ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿ ಮೋಟಾರ್ ಸಂಸ್ಥೆಯು ಹೆಕ್ಟರ್ ಎಸ್‌ಯುವಿ ಕಾರು ಬಿಡುಗಡೆಯ ಯಶಸ್ವಿ ನಂತರ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆ ಮಾಡುವುದಕ್ಕೆ ಸಜ್ಜುಗೊಳ್ಳುತ್ತಿದ್ದು, ಇದೇ ವರ್ಷ ಡಿಸೆಂಬರ್ ಅಂತ್ಯಕ್ಕೆ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಬಿಡುಗಡೆಯ ನಂತರ ವಿವಿಧ ಮಾದರಿಯ ಅಗ್ಗದ ಬೆಲೆಯ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಹೆಕ್ಟರ್ ಕಾರು ಆರಂಭಿಕವಾಗಿ ರೂ.12.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ರೂ.9.50 ಲಕ್ಷದಿಂದ ಮಾರಾಟಕ್ಕೆ ಲಭ್ಯವಿರುವ ಕಿಯಾ ಸೆಲ್ಟೊಸ್, ಹ್ಯುಂಡೈ ಕ್ರೆಟಾ ಕಾರುಗಳಿಗೆ ಪೈಪೋಟಿಯಾಗಿ ಹೊಸ ವಿನ್ಯಾಸದ ಮತ್ತೊಂದು ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಗೆ ಎಂಜಿ ಮೋಟಾರ್ ಸಿದ್ದತೆ ನಡೆಸಿದೆ. ಇದು ಡಿಸೆಂಬರ್‌ನಲ್ಲಿ ನಡೆಯಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಅನಾವರಣದ ನಂತರ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ಕಾರು ಪ್ರದರ್ಶನಗೊಳ್ಳಲಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

2020ರ ಆಟೋ ಎಕ್ಸ್‌ಪೋದಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾತ್ರವಲ್ಲದೇ ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಕ್ಯಾಸಿನಿ ಎಸ್‌ಯುವಿ ಕಾರಿಗೆ ಪೈಪೋಟಿಯಾಗಿ 7 ಸೀಟರ್ ಹೆಕ್ಟರ್ ಕಾರು ಮಾದರಿಯನ್ನು ಸಹ ಪ್ರದರ್ಶನಗೊಳಿಸಲಿದೆಯೆಂತೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಎಂಟ್ರಿ ಲೆವೆಲ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಾದ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೂ ಪೈಪೋಟಿ ನೀಡಲಿರುವ ಎಂಜಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಮಾಹಿತಿಗಳ ಪ್ರಕಾರ, ಎಂಜಿ ಸಂಸ್ಥೆಯು ಬಿಡುಗಡೆ ಮಾಡಲು ಉದ್ದೇಶಿಸಿರುವ ಜೆಡ್ಎಸ್ ಕಾರು ಮಾದರಿಯಲ್ಲೇ ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಂಜಿನ್ ಆಯ್ಕೆಗಳನ್ನು ಹೊಂದಿರಲಿದ್ದು, ಮೊದಲ ಹಂತದಲ್ಲಿ ಎಲೆಕ್ಟ್ರಿಕ್ ಮಾದರಿಯಲ್ಲಿ ಹಾಗೂ ತದನಂತರ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆ ಬಿಡುಗಡೆ ಮಾಡಲಾಗುತ್ತದೆ ಎನ್ನುವ ಮಾಹಿತಿಯಿದೆ. ಇದಕ್ಕೆ ಕಾರಣ ಏನೆಂದರೆ ಜೆಡ್ಎಸ್ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆಯ ಕುರಿತಾಗಿ ಕೇಂದ್ರ ಸಾರಿಗೆ ಇಲಾಖೆಯಿಂದ ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರವನ್ನು ಸಹ ಪಡೆದುಕೊಂಡಿರುವುದ್ದು, ಇದರಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಪರೀಕ್ಷೆಯ ವಿವರಗಳನ್ನು ಸ್ಪಷ್ಟವಾಗಿ ದಾಖಲಿಸಲಾಗಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೀಗಾಗಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಹೆಕ್ಟರ್ ಕಾರಿಗಿಂತಲೂ ತಳಮಟ್ಟದ ಕಾರು ಮಾದರಿಯಾಗಿ ರಸ್ತೆಗಿಳಿಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಹೊಸ ಕಾರಿನಲ್ಲಿ ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿಲಿದೆ.

MOST READ: ನೀರು ಮತ್ತು ಆಲ್ಕೋಹಾಲ್‍‍ನಿಂದ ಚಲಿಸಲಿದೆ ಈ ಎಂಜಿನ್..!

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.

MOST READ: 2020ರ ಆಟೋ ಎಕ್ಸ್‌ಪೋದಲ್ಲಿ ಸದ್ದು ಮಾಡಲಿವೆ ಈ ಹೊಸ ಎಸ್‌ಯುವಿ ಕಾರುಗಳು..!

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಬಿಡುಗಡೆಯಾಗಲಿರುವ ಜೆಡ್ಎಸ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಹೆಕ್ಟರ್ ಕಾರು ಮಾದರಿಯಲ್ಲೇ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಜೊತೆಗೆ ಎಲೆಕ್ಟ್ರಿಕ್ ವರ್ಷನ್‌ನಲ್ಲೂ ಬಿಡುಗಡೆಯಾಗಲಿದೆ.

MOST READ: ಮೂರನೇ ವ್ಯಕ್ತಿಯ ಕೈಗೆ ಕಾರು ಕೊಟ್ಟ ಮಾಲೀಕನಿಗೆ ಶಾಕ್ ಕೊಟ್ಟ ವಿಮಾ ಕಂಪನಿ..!

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಚ್ಚ ಹೊಸ ಪೆಟ್ರೋಲ್ ಮತ್ತು ಹೈಬ್ರಿಡ್ ಎರಡು ಎಂಜಿನ್‌ಗಳು ಬಿಎಸ್-6 ವೈಶಿಷ್ಟ್ಯತೆಗೆ ಸಮನಾದ ಯುರೋ-6 ನಿಯಮ ಅನುಸಾರ ಅಭಿವೃದ್ದಿ ಹೊಂದಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಎಂಜಿ ಮೋಟಾರ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಈ ಹಿನ್ನೆಲೆಯಲ್ಲಿ ರೂ.9.50 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿಯಾಗಿ ಜೆಡ್ಎಸ್ ಕಾರು ಮಾರಾಟಕ್ಕೆ ಲಭ್ಯವಾಗಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

Source: ICN

Most Read Articles

Kannada
English summary
According to report, MG Motor is planning to launch new compact SUV in India by next year.
Story first published: Tuesday, October 29, 2019, 16:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X