Just In
- 7 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 12 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 13 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 23 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್
ಎಂಜಿ ಮೋಟಾರ್ ಸಂಸ್ಥೆಯು ನಿನ್ನೆಯಷ್ಟೇ ತನ್ನ ಬಹುನೀರಿಕ್ಷಿತ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಈ ವೇಳೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಗುಣವಾಗಿ ಇನ್ನು ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.
ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಖರೀದಿಗೆ ಆಸಕ್ತಿ ಇದ್ದರೂ ಸಹ ಬೆಲೆ ದುಬಾರಿಯಾಗಿರುವುದರಿಂದ ಮಧ್ಯಮ ವರ್ಗದ ಗ್ರಾಹಕರು ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಿಂದ ಹಿಂದೆ ಸರಿಯುತ್ತಿದ್ದು, ಶೀಘ್ರದಲ್ಲೇ ರೂ.10 ಲಕ್ಷದೊಳಗೆ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಮಾಡುವ ಯೋಜನೆಯಿದೆ ಎಂದು ಎಂಜಿ ಮೋಟಾರ್ ಸ್ಪಷ್ಟಪಡಿಸಿದೆ. ಸದ್ಯ ಬಿಡುಗಡೆಯಾಗಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ತುಸು ದುಬಾರಿಯಾಗಲಿದ್ದು, ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಉತ್ತಮ ಬ್ಯಾಟರಿ ಸೌಲಭ್ಯವನ್ನು ಪಡೆದುಕೊಳ್ಳಲಿದೆ.
ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ, ಸುಲಭವಾಗಿ ಲಭ್ಯವಾಗುವ ಗ್ರಾಹಕರ ಸೇವೆಗಳು ಹೊಸ ಕಾರು ಖರೀದಿಯ ಮೌಲ್ಯವನ್ನು ಹೆಚ್ಚಿಸಲಿದ್ದು, ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭರ್ಜರಿ ಪೈಪೋಟಿ ನೀಡಲಿದೆ.
ಬ್ಯಾಟರಿ ಸಾಮರ್ಥ್ಯ
ಎಂಜಿ ಮೋಟಾರ್ ಸಂಸ್ಥೆಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ 44.5kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 1 ಗಂಟೆಯಲ್ಲಿ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದ್ದು, ಫಾಸ್ಟ್ ಚಾರ್ಜಿಂಗ್ ಮಾತ್ರವಲ್ಲದೇ ಸಾಮಾನ್ಯ ಚಾರ್ಜಿಂಗ್ ಸಾಕೆಟ್ ಜೊತೆ ಐದು ವಿವಿಧ ಮಾರ್ಗಗಳಲ್ಲಿ ಚಾರ್ಜ್ ಮಾಡಿಕೊಳ್ಳಬಹುದಾದ ಅವಕಾಶ ಈ ಕಾರಿನಲ್ಲಿದೆ. ಜೊತೆಗೆ ಹೊಸ ಕಾರು ಮೈಲೇಜ್ನಲ್ಲಿ ಮಾತ್ರವಲ್ಲದೇ ಪರ್ಫಾಮೆನ್ಸ್ನಲ್ಲೂ ಕೂಡಾ ಗಮನಸೆಳೆಯಲಿದ್ದು, ಮುಂಭಾಗದ ಚಕ್ರಗಳಿಗೆ ಶಕ್ತಿ ಒದಗಿಸುವ ಮೂಲಕ 141-ಬಿಎಚ್ಪಿ ಉತ್ಪಾದನೆ ಮಾಡಬಲ್ಲದು.
ಇನ್ನು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್ಗಳಲ್ಲಿದ್ದು, ಮುಂಭಾಗದಲ್ಲಿ ಎಂಜಿ ಸಿಗ್ನಿಚೆರ್ ಗ್ರಿಲ್, ಗ್ರಿಲ್ ಒಳಭಾಗದಲ್ಲೇ ಚಾರ್ಜಿಂಗ್ ಪೋರ್ಟ್, ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಎಲ್ಇಡಿ ಡಿಆರ್ಎಲ್ ಗಳು ಮತ್ತು 17-ಇಂಚಿನ ಅಲಾಯ್ ವೀಲ್ಹ್ ಸೌಲಭ್ಯವನ್ನು ಪಡೆದಿದೆ.
ಹೊಸ ಕಾರಿನಲ್ಲಿ ಹೊರಭಾಗದ ಫೀಚರ್ಸ್ಗಳು ಮಾತ್ರವಲ್ಲದೇ ಒಳಭಾಗದ ಫೀಚರ್ಸ್ಗಳು ಕೂಡಾ ಗಮನಸೆಳೆಯಲಿದ್ದು, ಪ್ರೀಮಿಯಂ ಕ್ಯಾಬಿನ್ ವೈಶಿಷ್ಟ್ಯತೆಯು ಎಸ್ಯುವಿ ಪ್ರಿಯರ ಗಮನಸೆಳೆಯಲಿದೆ. ಸಿಲ್ವರ್ ಆಕ್ಸೆಂಟ್ ಹೊಂದಿರುವ ಡ್ಯಾಶ್ಬೋರ್ಡ್, ಐ-ಸ್ಮಾರ್ಟ್ ಕನೆಕ್ಟಿವಿಟಿ ಹೊಂದಿರುವ 8-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಯುನಿಟ್, ಆಂಡ್ರಾಯಿಡ್ ಆಟೋ, ಆಟೋ ಕಾರ್ ಪ್ಲೇ ಮತ್ತು ನ್ಯಾವಿಗೇಷನ್ ಸೌಲಭ್ಯವಿದೆ.
ಹಾಗೆಯೇ ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್, ತಾಪಮಾನವನ್ನು ಸರಿದೂಗಿಸಿಕೊಳ್ಳಬಹುದಾದ ಮುಂಭಾಗ ಸೀಟುಗಳು, ಎಲೆಕ್ಟ್ರಿಕಲ್ ಅಡ್ಜೆಸ್ಟ್ ಮಾಡಬಹುದು ಚಾಲನಕ ಸೀಟು ಮತ್ತು ಹಿಂಬದಿ ಪ್ರಯಾಣಿಕರಿಗೂ ಎಸಿ ವೆಂಟ್ಸ್ ಜೊತೆಗೆ ಗುಣಮಟ್ಟದ ಲೆದರ್ ಸೀಟುಗಳನ್ನು ನೀಡಲಾಗಿದೆ.
ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಫೀಚರ್ಸ್ಗಳನ್ನು ನೀಡಿರುವ ಎಂಜಿ ಮೋಟಾರ್ ಸಂಸ್ತೆಯು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, 4 ಏರ್ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 360 ಡಿಗ್ರಿ ವ್ಯೂವ್ ಕ್ಯಾಮೆರಾ, ಏರ್ ಫಿಲ್ಟರ್, ಎಲೆಕ್ಟ್ರಿಕ್ ಸನ್ರೂಫ್ ಸೌಲಭ್ಯವನ್ನು ಹೊಂದಿರಲಿವೆ.
ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.19 ಲಕ್ಷದಿಂದ ರೂ.22 ಲಕ್ಷ ಬೆಲೆಯೊಂದಿಗೆ ತುಸು ದುಬಾರಿ ಎನ್ನಿಸಲಿದೆ.