ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಮುಂದಿನ ತಿಂಗಳು ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿರುವ ಎಂಜಿ ಮೋಟಾರ್ ಬಹುನೀರಿಕ್ಷಿತ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಗ್ರಾಹಕರ ಆಕರ್ಷಣೆ ಕಾರಣವಾಗಿದ್ದು, ಮೊದಲ ಹಂತದಲ್ಲಿ ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಹೊಸ ಎಲೆಕ್ಟ್ರಿಕ್ ಕಾರು ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಡಿ.5ಕ್ಕೆ ಅನಾವರಣಗೊಂಡ ನಂತರ 2020ರ ಜನವರಿವರಿ ಆರಂಭದಲ್ಲಿ ಇಜೆಡ್ಎಸ್ ಕಾರು ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದ್ದು, ಮೊದಲ ಹಂತವಾಗಿ ದೆಹಲಿ, ಬೆಂಗಳೂರು, ಮುಂಬೈ, ಅಹಮದಾಬಾದ್ ಮತ್ತು ಹೈದ್ರಾಬಾದ್ ನಗರಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ. ತದನಂತರವಷ್ಟೇ ದೇಶದ ಇತರೆ ಪ್ರಮುಖ ನಗರಗಳಲ್ಲಿ ಎಲೆಕ್ಟ್ರಿಕ್ ಕಾರಿನ ಜಾಲ ವಿಸ್ತರಣೆ ಮಾಡಲಿರುವ ಎಂಜಿ ಮೋಟಾರ್ ಸಂಸ್ಥೆಯು ಸೀಮಿತ ಅವಧಿಯೊಳಗೆ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಖರೀದಿಸುವ ಗ್ರಾಹಕರಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಹೇಳಿಕೊಂಡಿದೆ.

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಇನ್ನುಳಿದಂತೆ ಹೊಸ ಕಾರು ಬಿಡುಗಡೆಗೂ ಮುನ್ನ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿರುವ ಎಂಜಿ ಸಂಸ್ಥೆಯು ಗರಿಷ್ಠ ಪ್ರಮಾಣದ ಗ್ರಾಹಕರನ್ನು ಸೆಳೆಯಲು ಮುಂದಾಗಿದ್ದು, ವಾರ್ಷಿಕವಾಗಿ 3 ಸಾವಿರ ಎಲೆಕ್ಟ್ರಿಕ್ ಕಾರುಗಳ ಮಾರಾಟ ಗುರಿಹೊಂದಿದೆ.

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಇನ್ನು ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಮತ್ತು ಬ್ಯಾಟರಿ ಸಾಮಾರ್ಥ್ಯದ ಕುರಿತು ವಿವಿಧ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಹೊಸ ಕಾರು ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ.

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಹೊಸ ಕಾರಿನಲ್ಲಿರುವ ತಾಂತ್ರಿಕ ಅಂಶಗಳ ಕುರಿತಾದ ಮಹತ್ವದ ಮಾಹಿತಿಗಳು ಒಂದೊಂದಾಗಿ ಸೋರಿಕೆಯಾಗುತ್ತಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ಶುದ್ದಗಾಳಿ ಒದಗಿಸುವ ಏರ್ ಫಿಲ್ಟರ್ ಸೌಲಭ್ಯವನ್ನು ಒದಗಿಸಲಿದೆಯೆಂತೆ. ಇದು ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಹಾಗೆಯೇ ಜೆಡ್ಎಸ್ ಕಾರು ಎಲೆಕ್ಟ್ರಿಕ್ ವರ್ಷನ್‌ನಲ್ಲಿ ಮಾತ್ರವಲ್ಲದೇ ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಆಯ್ಕೆಯಲ್ಲೂ ಸಹ ಬಿಡುಗಡೆಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ಜೆಡ್ಎಸ್ ಕಾರು ಬಿಡುಗಡೆಗೂ ಮುನ್ನ ಇಜೆಡ್ಎಸ್ ಕಾರು ಬಿಡುಗಡೆಯಾಗಲಿದ್ದು, ತದನಂತರವಷ್ಟೇ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರವಷ್ಟೇ ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ರಸ್ತೆಗಿಳಿಯಲಿವೆ. ಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 320ರಿಂದ 350ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ.

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಹಾಗೆಯೇ ಇಜೆಡ್ಎಸ್ ಮೇಲೆ ಎಂಜಿ ಮೋಟಾರ್ ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ.

MOST READ: ಈ 6 ಕಾರಣಗಳಿಂದಾಗಿ ಫುಲ್ ಫೇಮಸ್ ಆಯ್ತು ಕಿಯಾ ಸೆಲ್ಟೋಸ್

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯ ಇರಲಿದೆ.

MOST READ: ನಟಿ ಊರ್ವಶಿ ರೌಟೇಲಾ ದುಬಾರಿ ಬೈಕ್ ಖರೀದಿಸಿದ್ದು ಯಾರಿಗಾಗಿ ಗೊತ್ತಾ?

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಇದರೊಂದಿಗೆ ಹೊಸ ಕಾರು ಹೆಕ್ಟರ್ ಕಾರಿಗಿಂತಲೂ ತಳಮಟ್ಟದ ಕಾರು ಮಾದರಿಯಾಗಿ ರಸ್ತೆಗಿಳಿಯಲಿದ್ದು, ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್, ಏರ್ ಫಿಲ್ಟರ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

MOST READ: ಅಧಿಕ ಮೈಲೇಜ್ ಪ್ರೇರಿತ ಹೈಬ್ರಿಡ್ ಎಂಜಿನ್ ಪಡೆಯಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ದೇಶದ ಪ್ರಮುಖ ಐದು ಮಹಾನಗರಗಳಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ ಎಂಜಿ ಇಜೆಡ್ಎಸ್

ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.17 ಲಕ್ಷದಿಂದ ರೂ.20 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

Most Read Articles

Kannada
English summary
MG Motor India will launch the ZS EV only 5 cities in the country. Read in Kannada.
Story first published: Friday, November 15, 2019, 18:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X