ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನಾ ಸಾಮಾರ್ಥ್ಯವನ್ನು ಹೆಚ್ಚಿಸಲು ಯೋಜನೆ ರೂಪಿಸಿದ್ದು, ನವೆಂಬರ್ 1ರಿಂದ ಹೊಸ ಕಾರುಗಳ ಉತ್ಪಾದನಾ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಲಿದೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಬೇಡಿಕೆಗಿಂತಲೂ ಉತ್ಪಾದನಾ ಪ್ರಮಾಣ ಕಡಿಮೆ ಇರುವ ಹಿನ್ನಲೆ ತಾತ್ಕಾಲಿಕವಾಗಿ ಬುಕ್ಕಿಂಗ್ ಬಂದ್ ಮಾಡಿದ್ದ ಎಂಜಿ ಮೋಟಾರ್ ಸಂಸ್ಥೆಯು ಇದೀಗ ಉತ್ಪಾದನಾ ಪ್ರಮಾಣ ಹೆಚ್ಚಳ ಮಾಡುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, ಈ ಹಿನ್ನಲೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಪುನಾಂಭಿಸಿದೆ. ಈ ಮೊದಲ 35 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದ ಹೆಕ್ಟರ್ ಕಾರು ಇದೀಗ ಎರಡನೇ ಹಂತದಲ್ಲೂ ಮತ್ತೆ 10 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್‌ಗಳು ಹರಿದುಬಂದಿದೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಸದ್ಯ ಹೊಸ ಕಾರು ಖರೀದಿಗಾಗಿ ಸೆಪ್ಟೆಂಬರ್ 29ರ ಮೊದಲು ಬುಕ್ಕಿಂಗ್ ಮಾಡಿರುವ ಗ್ರಾಹಕರನ್ನು ಹೊರತು ಪಡಿಸಿ ಹೊಸದಾಗಿ ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ಅನ್ವಯವಾಗುವಂತೆ ಹೊಸ ಕಾರಿನ ಬೆಲೆಯನ್ನು ಕೂಡಾ ಏರಿಕೆ ಮಾಡಲಾಗಿದ್ದು, ರೂ.30 ಸಾವಿರ ಬೆಲೆ ಹೆಚ್ಚಿಸಲಾಗಿದೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಹೀಗಾಗಿ ಈ ಹಿಂದೆ ಇದ್ದ ಕಾರಿನ ಆರಂಭಿಕ ಬೆಲೆಯು ಇದೀಗ ರೂ. 12.18 ಲಕ್ಷದಿಂದ ರೂ.12.48 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ವೆರಿಯೆಂಟ್ ಬೆಲೆಗಳಲ್ಲೂ ಈ ಹಿಂದೆ ಇದ್ದ ದರಕ್ಕಿಂತ ಶೇ.2.5 ರಷ್ಟು ಹೆಚ್ಚುವರಿ ದರ ನಿಗದಿಪಡಿಸಲಾಗಿದೆ. ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಇದರಲ್ಲಿ ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನೆ ಹೆಚ್ಚಿಸಲು ಎಂಜಿ ಮೋಟಾರ್ ಹೊಸ ಪ್ಲ್ಯಾನ್

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Most Read Articles

Kannada
English summary
MG Hector is planning to increase the production capacity from November.
Story first published: Thursday, October 17, 2019, 17:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X