ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟವನ್ನು ಆಂಭಿಸಿದ ಕೆಲವೇ ದಿನಗಳಲ್ಲಿ ಗ್ರಾಹಕರ ಆರ್ಕಷಣೆಗೆ ಕಾರಣವಾಗಿರುವ ಎಂಜಿ ಮೋಟಾರ್ ಸಂಸ್ಥೆಯು ಮೊದಲ ಬಾರಿಗೆ ಡಿಜಿಟಲ್ ಶೋರೂಂ ಆರಂಭಿಸಿದ್ದು, ಹತ್ತು ಹಲವು ಸುಧಾರಿತ ತಂತ್ರಜ್ಞಾನಗಳ ಪ್ರೇರಣೆ ಹೊಂದಿರುವ ಡಿಜಿಟಲ್ ಶೋರೂಂನಲ್ಲಿ ಕಾರು ಖರೀದಿದಾರರಿಗೆ ವಿಭಿನ್ನ ಅನುಭವ ನೀಡಲಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಹೊಸ ಕಾರು ಖರೀದಿ ವೇಳೆ ಬಹುತೇಕ ಗ್ರಾಹಕರು ವೆರಿಯೆಂಟ್‌ಗಳ ಆಯ್ಕೆಯಲ್ಲಿ ಗೊಂದಲಕ್ಕೆ ಸಿಲುಕುವುದು ಕಾಮನ್. ಈ ನಿಟ್ಟಿನಲ್ಲಿ ಗ್ರಾಹಕರ ಮನಸ್ಸಿನಲ್ಲಿರುವ ಹತ್ತಾರು ಪ್ರಶ್ನೆಗಳಿಗೆ ಅತಿ ಸರಳವಾಗಿ ವಿವರಣೆ ನೀಡಬಲ್ಲ ಡಿಜಿಟಲ್ ಶೋರೂಂಗಳ ಪಾತ್ರ ಮಹತ್ವವನ್ನು ಪಡೆದುಕೊಳ್ಳುತ್ತಿದ್ದು, ಎಂಜಿ ಮೋಟಾರ್ ಸಹ ಈ ನಿಟ್ಟಿನಲ್ಲಿ ತನ್ನ ಮೊದಲ ಡಿಜಿಟಲ್ ಶೋರೂಂ ಅನ್ನು ಬೆಂಗಳೂರಿನಲ್ಲಿ ತೆರೆಯುವ ಮೂಲಕ ಕಾರು ಮಾರಾಟವನ್ನು ಮತ್ತಷ್ಟು ಸರಳಗೊಳಿಸುವ ಯೋಜನೆ ರೂಪಿಸಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಕಾರು ಖರೀದಿ ವೇಳೆ ಯಾವ ವೆರಿಯೆಂಟ್ ಖರೀದಿ ಮಾಡಿದರೆ ಉತ್ತಮ? ಲಭ್ಯವಿರುವ ಬಜೆಟ್‌ನಲ್ಲಿ ಯಾವೆಲ್ಲಾ ಫೀಚರ್ಸ್ ಪಡೆದುಕೊಳ್ಳಬಹುದು? ಎನ್ನುವ ಗ್ರಾಹಕರ ಸಾಮಾನ್ಯ ಪ್ರಶ್ನೆಗಳಿಗೆ ಡಿಜಿಟಲ್ ಶೋರೂಂ ಅತಿಸರಳವಾಗಿ ವಿವರಿಸಲಿದ್ದು, ಒಂದೇ ಸೂರಿನಡಿ ವಿವಿಧ ಮಾಹಿತಿಯನ್ನು ತಿಳಿಯಲು ಗ್ರಾಹಕರಿಗೆ ಇದು ಸಾಕಷ್ಟು ಸಹಕಾರಿಯಾಗಲಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಸದ್ಯ ಮಾರುಕಟ್ಟೆಯಲ್ಲಿ ಬಹುತೇಕ ಐಷಾರಾಮಿ ಕಾರು ಮಾರಾಟ ಮಳಿಗೆಗಳು ಡಿಜಿಟಲ್ ಶೋರೂಂ ಸೌಲಭ್ಯಗಳನ್ನು ಹೊಂದುತ್ತಿದ್ದು, ಎಂಜಿ ಮೋಟಾರ್ ಕೂಡಾ ಗ್ರಾಹಕರಿಗೆ ಐಷಾರಾಮಿ ಕಾರು ಖರೀದಿಯ ಅನುಭವವನ್ನು ನೀಡಲು ಮೊದಲ ಹಂತದ ಡಿಜಿಟಲ್ ಶೋರೂಂಗೆ ಚಾಲನೆ ನೀಡಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿ ಎಂಜಿ ಮೋಟಾರ್ ಮೊದಲ ಡಿಜಿಟಲ್ ಕಾರ್ ಶೋರೂಂ ತಲೆಎತ್ತಿದ್ದು, ಇದು ವಾಸ್ತವವಾಗಿ ಯಾವುದೇ ಕಾರುಗಳನ್ನು ಪ್ರದರ್ಶನಗೊಳಿಸುವುದಿಲ್ಲ. ಅದರ ಬದಲಾಗಿ ಡಿಜಿಟಲ್ ಪರದೆಗಳಲ್ಲೇ ನಿಮ್ಮ ಕಾರಿನ ಆಯ್ಕೆ, ಫೀಚರ್ಸ್ ಮತ್ತು ಬಣ್ಣಗಳ ಆಯ್ಕೆ ಮಾಡಬಹುದಾಗಿದ್ದು, ಬೇಡಿಕೆ ಮೇರೆಗೆ ಟೆಸ್ಟ್ ಡ್ರೈವ್ ಕಾರುಗಳನ್ನು ಪ್ರತ್ಯೇಕವಾಗಿ ಒದಗಿಸಲಾಗುತ್ತದೆ. ಹೀಗಾಗಿ ಇದೊಂದು ಸಂಪೂರ್ಣ ವಿಭಿನ್ನವಾದ ಕಾರು ಮಾರಾಟ ಮಳಿಗೆಯಾಗಿರಲಿದ್ದು, ಎಂಜಿ ಮೋಟಾರ್ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಬೆಂಗಳೂರಿನ ನಂತರ ದೇಶದ ಪ್ರಮುಖ ಮೆಟ್ರೋ ನಗರಗಳಲ್ಲೂ ಎಂಜಿ ಮೋಟಾರ್ ಡಿಜಿಟಲ್ ಶೋರೂಂಗಳನ್ನು ತೆರೆಯಲು ಸಿದ್ದತೆ ನಡೆಸಿದ್ದು, ಮುಂಬೈ ಮೂಲದ ಎಂಜಿನಿಯಿರಿಂಗ್ ಸಂಸ್ಥೆಯೊಂದು ಡಿಜಿಟಲ್ ಶೋರೂಂಗಳ ಅಭಿವೃದ್ದಿಯ ಹೊಣೆ ಹೊತ್ತಿದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಇನ್ನು ಎಂಜಿ ಮೋಟಾರ್ ಸಂಸ್ಥೆಯು ಜುಲೈನಲ್ಲಿ ತನ್ನ ಮೊದಲ ಕಾರು ಮಾದರಿಯಾದ ಹೆಕ್ಟರ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡುವ ಮೂಲಕ ಅತಿ ಕಡಿಮೆ ಅವಧಿಯಲ್ಲಿ ದಾಖಲೆ ಪ್ರಮಾಣದ ಕಾರುಗಳನ್ನು ಮಾರಾಟ ಮಾಡಿದ್ದು, ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

MOST READ: ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

MOST READ: ಮೂರನೇ ವ್ಯಕ್ತಿಯ ಕೈಗೆ ಕಾರು ಕೊಟ್ಟ ಮಾಲೀಕನಿಗೆ ಶಾಕ್ ಕೊಟ್ಟ ವಿಮಾ ಕಂಪನಿ..!

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 12.18 ಲಕ್ಷದಿಂದ ಆರಂಭಿಕ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಹೊಂದಿದೆ. ಗ್ರಾಹಕ ಬೇಡಿಕೆಗೆ ಅನುಗುಣವಾಗಿ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದಿದೆ.

MOST READ: ಸ್ಟಾರ್ ನಟಿಗೆ ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ನಮ್ಮ ಬೆಂಗಳೂರಿನಲ್ಲಿ ಮೊದಲ ಡಿಜಿಟಲ್ ಶೋರೂಂ ಆರಂಭಿಸಿದ ಎಂಜಿ ಮೋಟಾರ್

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

Most Read Articles

Kannada
English summary
MG Motor unveils India's first digital showroom in Bengaluru.
Story first published: Thursday, October 31, 2019, 19:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X