ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಹಲವು ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದು, ಇದೇ ಮೊದಲ ಬಾರಿಗೆ ಮೊಬೈಲ್ ಡೀಲರ್ಸ್ ಪರಿಕಲ್ಪನೆಗೆ ಚಾಲನೆ ನೀಡಿದೆ.

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಮಾರಾಟ ಮಳಿಗೆಗಳು ಇಲ್ಲದ ನಗರದ ಪ್ರಮುಖ ಪ್ರದೇಶಗಳಲ್ಲಿ ಮೊಬೈಲ್ ಡೀಲರ್ಸ್‌ಗಳು ಕಾರು ಖರೀದಿದಾರರನ್ನು ಸೆಳೆಯುವಲ್ಲಿ ಪ್ರಮುಖ ಪಾತ್ರವಹಿಸಲಿದ್ದು, ಈಗಾಗಗಲೇ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಮೊಬೈಲ್ ಡೀಲಲರ್ಸ್‌ಗಳ ಮೂಲಕ ಭಾರೀ ಪ್ರಮಾಣದ ಕಾರು ಮಾರಾಟವನ್ನು ತನ್ನದಾಗಿಸಿಕೊಂಡಿವೆ. ಹೀಗಾಗಿ ಡಿಜಿಟಲ್ ಡೀಲರ್ಸ್ ಮತ್ತು ಮೊಬೈಲ್ ಡೀಲರ್ಸ್‌ನಂತಹ ಪರಿಕಲ್ಪನೆ ಮೂಲಕ ಕಾರು ಮಾರಾಟದಲ್ಲಿ ಮತ್ತಷ್ಟು ಹೊಸ ಸಂಚಲನ ಸೃಷ್ಠಿಸಲು ಸಜ್ಜಾಗಿರುವ ಎಂಜಿ ಮೋಟಾರ್ ಸಂಸ್ಥೆಯು ಟಾಟಾ ಹ್ಯಾರಿಯರ್, ಮಹೀಂದ್ರಾ ಎಕ್ಸ್‌ಯುವಿ500, ಕಿಯಾ ಸೆಲ್ಟೊಸ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಇನ್ನು ಹೆಕ್ಟರ್ ಎಸ್‌ಯುವಿ ಕಾರು ಭಾರೀ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದ್ದು, ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳು ಹೊಸ ಕಾರಿನ ಬೇಡಿಕೆಗೆ ಪ್ರಮಖ ಕಾರಣವಾಗಿವೆ.

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 12.18 ಲಕ್ಷದಿಂದ ಆರಂಭಿಕ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಹೊಂದಿದೆ. ಗ್ರಾಹಕ ಬೇಡಿಕೆಗೆ ಅನುಗುಣವಾಗಿ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದಿದೆ.

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿ‍ಎಲ್ ಕಳೆದುಕೊಂಡ ಡ್ರೈವರ್..!

ಕಾರು ಖರೀದಿದಾರರನ್ನು ಸೆಳೆಯಲು ಮೊಬೈಲ್ ಡೀಲರ್ಸ್‌ಗಳಿಗೆ ಚಾಲನೆ ನೀಡಿದ ಎಂಜಿ ಮೋಟಾರ್

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Most Read Articles

Kannada
English summary
MG Hector mobile showroom launched. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X