ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಎಂಜಿ ಮೋಟಾರ್ ಸಂಸ್ಥೆಯು ನಿನ್ನೆಯಷ್ಟೇ ತನ್ನ ಬಹುನೀರಿಕ್ಷಿತ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಈ ವೇಳೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಗುಣವಾಗಿ ಇನ್ನು ಹಲವು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಖರೀದಿಗೆ ಆಸಕ್ತಿ ಇದ್ದರೂ ಸಹ ಬೆಲೆ ದುಬಾರಿಯಾಗಿರುವುದರಿಂದ ಮಧ್ಯಮ ವರ್ಗದ ಗ್ರಾಹಕರು ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಿಂದ ಹಿಂದೆ ಸರಿಯುತ್ತಿದ್ದು, ಶೀಘ್ರದಲ್ಲೇ ರೂ.10 ಲಕ್ಷದೊಳಗೆ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಮಾಡುವ ಯೋಜನೆಯಿದೆ ಎಂದು ಎಂಜಿ ಮೋಟಾರ್ ಸ್ಪಷ್ಟಪಡಿಸಿದೆ. ಸದ್ಯ ಬಿಡುಗಡೆಯಾಗಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ತುಸು ದುಬಾರಿಯಾಗಲಿದ್ದು, ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಉತ್ತಮ ಬ್ಯಾಟರಿ ಸೌಲಭ್ಯವನ್ನು ಪಡೆದುಕೊಳ್ಳಲಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ, ಸುಲಭವಾಗಿ ಲಭ್ಯವಾಗುವ ಗ್ರಾಹಕರ ಸೇವೆಗಳು ಹೊಸ ಕಾರು ಖರೀದಿಯ ಮೌಲ್ಯವನ್ನು ಹೆಚ್ಚಿಸಲಿದ್ದು, ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭರ್ಜರಿ ಪೈಪೋಟಿ ನೀಡಲಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಬ್ಯಾಟರಿ ಸಾಮರ್ಥ್ಯ

ಎಂಜಿ ಮೋಟಾರ್ ಸಂಸ್ಥೆಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ 44.5kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 1 ಗಂಟೆಯಲ್ಲಿ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದ್ದು, ಫಾಸ್ಟ್ ಚಾರ್ಜಿಂಗ್ ಮಾತ್ರವಲ್ಲದೇ ಸಾಮಾನ್ಯ ಚಾರ್ಜಿಂಗ್ ಸಾಕೆಟ್ ಜೊತೆ ಐದು ವಿವಿಧ ಮಾರ್ಗಗಳಲ್ಲಿ ಚಾರ್ಜ್ ಮಾಡಿಕೊಳ್ಳಬಹುದಾದ ಅವಕಾಶ ಈ ಕಾರಿನಲ್ಲಿದೆ. ಜೊತೆಗೆ ಹೊಸ ಕಾರು ಮೈಲೇಜ್‌ನಲ್ಲಿ ಮಾತ್ರವಲ್ಲದೇ ಪರ್ಫಾಮೆನ್ಸ್‌ನಲ್ಲೂ ಕೂಡಾ ಗಮನಸೆಳೆಯಲಿದ್ದು, ಮುಂಭಾಗದ ಚಕ್ರಗಳಿಗೆ ಶಕ್ತಿ ಒದಗಿಸುವ ಮೂಲಕ 141-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಇನ್ನು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಮುಂಭಾಗದಲ್ಲಿ ಎಂಜಿ ಸಿಗ್ನಿಚೆರ್ ಗ್ರಿಲ್, ಗ್ರಿಲ್ ಒಳಭಾಗದಲ್ಲೇ ಚಾರ್ಜಿಂಗ್ ಪೋರ್ಟ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ ಗಳು ಮತ್ತು 17-ಇಂಚಿನ ಅಲಾಯ್ ವೀಲ್ಹ್ ಸೌಲಭ್ಯವನ್ನು ಪಡೆದಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಹೊಸ ಕಾರಿನಲ್ಲಿ ಹೊರಭಾಗದ ಫೀಚರ್ಸ್‌ಗಳು ಮಾತ್ರವಲ್ಲದೇ ಒಳಭಾಗದ ಫೀಚರ್ಸ್‌ಗಳು ಕೂಡಾ ಗಮನಸೆಳೆಯಲಿದ್ದು, ಪ್ರೀಮಿಯಂ ಕ್ಯಾಬಿನ್ ವೈಶಿಷ್ಟ್ಯತೆಯು ಎಸ್‌ಯುವಿ ಪ್ರಿಯರ ಗಮನಸೆಳೆಯಲಿದೆ. ಸಿಲ್ವರ್ ಆಕ್ಸೆಂಟ್ ಹೊಂದಿರುವ ಡ್ಯಾಶ್‌ಬೋರ್ಡ್, ಐ-ಸ್ಮಾರ್ಟ್ ಕನೆಕ್ಟಿವಿಟಿ ಹೊಂದಿರುವ 8-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಯುನಿಟ್, ಆಂಡ್ರಾಯಿಡ್ ಆಟೋ, ಆಟೋ ಕಾರ್ ಪ್ಲೇ ಮತ್ತು ನ್ಯಾವಿಗೇಷನ್ ಸೌಲಭ್ಯವಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಹಾಗೆಯೇ ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್, ತಾಪಮಾನವನ್ನು ಸರಿದೂಗಿಸಿಕೊಳ್ಳಬಹುದಾದ ಮುಂಭಾಗ ಸೀಟುಗಳು, ಎಲೆಕ್ಟ್ರಿಕಲ್ ಅಡ್ಜೆಸ್ಟ್ ಮಾಡಬಹುದು ಚಾಲನಕ ಸೀಟು ಮತ್ತು ಹಿಂಬದಿ ಪ್ರಯಾಣಿಕರಿಗೂ ಎಸಿ ವೆಂಟ್ಸ್ ಜೊತೆಗೆ ಗುಣಮಟ್ಟದ ಲೆದರ್ ಸೀಟುಗಳನ್ನು ನೀಡಲಾಗಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಫೀಚರ್ಸ್‌ಗಳನ್ನು ನೀಡಿರುವ ಎಂಜಿ ಮೋಟಾರ್ ಸಂಸ್ತೆಯು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, 4 ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 360 ಡಿಗ್ರಿ ವ್ಯೂವ್ ಕ್ಯಾಮೆರಾ, ಏರ್ ಫಿಲ್ಟರ್, ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವನ್ನು ಹೊಂದಿರಲಿವೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆಯೆಂತೆ ಎಂಜಿ ಮೋಟಾರ್

ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.19 ಲಕ್ಷದಿಂದ ರೂ.22 ಲಕ್ಷ ಬೆಲೆಯೊಂದಿಗೆ ತುಸು ದುಬಾರಿ ಎನ್ನಿಸಲಿದೆ.

Most Read Articles

Kannada
English summary
MG Motor To Launch New Electric Car In India For Less Than Rs.10 Lakh. Read in Kannada.
Story first published: Friday, December 6, 2019, 19:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X