ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ದೇಶದ ಮೊದಲ ಇಂಟರ್‌ನೆಟ್ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಎಂಜಿ ಹೆಕ್ಟರ್ ಮಾದರಿಯು ಇದೇ ತಿಂಗಳು ಬಿಡುಗಡೆಯಾಗುತ್ತಿದ್ದು, ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬರುತ್ತಿರುವ ಹೆಕ್ಟರ್ ಕಾರಿನಲ್ಲಿ ಐಷಾರಾಮಿ ಕಾರುಗಳ ಮಾದರಿಯಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ಸೇರಿಸಲಾಗಿದೆ.

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಹೌದು, ಹೆಕ್ಟರ್ ಕಾರಿನಲ್ಲಿ ಆರಾಮದಾಯಕ ಪ್ರಯಾಣಕ್ಕಾಗಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಲಾಗಿದ್ದು, ಧ್ವನಿ ಗ್ರಹಿಕೆ ಮೂಕಲವೇ ಹಲವು ಸೌಲಭ್ಯಗಳು ತೆರೆದುಕೊಳ್ಳಲಿವೆ. ಹೀಗಾಗಿ ಹೆಕ್ಟರ್ ಕಾರು ಮಧ್ಯಮ ಗ್ರಾತದ ಎಸ್‌ಯುವಿ ಪ್ರಿಯರಿಗೆ ಮಾತ್ರವಲ್ಲದೇ ಐಷಾರಾಮಿ ಕಾರು ಖರೀದಿದಾರರನ್ನು ಸಹ ಸೆಳೆಯುವ ನೀರಿಕ್ಷೆಯಲ್ಲಿದೆ.

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಇನ್ನು ಹೆಕ್ಟರ್ ಎಸ್‌ಯುವಿ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ಎಂಜಿನ್ ಸೌಲಭ್ಯವನ್ನು ಹೊತ್ತು ಬರಲಿದ್ದು, ಮೈಲೇಜ್ ವಿಚಾರವಾಗಿ ಎಸ್‌ಯುವಿ ಖರೀದಿದಾರರ ಗಮನಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಜೊತೆಗೆ ಹೆಕ್ಟರ್ ಕಾರು ಸ್ಮಾರ್ಟ್ ಹೈಬ್ರಿಡ್ ಎಂಜಿನ್‌ ಮಾದರಿಯನ್ನು ಪಡೆದುಕೊಳ್ಳಲಿದ್ದು, ಮಾಲಿನ್ಯ ಉತ್ಪಾದನೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಹೊಸ ಕಾರಿನಲ್ಲಿ ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 141-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಹಾಗೆಯೇ ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಪಡೆದುಕೊಂಡಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದೆ.

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಹೆಕ್ಟರ್ ಕಾರಿನ ಮೈಲೇಜ್

*ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ

*ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ

*ಪೆಟ್ರೋಲ್ ಎಂಜಿನ್ ಜೊತೆ 48 ವೊಲ್ಟ್ ಮೈಲ್ಡ್ ಹೈಬ್ರಿಡ್(ಮ್ಯಾನುವಲ್ ಗೇರ್‌ಬಾಕ್ಸ್) - ಪ್ರತಿ ಲೀಟರ್‌ಗೆ 15.81 ಕಿ.ಮಿ

*ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಇದರೊಂದಿಗೆ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ರಿಮೋಟ್ ಕಾರ್ ಆಪರೇಷನ್, ಸ್ಮಾರ್ಟ್ ಸಿಮ್ ಪ್ರೇರಿತ ಇಂಟರ್‌ನೆಟ್ ಸೌಲಭ್ಯ, 10.4-ಇಂಚಿನ ಟಚ್ ಇನ್ಪೋಟೈನ್ ಸಿಸ್ಟಂ, 8-ಸ್ಪೀಕರ್ಸ್‌ಗಳು, ಆನ್ ಲೈನ್ ನೆವಿಗೇಷನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 7-ಇಂಚಿನ ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ, ಪವರ್ ಅಡ್ಜೆಸ್ಟೆಬಲ್ ರಿಯರ್ ವ್ಯೂ ಮಿರರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಪಡೆದುಕೊಂಡಿದೆ.

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಜೊತೆಗೆ ಹೊಸ ಕಾರಿನಲ್ಲಿ ರೂಫ್ ರೈಲ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಎರಡು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ರಿಯರ್ ಎಸಿ ವೆಂಟ್ಸ್, ಸನ್ ಗ್ಲಾಸ್ ಹೊಲ್ಡರ್, ಡ್ರೈವರ್ ಆರ್ಮ್ ರೆಸ್ಟ್, ಪನಾರೊಮಿಕ್ ಸನ್‌ರೂಫ್, 17-ಇಂಚಿನ ಅಲಾಯ್ ವೀಲ್ಹ್, ರಿಯರ್ ಸೀಟ್ ಆರ್ಮ್ ರೆಸ್ಟ್, ಆರು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೌಲಭ್ಯದೊಂದಿಗೆ ಲೆದರ್ ಸೀಟ್‌ಗಳನ್ನು ಜೋಡಿಸಲಾಗಿದೆ.

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಪ್ರಯಾಣಿಕರ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆಗೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಕ್ರೂಸ್ ಕಂಟ್ರೊಲರ್ ISOFIX ಚೈಲ್ಡ್ ಸೀಟ್, ಎಲೆಕ್ಟ್ರಿಕ್ ಹ್ಯಾಂಡಲ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರ್ಸ್ ಈ ಕಾರಿನಲ್ಲಿವೆಯೆಂತೆ.

MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

ಹೆಕ್ಟರ್‌ ಎಸ್‌ಯುವಿನಲ್ಲಿ 90ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ಸ್ ಸೌಲಭ್ಯಗಳನ್ನು ನೀಡಿದ ಎಂಜಿ ಮೋಟಾರ್

ಕಾರಿನ ಬೆಲೆಗಳು(ಅಂದಾಜು)

ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14. 50 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 18 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
MG Hector Voice Command Details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X