದರಿಯು 2.0-ಲೀಟರ್ ಎಂಜಿನ್ ಪಡೆದುಕೊಂಡಿರಲಿಯೆಂತೆ.

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಕಾರಿನ ಉದ್ದಳತೆ

ಮಾರುಕಟ್ಟೆಯಲ್ಲಿರುವ ಇತರೆ ಸಬ್ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲೇ ವಿಭಿನ್ನ ಗಾತ್ರ ಹೊಂದಿರುವ ಹೆಕ್ಟರ್ ಕಾರು 4,655ಎಂಎಂ ಉದ್ದ, 1,835ಎಂಎಂ ಅಗಲ, 1,760ಎಂಎಂ ಎತ್ತರ, 2,750ಎಂಎಂ ವೀಲ್ಹ್‌ಬೆಸ್ ಮತ್ತು 192ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಇದರೊಂದಿಗೆ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ರಿಮೋಟ್ ಕಾರ್ ಆಪರೇಷನ್, ಸ್ಮಾರ್ಟ್ ಸಿಮ್ ಪ್ರೇರಿತ ಇಂಟರ್‌ನೆಟ್ ಸೌಲಭ್ಯ, 10.4-ಇಂಚಿನ ಟಚ್ ಇನ್ಪೋಟೈನ್ ಸಿಸ್ಟಂ, 8-ಸ್ಪೀಕರ್ಸ್‌ಗಳು, ಆನ್ ಲೈನ್ ನೆವಿಗೇಷನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 7-ಇಂಚಿನ ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ, ಪವರ್ ಅಡ್ಜೆಸ್ಟೆಬಲ್ ರಿಯರ್ ವ್ಯೂ ಮಿರರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಹಾಗೆಯೇ ಹೊಸ ಕಾರಿನಲ್ಲಿ ರೂಫ್ ರೈಲ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಎರಡು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ರಿಯರ್ ಎಸಿ ವೆಂಟ್ಸ್, ಸನ್ ಗ್ಲಾಸ್ ಹೊಲ್ಡರ್, ಡ್ರೈವರ್ ಆರ್ಮ್ ರೆಸ್ಟ್, ಪನಾರೊಮಿಕ್ ಸನ್‌ರೂಫ್, 17-ಇಂಚಿನ ಅಲಾಯ್ ವೀಲ್ಹ್, ರಿಯರ್ ಸೀಟ್ ಆರ್ಮ್ ರೆಸ್ಟ್, ಆರು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೌಲಭ್ಯದೊಂದಿಗೆ ಲೆದರ್ ಸೀಟ್‌ಗಳನ್ನು ಜೋಡಿಸಲಾಗಿದೆ.

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಇನ್ನು ಪ್ರಯಾಣಿಕ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆಗೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಕ್ರೂಸ್ ಕಂಟ್ರೊಲರ್ ISOFIX ಚೈಲ್ಡ್ ಸೀಟ್, ಎಲೆಕ್ಟ್ರಿಕ್ ಹ್ಯಾಂಡಲ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರ್ಸ್ ಈ ಕಾರಿನಲ್ಲಿವೆಯೆಂತೆ.

ಕಾರಿನ ಮೈಲೇಜ್

ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಹೀಗಾಗಿ ಹಲವು ವಿಶೇಷತೆಗಳಿಗೆ ಕಾರಣವಾಗಿರುವ ಹೆಕ್ಟರ್ ಎಸ್‌ಯುವಿ ಮಾದರಿಯು ಮಾರುಕಟ್ಟೆಯಲ್ಲಿರುವ ಪ್ರಮುಖ ಎಸ್‌ಯುವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಸುಳಿವು ನೀಡಿದ್ದು, ಇ-ಸಿಮ್ ಪ್ರೇರಿತ ಗೂಗಲ್ ಆಂಡ್ರಾಯಿಡ್ ಆಪರೇಟಿಂಗ್ ಸಿಸ್ಟಂ ಪಡೆದುಕೊಂಡ ದೇಶದ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬಿಡುಗಡೆಗೂ ಮುನ್ನ ಎಂಜಿ ಹೆಕ್ಟರ್ ಕಾರಿನ ತಾಂತ್ರಿಕ ಅಂಶಗಳು ಸೋರಿಕೆ..!

ಕಾರಿನ ಬೆಲೆಗಳು(ಅಂದಾಜು)

ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 19 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Source:cartoq

Most Read Articles

Kannada
English summary
Here are all the important details about the upcoming MG Hector SUV.
Story first published: Wednesday, May 15, 2019, 13:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X