Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಗ್ಗದ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್
ಎಂಜಿ ಮೋಟಾರ್ ಸಂಸ್ಥೆಯು ಇದೇ ತಿಂಗಳು 2ನೇ ವಾರದಲ್ಲಿ ತನ್ನ ಮೊದಲ ಕಾರು ಮಾದರಿಯಾದ ಹೆಕ್ಟರ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡುತ್ತಿದ್ದು, ಹೆಕ್ಟರ್ ಬಿಡುಗಡೆಯಾದ ನಂತರ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಸಿದ್ದವಾಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿರುವ ಎಂಜಿ ಸಂಸ್ಥೆಯು ರೂ.10 ಲಕ್ಷದೊಳಗೆ ಹೊಸ ಇವಿ ಕಾರುಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಬ್ರಿಟಿಷ್ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆ ಎಂಜಿ ಮೋಟಾರ್ ಸಂಸ್ಥೆಯನ್ನು ಚೀನಾದ ಸೈಕ್ ಸಂಸ್ಥೆಯು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುತ್ತಿದ್ದು, ಸಾಮಾನ್ಯ ಕಾರು ಮಾದರಿಗಳಲ್ಲದೇ ಎಲೆಕ್ಟ್ರಿಕ್ ಕಾರುಗಳು ಮೇಲೂ ಹೆಚ್ಚು ಗಮನಹರಿಸುತ್ತಿದೆ. ಇದಕ್ಕಾಗಿಯೇ ಹೆಕ್ಟರ್ ಕಾರು ಬಿಡುಗಡೆ ನಂತರ ಎಲೆಕ್ಟ್ರಿಕ್ ಕಾರುಗಳ ಮೇಲೆಯೇ ಹೆಚ್ಚಿನ ಗಮನಹರಿಸಲು ನಿರ್ಧರಿಸಿದೆ.

2030ರ ವೇಳೆ ಶೇ.100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಸಂಬಂಧ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮೇಲೆ ಹೆಚ್ಚಿನ ಗಮನಹರಿಸಿದ್ದು, ಎಂಜಿ ಮೋಟಾರ್ ಕೂಡಾ ಇದೇ ನಿಟ್ಟಿನಲ್ಲಿ ಯೋಜನೆ ರೂಪಿಸಿದೆ.

ಈ ಸಂಬಂಧ ಭಾರತೀಯ ಕಾರು ಖರೀದಿದಾರರ ಆದ್ಯತೆ ತಿಳಿಯಲು ಮಾರುಕಟ್ಟೆ ಅಧ್ಯಯನ ನಡೆಸಿರುವ ಎಂಜಿ ಮೋಟಾರ್ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ರೂ.10 ಲಕ್ಷದೊಳಗೆ ಇರುವಂತೆ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಬೇಕೆಂದು ನಿರ್ಧರಿಸಿದೆಯೆಂತೆ.

ಈ ಬಗ್ಗೆ ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಎಂಜಿ ಮೋಟಾರ್ ಇಂಡಿಯಾ ಸಂಸ್ಥೆಯ ನಿರ್ದೇಶಕ ರಾಜೀವ್ ಛಬಾ ಅವರು, ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರು ಖರೀದಿಗೆ ಗ್ರಾಹಕರು ಸಿದ್ದರಿದ್ದರೂ ಪೂರಕವಾದ ವಾತಾವರಣ ಇಲ್ಲದಿರುವುದು ಇವಿ ವಾಹನಗಳ ಮಾರಾಟಕ್ಕೆ ಹಿನ್ನಡೆಯಾಗುತ್ತಿದ್ದು, ರೂ.10 ಲಕ್ಷದೊಳಗೆ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಎಂಜಿ ಯೋಜನೆಯು ಭಾರತದಲ್ಲಿ ಸಫಲವಾಗುವ ವಿಶ್ವಾಸ ಇದೆ ಎಂದಿದ್ದಾರೆ.

ಇನ್ನು ಹೆಕ್ಟರ್ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸುತ್ತಿರುವ ಎಂಜಿ ಸಂಸ್ಥೆಯು ತದನಂತರ ಡಿಸೆಂಬರ್ ಕೊನೆಯಲ್ಲಿ ಮೊದಲ ಎಲೆಕ್ಟ್ರಿಕ್ ಆವೃತ್ತಿಯಾದ ಇಜೆಡ್ಎಸ್ ಕಾರನ್ನು ಕೂಡಾ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇಜೆಡ್ಎಸ್ ಎಲೆಕ್ಟ್ರಿಕ್ ಹೊರತುಪಡಿಸಿ ಸಾಮಾನ್ಯ ಮಾದರಿಯ ಜೆಡ್ಎಸ್ ಕಾರು ಈಗಾಗಲೇ ಚೀನಿ ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿದ್ದು, ಮೂಲ ಕಾರಿನ ಮಾದರಿಯಲ್ಲೇ ವಿನೂತನ ವಿನ್ಯಾಸಗಳನ್ನು ಹೊತ್ತುಬರುತ್ತಿರುವ ಇಜೆಡ್ಎಸ್ ಕೂಡಾ ಅತ್ಯುತ್ತಮ ಮೈಲೇಜ್ ರೇಂಜ್ ಪ್ರೇರಣೆಯ ಬ್ಯಾಟರಿ ಸೌಲಭ್ಯಗಳನ್ನು ಹೊಂದಿರಲಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರತಿ ಚಾರ್ಜ್‌ಗೆ 300ಕಿ.ಮಿ ನೀಡುವ ಆರಂಭಿಕ ಆವೃತ್ತಿಯನ್ನು ಇಲ್ಲವೇ ಪ್ರತಿ ಚಾರ್ಜ್‌ಗೆ 420 ಕಿ.ಮಿ ಮೈಲೇಜ್ ನೀಡುವ ಹೈ ಎಂಡ್ ಮಾದರಿಯನ್ನು ಖರೀದಿಸಬಹುದಾಗಿದ್ದು, ಹೊಸ ಕಾರಿನ ಬೆಲೆಗಳು ಕೂಡಾ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಭಾರೀ ಅಗ್ಗವಾಗಿರಲಿವೆ.

ಸದ್ಯ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿರುವ ಹ್ಯುಂಡೈ ಕೊನಾ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರುಗಳ ಮೈಲೇಜ್ ರೇಂಜ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸುತ್ತಿರುವ ಇಜೆಡ್ಎಸ್ ಕಾರು ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅಚ್ಚರಿಯ ಬೆಲೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.
MOST READ:ಜುಲೈ 9ರಂದು ಬಿಡುಗಡೆಯಾಗಲಿರುವ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿನ ಸ್ಪೆಷಲ್ ಏನು?

ಮಾಹಿತಿಗಳ ಪ್ರಕಾರ, ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಮೈಲೇಜ್ ರೇಂಜ್ ಆಧಾರದ ಮೇಲೆ ದೆಹಲಿ ಎಕ್ಸ್‌ಶೋರೂಂ ಪ್ರಕರ ರೂ.10 ಲಕ್ಷದಿಂದ ರೂ.13 ಲಕ್ಷದೊಳಗೆ ಬೆಲೆ ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ಕೊನಾ ಮತ್ತು ಎಕ್ಸ್‌ಯುವಿ ಕಾರುಗಳಿಂತಲೂ ಇದು ಅತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆಯೆಂತೆ.