ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಕಳೆದ ಜೂನ್ ಆರಂಭದಲ್ಲಿ ಬಿಡುಗಡೆಗೊಂಡಿರುವ ಎಂಜಿ ಮೋಟಾರ್ಸ್ ನಿರ್ಮಾಣದ ಮೊದಲ ಕಾರು ಮಾದರಿಯಾದ ಹೆಕ್ಟರ್ ಎಸ್‌ಯುವಿ ಆವೃತ್ತಿಯು ಮೊದಲ ಬಾರಿಗೆ ಕಾರು ಮಾರಾಟದಲ್ಲಿ ಹಿನ್ನಡೆಗೆ ಕಾರಣವಾಗಿದ್ದು, ಕಾರು ಉತ್ಪಾದನಾ ಘಟಕದ ವಿಸ್ತರಣೆ ಹಿನ್ನಲೆಯಲ್ಲಿ ಕಾರು ಪೂರೈಕೆಯು ನಿಧಾನವಾಗಿದೆ.

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಅಕ್ಟೋಬರ್ ಅವಧಿಯಲ್ಲಿ ಗರಿಷ್ಠ ಕಾರು ಮಾರಾಟ(3,536 ಯುನಿಟ್) ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದ ಎಂಜಿ ಹೆಕ್ಟರ್ ಮಾದರಿಯು ನವೆಂಬರ್ ಅವಧಿಯಲ್ಲಿ 3,239 ಯುನಿಟ್ ಮಾತ್ರವೇ ಮಾರಾಟ ಮಾಡಿದ್ದು, ಬೇಡಿಕೆ ಹೆಚ್ಚಿದ್ದರೂ ಸಹ ಹೊಸ ಕಾರಿನ ಪೂರೈಕೆಯಲ್ಲಿ ಹಿನ್ನಡೆಯಾಗಿದೆ. ಬೇಡಿಕೆಗೆ ತಕ್ಕಂತೆ ಕಾರು ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ಉತ್ಪಾದನಾ ಘಟಕವನ್ನು ವಿಸ್ತರಣೆ ಮಾಡಲಾಗುತ್ತಿದ್ದು, ಮುಂಬರುವ ಜನವರಿ ಹೊತ್ತಿಗೆ ಹೆಕ್ಟಕ್ ಕಾರು ವಿತರಣೆಯಲ್ಲಿ ಹೆಚ್ಚಳವಾಗುವ ನೀರಿಕ್ಷೆಯಿದೆ.

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಎಂಜಿ ಹೆಕ್ಟರ್ ಖರೀದಿಗಾಗಿ ಈಗಾಗಲೇ 45 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ಮಾಡಿದ್ದು, ಇದರಲ್ಲಿ ಇದುವರೆಗೆ ಸುಮಾರು 14 ಸಾವಿರ ಕಾರುಗಳನ್ನು ಮಾತ್ರವೇ ವಿತರಣೆ ಮಾಡಲಾಗಿದ್ದು, ಇನ್ನುಳಿದ ಕಾರುಗಳನ್ನು ನಿಗದಿತ ಅವಧಿಯಲ್ಲಿ ವಿತರಣೆ ಮಾಡಲು ಕಾರು ಉತ್ಪಾದನಾ ಪ್ರಕ್ರಿಯೆಯನ್ನು ಹೆಚ್ಚಿಸುತ್ತಿರುವುದೇ ಕಾರು ಪೂರೈಕೆಯಲ್ಲಿ ಕಡಿಮೆಯಾಗಿದೆ.

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಇನ್ನು ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಇದು ಎಸ್‌ಯುವಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 12.18 ಲಕ್ಷದಿಂದ ಆರಂಭಿಕ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಹೊಂದಿದೆ. ಗ್ರಾಹಕ ಬೇಡಿಕೆಗೆ ಅನುಗುಣವಾಗಿ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದಿದೆ. ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಹೆಕ್ಟರ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಐ ಸ್ಮಾರ್ಟ್ ಕನೆಕ್ವಿವಿಟಿ ಸೌಲಭ್ಯವು ಹೆಕ್ಟರ್ ಕಾರಿಗೆ ಮತ್ತಷ್ಟು ಮೆರಗು ತಂದಿರುವುದಲ್ಲದೇ ಕಾರಿಗೂ ಗರಿಷ್ಠ ಭದ್ರತೆ ಒದಗಿಸಲಿದ್ದು, ಪ್ಯಾಕೇಜ್ ಸೌಲಭ್ಯ ಹೊಂದಿರುವ ಐ ಸ್ಮಾರ್ಟ್ ಕನೆಕ್ಟಿವಿಟಿನಲ್ಲಿ ಧ್ವನಿ ಹಿಂಬಾಲಿಸುವಿಕೆ, ಲೈವ್ ವೆಹಿಕಲ್ ಟ್ರಾಕಿಂಗ್, ವೆಹಿಕಲ್ ಸ್ಟೆಟಸ್, ಜಿಯೋ ಫೆನ್ಸ್ ಸೇರಿದಂತೆ 50ಕ್ಕೂ ಹೆಚ್ಚು ಫೀಚರ್ಸ್ ಇದರಲ್ಲಿವೆ.

MOST READ: ನ್ಯಾನೋ ಬರುವುದಕ್ಕೂ ಮುನ್ನವೇ ಬಂದು ಹೋದ ಅಗ್ಗದ ಬೆಲೆಯ 'ಮೀರಾ' ಕಾರಿನ ಕಥೆ ಗೊತ್ತಾ?

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಹಾಗೆಯೇ ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

MOST READ: ಟಾಟಾ ಸಂಸ್ಥೆಯ ಈ 10 ಕಾರುಗಳನ್ನು ನಾವೆಲ್ಲರೂ ಮರೆತು ಬಿಟ್ಟಿದ್ದೇವೆ..!

ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಎಂಜಿ ಹೆಕ್ಟರ್‌ಗೆ ಹಿನ್ನಡೆ

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Most Read Articles

Kannada
English summary
MG Motor India has retailed 3,239 units of Hector SUV in November, 2019.
Story first published: Thursday, December 5, 2019, 13:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X