ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಸಂಸ್ಥೆಯು ಹೆಕ್ಟರ್ ಕಾರು ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ತನ್ನ 2ನೇ ಕಾರು ಮಾದರಿಯಾದ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಹೀಗಾಗಿ ಹೊಸ ಕಾರು ಬಿಡುಗಡೆಗೂ ಮುನ್ನ ಭಾರೀ ತಯಾರಿಯಲ್ಲಿರುವ ಎಂಜಿ ಸಂಸ್ಥೆಯು ಇ ಚಾರ್ಜ್‌ ಬೆಯ್ಸ್‌ನೊಂದಿಗೆ ಹೊಸ ಒಪ್ಪಂದಕ್ಕೆ ಸಹಿ ಹಾಕಿದೆ.

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಇ ಚಾರ್ಜ್ ಬೆಯ್ಸ್ ಸಂಸ್ಥೆಯು ಹೋಮ್ ಎಲೆಕ್ಟ್ರಿಕ್ ಚಾರ್ಜಿಂಗ್ ಸಿಸ್ಟಂ ಒದಗಿಸುವಲ್ಲಿ ಮುಂಚೂಣಿಯಲ್ಲಿದ್ದು, ಇದೀಗ ಎಂಜಿ ಮೋಟಾರ್ ಸಂಸ್ಥೆಯ ಜೊತೆಗೂಡಿರುವ ಇ ಚಾರ್ಜ್ ಬೆಯ್ಸ್ ಸಂಸ್ಥೆಯು ಇಜೆಡ್ಎಸ್ ಎಲೆಕ್ಟ್ರಿಕ್ ಕಾರಿಗಾಗಿ ಹೋಮ್ ಚಾರ್ಜಿಂಗ್ ಸೌಲಭ್ಯವನ್ನು ನಿರ್ವಹಣೆ ಮಾಡುವ ಹೊಣೆಹೊತ್ತಿದೆ. ಇದೇ ವರ್ಷ ಡಿಸೆಂಬರ್‌ನಲ್ಲಿ ಇಜೆಡ್ಎಸ್ ಕಾರು ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಹಲವು ಸುಧಾರಿತ ತಂತ್ರಜ್ಞಾನಗಳ ಪ್ರೇರಣೆಯೊಂದಿಗೆ ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯುವ ತವಕದಲ್ಲಿದೆ.

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಭಾರೀ ಬೇಡಿಕೆಯಿದ್ದರೂ ಸಹ ಚಾರ್ಜಿಂಗ್ ಸೌಲಭ್ಯವು ಸಮರ್ಪಕವಾಗಿಲ್ಲವಾದ್ದರಿಂದ ಬಹುತೇಕ ಗ್ರಾಹಕರು ಇವಿ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಬಹುತೇಕ ಆಟೋ ಉತ್ಪಾದನಾ ಹೊಸ ಯೋಜನೆಗಳಿಗೆ ಚಾಲನೆ ನೀಡುತ್ತಿವೆ.

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಹೀಗಾಗಿ ಎಂಜಿ ಮೋಟಾರ್ ಸಹ ಚಾರ್ಜಿಂಗ್ ಸಿಸ್ಟಂ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಗಾಗಿ ಇ ಚಾರ್ಜ್ ಬೆಯ್ಸ್ ಸಂಸ್ಥೆಯೊಂದಿಗೆ ಕೈಜೋಡಿಸಿದ್ದು, ಎಲೆಕ್ಟ್ರಿಕ್ ಕಾರುಗಳ ನಿರ್ವಹಣೆಯನ್ನು ಇದು ಸರಳಗೊಳಿಸಲಿದೆ.

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಇನ್ನು ಇಜೆಡ್ಎಸ್ ಕಾರು ಡಿಸೆಂಬರ್ ಆರಂಭದಲ್ಲಿ ಮಾರಾಟಕ್ಕೆ ಲಭ್ಯವಿರಲಿದ್ದು, ಯುಕೆನಲ್ಲಿ ಬಿಡುಗಡೆ ಮಾಡಲಾದ ಇಜೆಡ್ಎಸ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ 50kW ಪ್ಲಗ್ ಮೂಲಕ ಕೇವಲ 43 ನಿಮಿಷಗಳಲ್ಲಿ ಶೇ.80 ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾದ ಸೌಲಭ್ಯವು ಈ ಕಾರಿನಲ್ಲಿದೆ. ಈ ಮೂಲಕ 141-ಬಿಎಚ್‌ಪಿ ಮತ್ತು 352-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಉತ್ತಮ ಪರ್ಫಾಮೆನ್ಸ್ ತೊರಬಲ್ಲ ಎಲೆಕ್ಟ್ರಿಕ್ ಎಸ್‌ಯುವಿ ಆಗಿ ಹೊರಹೊಮ್ಮಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 262 ಕಿ.ಮಿ ಮೈಲೇಜ್ ಹಿಂದಿರುಗಿಸುವುದಾಗಿ ಎಂಜಿ ಮೋಟಾರ್ ಭರವಸೆ ನೀಡಿದೆ.

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಹಾಗೆಯೇ ಇಜೆಡ್ಎಸ್ ಮೇಲೆ ಎಂಜಿ ಮೋಟಾರ್ ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ. ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯ ಇರಲಿದೆ.

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಭಾರತದಲ್ಲಿ ಬಿಡುಗಡೆಯಾಗಲಿರುವ ಇಜೆಡ್ಎಸ್ ಮಾದರಿಯು ಪ್ರತಿಚಾರ್ಜ್‌ಗೆ 320ರಿಂದ 350ಕಿ.ಮಿ ಮೈಲೇಜ್ ಸಾಮಾರ್ಥ್ಯವನ್ನು ಒದಗಿಸುವ ಬ್ಯಾಟರಿ ಬಳಕೆಯ ನೀರಿಕ್ಷೆಗಳಿದ್ದು, ಕಾರಿನ ಬೆಲೆಯು ರೂ.19 ಲಕ್ಷದಿಂದ ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಜನಪ್ರಿಯ ಎಸ್‌ಯುವಿ ಕಾರು ಖರೀದಿಸಿದ ಬಿ ಟೌನ್ ಡ್ರೀಮ್ ಗರ್ಲ್

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಇದಲ್ಲದೇ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.

MOST READ: ಮುಂದಿನ ಒಂದು ವರ್ಷದೊಳಗೆ ಏಳು ಹೊಸ ಕಾರು ಬಿಡುಗಡೆ ಮಾಡಲಿದೆ ಮಹೀಂದ್ರಾ

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಮೇಲೆ ಈ ಹಿಂದೆ ಇದ್ದ ಜಿಎಸ್‌ಟಿ ಪ್ರಮಾಣವನ್ನು ಶೇ. 12ರಿಂದ ಇದೀಗ ಶೇ.5 ಕ್ಕೆ ಇಳಿಕೆ ಮಾಡಲಾಗಿದ್ದು, ಇದು ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆ ಮಾಡಲು ಸಾಕಷ್ಟು ಸಹಕಾರಿಯಾಗಿದೆ. ಈ ಬಗ್ಗೆ ಎಲೆಕ್ಟ್ರಕ್ ವಾಹನ ಉತ್ಪಾದನಾ ಸಂಸ್ಥೆಗಳು ಹರ್ಷ ವ್ಯಕ್ತಪಡಿಸಿದ್ದು, ಇವಿ ವಾಹನ ಖರೀದಿಸುವ ಗ್ರಾಹಕರನ್ನು ಸೆಳೆಯಲು ಜಿಎಸ್‌ಟಿ ಇಳಿಕೆ ಮಾಡಿರುವುದು ಮಹತ್ವದ ಬದಲಾವಣೆಗೆ ಮೊದಲ ದಿಟ್ಟಹೆಜ್ಜೆ ಎಂದು ಹೇಳಲಾಗಿದೆ.

MOST READ: ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿವೆ 'ಮೇಡ್ ಇನ್ ಇಂಡಿಯಾ' ಕಿಯಾ ಸೆಲ್ಟೊಸ್

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಎಂಜಿ ಮೋಟಾರ್

ಇದರಿಂದ ಬಿಡುಗಡೆ ಹಂತದಲ್ಲಿರುವ ಎಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರ ಸರ್ಕಾರ ಹೊಸ ಯೋಜನೆಯು ಸಾಕಷ್ಟು ಸಹಕಾರಿಯಾಗಲಿದ್ದು, ಎಂಜಿ ಮೋಟಾರ್ ಸೇರಿದಂತೆ ಹಲವು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ಮುಂಬರುವ ಮುಂದಿನ ಕೆಲವೇ ದಿನಗಳಲ್ಲಿ ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಉತ್ಸಾಹದಲ್ಲಿವೆ.

Most Read Articles

Kannada
English summary
MG Motor & eChargeBays Collaborates To Provide Home Charging Infrastructure. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X