ಇಜೆಡ್ಎಸ್ ಬಿಡುಗಡೆಗೂ ಮುನ್ನ ಭಾರೀ ಸಿದ್ದತೆಯಲ್ಲಿ ಎಂಜಿ ಮೋಟಾರ್
ಕಳೆದ ತಿಂಗಳ ಹಿಂದಷ್ಟೇ ಯುಕೆನಲ್ಲಿ ತನ್ನ ಬಹುನೀರಿಕ್ಷಿತ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಿರುವ ಎಂಜಿ ಮೋಟಾರ್ ಸಂಸ್ಥೆಯು ಇದೀಗ ಭಾರತದಲ್ಲೂ ಹೊಸ ಕಾರಿನ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೊಸ ಇಜೆಡ್ಎಸ್ ಬಿಡುಗಡೆಗೂ ಮುನ್ನ ಎಲೆಕ್ಟ್ರಿಕ್ ಕಾರು ಖರೀದಿಗೆ ಅನುಕೂಲಕರ ವಾತಾವರಣ ಸೃಷ್ಠಿ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿರುವ ಎಂಜಿ ಮೋಟಾರ್ ಸಂಸ್ಥೆಯು ಅಗತ್ಯ ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡುತ್ತಿದ್ದು, ಡೆಲ್ಟಾ ಎಲೆಕ್ಟ್ರಾನಿಕ್ ಸಂಸ್ಥೆಯ ಜೊತೆಗೂಡಿ ಅಗತ್ಯವಿರುವ ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುತ್ತಿದೆ. ಇದು ಎಲೆಕ್ಟ್ರಿಕ್ ಖರೀದಿದಾರರನ್ನು ಉತ್ತೇಜಿಸಲು ನೆರವಾಗಲಿದ್ದು, ಮಾರಾಟ ಹೆಚ್ಚಳಕ್ಕೆ ಪೂರಕವಾಗಲಿದೆ.

ಇನ್ನು ಯುಕೆ(ಯುನೈಟೆಡ್ ಕಿಂಗ್‌ಡಮ್)ನಲ್ಲಿ ಎಂಜಿ ಇಜೆಡ್ಎಸ್ ಕಾರು ಭಾರತೀಯ ಬೆಲೆಗಳಲ್ಲಿ ರೂ.18.36 ಲಕ್ಷದಿಂದ ರೂ.20.07 ಲಕ್ಷಕ್ಕೆ ಬಿಡುಗಡೆ ಮಾಡಲಾಗಿದ್ದು, ಚೀನಿ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ ಜೆಡ್ಎಸ್ ಕಾರು ಮಾದರಿಯಲ್ಲೇ ಎಲೆಕ್ಟ್ರಿಕ್ ವರ್ಷನ್ ಇಜೆಡ್ಎಸ್ ಮಾದರಿಯು 5 ಆಸನ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಿದೆ.

ಸದ್ಯ ಬಿಡುಗಡೆ ಮಾಡಲಾಗಿರುವ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಸೆಪ್ಟೆಂಬರ್ ಅಂತ್ಯಕ್ಕೆ ಗ್ರಾಹಕರ ಕೈಸೆರಲಿದ್ದು, ಭಾರತದಲ್ಲೂ ಇದೇ ಕಾರು 2019ರ ಡಿಸೆಂಬರ್ ಆರಂಭದಲ್ಲಿ ಮಾರಾಟಕ್ಕೆ ಲಭ್ಯವಿರಲಿದೆಯೆಂತೆ.

ಯುಕೆನಲ್ಲಿ ಬಿಡುಗಡೆ ಮಾಡಲಾಗಿರುವ ಇಜೆಡ್ಎಸ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯವನ್ನು ಹೊಂದಿದ್ದು, 50kW ಪ್ಲಗ್ ಮೂಲಕ ಕೇವಲ 43 ನಿಮಿಷಗಳಲ್ಲಿ ಶೇ.80 ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದು ಈ ಸೌಲಭ್ಯವು ಈ ಕಾರಿನಲ್ಲಿದೆ. ಈ ಮೂಲಕ 141-ಬಿಎಚ್‌ಪಿ ಮತ್ತು 352-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಉತ್ತಮ ಪರ್ಫಾಮೆನ್ಸ್ ತೊರಬಲ್ಲ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾಗಿ ಹೊರಹೊಮ್ಮಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 262 ಕಿ.ಮಿ ಮೈಲೇಜ್ ಹಿಂದಿರುಗಿಸುವುದಾಗಿ ಎಂಜಿ ಮೋಟಾರ್ ಸಂಸ್ಥೆಯು ಭರವಸೆ ನೀಡಿದೆ.

ಇಜೆಡ್ಎಸ್ ಮಾದರಿಯ ಮೇಲೆ ಎಂಜಿ ಮೋಟಾರ್ ಸಂಸ್ಥೆಯು ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ.

ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯವನ್ನು ಪಡೆದುಕೊಂಡಿದೆ.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಇದೇ ಮಾದರಿಯು ಭಾರತದಲ್ಲೂ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಈಗಾಗಲೇ ಇಜೆಡ್ಎಸ್ ಕಾರಿನ ಉತ್ಪಾದನೆಗೆ ಚಾಲನೆ ನೀಡುವ ಮೂಲಕ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಸಹ ಎಂಜಿ ಮೋಟಾರ್ ಈಗಾಗಲೇ ಆರಂಭಗೊಳಿಸಿದೆ.
MOST READ: ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಕೆಲವು ಮಾಹಿತಿಗಳ ಪ್ರಕಾರ ಎಂಜಿ ಮೋಟಾರ್ ಸಂಸ್ಥೆಯು ಭಾರತದಲ್ಲಿ ಬಿಡುಗಡೆಯಾಗಲಿರುವ ಇಜೆಡ್ ಕಾರಿನ ತಾಂತ್ರಿಕ ಅಂಶಗಳಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆಗಳಿದ್ದು, ಸದ್ಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ 452 ಕಿ.ಮಿ ಮೈಲೇಜ್ ಸಾಮಾರ್ಥ್ಯದ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿಗೆ ಪ್ರತಿ ಸ್ಪರ್ಧಿಯಾಗಿ ತುಸು ಹೆಚ್ಚಿನ ಮಟ್ಟದ ಬ್ಯಾಟರಿ ಸೌಲಭ್ಯವನ್ನ ಒದಗಿಸಬಹುದಾಗಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಭಾರತದಲ್ಲಿ ಬಿಡುಗಡೆಯಾಗಲಿರುವ ಇಜೆಡ್ಎಸ್ ಮಾದರಿಯು ಪ್ರತಿಚಾರ್ಜ್‌ಗೆ 320ರಿಂದ 350ಕಿ.ಮಿ ಮೈಲೇಜ್ ಸಾಮಾರ್ಥ್ಯವನ್ನು ಒದಗಿಸುವ ಬ್ಯಾಟರಿ ಬಳಕೆಯ ನೀರಿಕ್ಷೆಗಳಿದ್ದು, ಕಾರಿನ ಬೆಲೆಯು ರೂ.19 ಲಕ್ಷದಿಂದ ರೂ.22 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಇದಲ್ಲದೇ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಮೇಲೆ ಈ ಹಿಂದೆ ಇದ್ದ ಜಿಎಸ್‌ಟಿ ಪ್ರಮಾಣವನ್ನು ಶೇ. 12ರಿಂದ ಇದೀಗ ಶೇ.5 ಕ್ಕೆ ಇಳಿಕೆ ಮಾಡಲಾಗಿದ್ದು, ಇದು ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆ ಮಾಡಲು ಸಾಕಷ್ಟು ಸಹಕಾರಿಯಾಗಿದೆ. ಈ ಬಗ್ಗೆ ಎಲೆಕ್ಟ್ರಕ್ ವಾಹನ ಉತ್ಪಾದನಾ ಸಂಸ್ಥೆಗಳು ಹರ್ಷ ವ್ಯಕ್ತಪಡಿಸಿದ್ದು, ಇವಿ ವಾಹನ ಖರೀದಿಸುವ ಗ್ರಾಹಕರನ್ನು ಸೆಳೆಯಲು ಜಿಎಸ್‌ಟಿ ಇಳಿಕೆ ಮಾಡಿರುವುದು ಮಹತ್ವದ ಬದಲಾವಣೆಗೆ ಮೊದಲ ದಿಟ್ಟಹೆಜ್ಜೆ ಎಂದು ಹೇಳಲಾಗಿದೆ.


Click it and Unblock the Notifications