7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ನಿನ್ನೆಯಷ್ಟೇ ಭಾರತದಲ್ಲಿ ತನ್ನ ಮೊದಲ ಹೆಕ್ಟರ್ ಎಸ್‌ಯುವಿ ಕಾರುನ್ನು ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಕಾಲಿಟ್ಟಿರುವ ಎಂಜಿ ಮೋಟಾರ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಮುಂದಿನ 2 ವರ್ಷಗಳ ಯೋಜನೆ ಬಗೆಗೆ ಕೆಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ದೇಶಿಯ ಆಟೋಮೊಬೈಲ್ ಕ್ಷೇತ್ರದಲ್ಲಿ ಇತ್ತೀಚೆಗೆ ಭಾರೀ ಬದಲಾವಣೆ ಕಂಡುಬರುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಹಲವು ವಿದೇಶಿ ಕಾರು ಉತ್ಪಾದನಾ ಸಂಸ್ಥೆಗಳು ಸಹ ಭಾರತದಲ್ಲಿ ತಮ್ಮ ಜನಪ್ರಿಯ ಕಾರುಗಳನ್ನು ಬಿಡುಗಡೆಗೊಳಿಸುವ ತವಕದಲ್ಲಿವೆ. ಇವುಗಳಲ್ಲಿ ಬ್ರಿಟಿಷ್ ಕಾರು ಉತ್ಪಾದನಾ ಸಂಸ್ಥೆಯಾದ ಮೊರಿಸ್ ಗ್ಯಾರೇಜ್(ಎಂಜಿ) ಕೂಡಾ ಒಂದಾಗಿದ್ದು, ಭಾರತೀಯ ಗ್ರಾಹಕರ ಅಭಿರುಚಿ ತಕ್ಕಂತೆ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಈ ನಿಟ್ಟಿನಲ್ಲಿ ಬೃಹತ್ ಬಂಡವಾಳದೊಂದಿಗೆ 2017ರಲ್ಲೇ ತನ್ನ ಮೊದಲ ಕಾರು ಉತ್ಪಾದನಾ ಘಟಕವನ್ನು ಗುಜರಾತ್‌ನಲ್ಲಿ ಆರಂಭಗೊಳಿಸಿದ್ದಲ್ಲೇ ಇದೀಗ ಆಕರ್ಷಕ ಬೆಲೆಗಳಲ್ಲಿ ಹೆಕ್ಟರ್ ಕಾರುನ್ನು ಬಿಡುಗಡೆಗೊಳಿಸುವ ಮೂಲಕ ಎಸ್‌ಯುವಿ ಪ್ರಿಯರಲ್ಲಿ ಭಾರೀ ಕುತೂಹಲ ಹುಟ್ಟುಹಾಕಿದೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಹೆಕ್ಟರ್ ಬಿಡುಗಡೆಯ ಕಾರ್ಯಕ್ರಮ ಮಾತನಾಡಿದ ಎಂಜಿ ಮೋಟಾರ್ ಇಂಡಿಯಾ ನಿರ್ದೇಶಕ ರಾಜೀವ್ ಛಬ್ಬಾ ಮಾತನಾಡಿ, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ಎಂಜಿ ಮೋಟಾರ್ ಉತ್ಪಾದನೆಯ ಒಟ್ಟು ನಾಲ್ಕು ಹೊಸ ಮಾದರಿ ಕಾರುಗಳು ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ಸುಳಿವು ಭರವಸೆ ಇದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಗ್ರಾಹಕರ ಆದ್ಯತೆಯೆಂತೆ ಮಧ್ಯಮ ಕ್ರಮಾಂಕ ಕಾರುಗಳ ಮೂಲಕ ಗುಣಮಟ್ಟ ಮತ್ತು ಸುರಕ್ಷತೆ ಹೆಚ್ಚಿನ ಗಮನಹರಿಸಲಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಭರವಸೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಮುಂದಿನ 2 ವರ್ಷಗಳಲ್ಲಿ ಹೆಕ್ಟರ್ 7 ಸೀಟರ್, ಇಜೆಡ್ಎಸ್ ಸೇರಿದಂತೆ ಒಟ್ಟು ಮೂರು ವಿನೂತನ ಎಸ್‌ಯುವಿ ಜೊತೆ ಒಂದು ಹ್ಯಾಚ್‌ಬ್ಯಾಕ್ ಆವೃತ್ತಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇದಕ್ಕಾಗಿಯೇ ಗುಜರಾತ್ ಕಾರು ಉತ್ಪಾದನಾ ಘಟಕವನ್ನು ಮತ್ತಷ್ಟು ವಿಸ್ತರಣೆ ಮಾಡಲು ನಿರ್ಧರಿಸಿರುವ ಎಂಜಿ ಸಂಸ್ಥೆಯು ಹೆಚ್ಚುವರಿಯಾಗ ರೂ. 2,200 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಈ ಹಿಂದೆ 2016ರಲ್ಲೇ ಕಾರು ಉತ್ಪಾದನಾ ಘಟಕದ ಮೊದಲ ಹಂತದ ನಿರ್ಮಾಣಕ್ಕಾಗಿ ಬರೋಬ್ಬರಿ ರೂ.4 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿತ್ತು.

ಇದೀಗ ಕಾರು ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿರುವ ಎಂಜಿ ಮೋಟಾರ್ ಸಂಸ್ಥೆಯು ವಾರ್ಷಿಕವಾಗಿ 50 ಸಾವಿರ ಕಾರುಗಳನ್ನು ಮಾರಾಟ ಮಾಡುವ ಗುರಿಹೊಂದಿದ್ದು, ಗುಜರಾತ್ ಘಟಕವು ವಾರ್ಷಿಕವಾಗಿ 90 ಸಾವಿರಕ್ಕಿಂತಲೂ ಹೆಚ್ಚು ಕಾರುಗಳ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇನ್ನು ಹೆಕ್ಟರ್ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ಎಂಜಿನ್ ಸೌಲಭ್ಯವನ್ನು ಹೊತ್ತು ಬಂದಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಆಯ್ಕೆಗಳನ್ನು ಹೊಂದಿರುವ ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.18 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 16.88 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

7 ಸೀಟರ್ ಎಸ್‌ಯುವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

Article Published On: Friday, June 28, 2019, 18:55 [IST]
English summary
MG Motor India To Launch Four SUVs Over The Next Two Years — Includes eZS & 7-Seat Hector.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+