ಹೆಕ್ಟರ್ ನಂತರ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್..!
ಎಂಜಿ ಮೋಟಾರ್ ಸಂಸ್ಥೆಯು ನಿನ್ನೆಯಷ್ಟೇ ತನ್ನ ಬಹುನೀರಿಕ್ಷಿತ ಹೆಕ್ಟರ್ ಕಾರನ್ನು ಅನಾವರಣಗೊಳಿಸಿ ಜೂನ್ ಮಧ್ಯಂತರದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಈ ವೇಳೆ ಮುಂದಿನ ಒಂದು ವರ್ಷದೊಳಗೆ ಮತ್ತೆರಡು ಹೊಸ ನಮೂನೆಯ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಸುಳಿವು ನೀಡಿದೆ.

ಹೆಕ್ಟರ್ ಕಾರು ಬಿಡುಗಡೆಯ ಮಾಹಿತಿಯನ್ನು ಹಂಚಿಕೊಳ್ಳುತ್ತಲೇ ಭವಿಷ್ಯದ ಯೋಜನೆಗಳ ಬಗೆಗೆ ಮಾಹಿತಿ ನೀಡಿದ ಎಂಜಿ ಮೋಟಾರ್ ಸಂಸ್ಥೆಯು ಕಾರು ಮಾರಾಟದಲ್ಲಿ ಮುನ್ನಡೆ ಸಾಧಿಸುತ್ತಿರುವ ಭಾರತೀಯ ಮಾರುಕಟ್ಟೆಗಾಗಿ ಮತ್ತಷ್ಟು ಹೊಸ ಕಾರುಗಳನ್ನು ಸಿದ್ದಗೊಳಿಸುತ್ತಿರುವುದಾಗಿ ಹೇಳಿಕೊಂಡಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಮತ್ತು ಸೆಡಾನ್ ಆವೃತ್ತಿಗಳಲ್ಲಿ ಹೊಸ ಸಂಚಲನ ಮೂಡಿಸುವ ನೀರಿಕ್ಷೆಯಲ್ಲಿದೆ.

ಇನ್ನು ಅನಾವರಣಗೊಳಿಸಲಾದ ಹೆಕ್ಟರ್ ಕಾರು ಕೂಡಾ ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದ್ದು, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಮತ್ತು ಮಹೀಂದ್ರಾ ಎಕ್ಸ್‌ಯುವಿ 500 ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಭರವಸೆ ಮೂಡಿಸಿದೆ.

ಮುಂದಿನ ತಿಂಗಳು ಜೂನ್ ಆರಂಭದಲ್ಲಿ ಹೆಕ್ಟರ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭವಾಗಲಿದ್ದರೆ ತಿಂಗಳಾಂತ್ಯಕ್ಕೆ ಹೊಸ ಕಾರು ಗ್ರಾಹಕರ ಕೈ ಸೇರಲಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಕಡಿಮೆ ದರಗಳಲ್ಲಿ ಹೊಸ ಹೆಕ್ಟರ್ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.

ಎಂಜಿನ್ ಸಾಮರ್ಥ್ಯ
ಹೆಕ್ಟರ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಇದರಲ್ಲಿ ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 141-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಹಾಗೆಯೇ ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಪಡೆದುಕೊಂಡಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಜೊತೆಗೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈಎಂಡ್ ಆವೃತ್ತಿಯು 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಹೊಂದಿರಲಿದ್ದು, ಉತ್ತಮ ಪರ್ಫಾಮೆನ್ಸ್ ನೀಡಬಲ್ಲದು.

ಇದರೊಂದಿಗೆ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ರಿಮೋಟ್ ಕಾರ್ ಆಪರೇಷನ್, ಸ್ಮಾರ್ಟ್ ಸಿಮ್ ಪ್ರೇರಿತ ಇಂಟರ್‌ನೆಟ್ ಸೌಲಭ್ಯ, 10.4-ಇಂಚಿನ ಟಚ್ ಇನ್ಪೋಟೈನ್ ಸಿಸ್ಟಂ, 8-ಸ್ಪೀಕರ್ಸ್‌ಗಳು, ಆನ್ ಲೈನ್ ನೆವಿಗೇಷನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 7-ಇಂಚಿನ ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ, ಪವರ್ ಅಡ್ಜೆಸ್ಟೆಬಲ್ ರಿಯರ್ ವ್ಯೂ ಮಿರರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಪಡೆದುಕೊಂಡಿದೆ.

ಜೊತೆಗೆ ಹೊಸ ಕಾರಿನಲ್ಲಿ ರೂಫ್ ರೈಲ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಎರಡು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ರಿಯರ್ ಎಸಿ ವೆಂಟ್ಸ್, ಸನ್ ಗ್ಲಾಸ್ ಹೊಲ್ಡರ್, ಡ್ರೈವರ್ ಆರ್ಮ್ ರೆಸ್ಟ್, ಪನಾರೊಮಿಕ್ ಸನ್‌ರೂಫ್, 17-ಇಂಚಿನ ಅಲಾಯ್ ವೀಲ್ಹ್, ರಿಯರ್ ಸೀಟ್ ಆರ್ಮ್ ರೆಸ್ಟ್, ಆರು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೌಲಭ್ಯದೊಂದಿಗೆ ಲೆದರ್ ಸೀಟ್‌ಗಳನ್ನು ಜೋಡಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆಗೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಕ್ರೂಸ್ ಕಂಟ್ರೊಲರ್ ISOFIX ಚೈಲ್ಡ್ ಸೀಟ್, ಎಲೆಕ್ಟ್ರಿಕ್ ಹ್ಯಾಂಡಲ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರ್ಸ್ ಈ ಕಾರಿನಲ್ಲಿವೆಯೆಂತೆ.
MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

ಕಾರಿನ ಬೆಲೆಗಳು(ಅಂದಾಜು)
ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 19 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications