Just In
- 5 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 7 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 7 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 8 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಕ್ಟರ್ ನಂತರ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾದ ಎಂಜಿ
ಇದೇ ತಿಂಗಳು ಕೊನೆಯಲ್ಲಿ ಹೆಕ್ಟರ್ ಎಸ್ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ತದನಂತರ ಮತ್ತೊಂದು ವಿನೂತನ ಮಾದರಿಯ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಬಿಡುಗಡೆಯಾಗಲಿರುವ ಇಜೆಡ್ಎಸ್ ಕಾರುನ್ನು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.
ಸದ್ಯ ಕೈಗೆಟುವಕುವ ದರಗಳಲ್ಲಿ ಅತಿ ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಮಾರುಕಟ್ಟೆ ಗ್ರಾಹಕರು ಎದುರು ನೋಡುತ್ತಿದ್ದು, ಎಂಜಿ ಮೋಟಾರ್ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಅತಿ ಕಡಿಮೆ ಬೆಲೆಯ ಉತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು, ಇಜೆಡ್ಎಸ್ ಎಸ್ಯುವಿ ಮಾದರಿಯು ಹೊಸ ಸಂಚಲನಕ್ಕೆ ಕಾರಣವಾಗಿದೆ.
ಭಾರತದಲ್ಲಿ ಸದ್ಯ ಮಹೀಂದ್ರಾ ಸಂಸ್ಥೆ ಮಾತ್ರ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮಾರುತಿ ಸುಜುಕಿ, ಹ್ಯುಂಡೈ, ನಿಸ್ಸಾನ್, ಎಂಜಿ ಮೋಟಾರ್ ಸಂಸ್ಥೆಗಳು ಸಹ ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುವ ನಿಟ್ಟಿನಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳ ರೋಡ್ ಟೆಸ್ಟಿಂಗ್ ನಡೆಸುತ್ತಿವೆ.
ಇವುಗಳಲ್ಲಿ ಕೆಲವು ದುಬಾರಿ ಬೆಲೆಯೊಂದಿಗೆ ಉತ್ತಮ ಮೈಲೇಜ್ ಪ್ರೇರಣೆಯ ಬ್ಯಾಟರಿ ಸೌಲಭ್ಯ ಹೊಂದಲಿದ್ದು, ಇನ್ನು ಕೆಲವು ಕಾರು ಮಾದರಿಗಳು ಕೈಗೆಟುಕುವ ಬೆಲೆಗಳೊಂದಿಗೆ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯುವ ತವಕದಲ್ಲಿವೆ.
ಇದರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ತನ್ನ ಕಾರು ಉತ್ಪನ್ನಗಳನ್ನು ಮಾರಾಟಕ್ಕೆ ಸಿದ್ದವಾಗುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಇದೇ ತಿಂಗಳು ಕೊನೆಯಲ್ಲಿ ತನ್ನ ಮೊದಲ ಕಾರು ಹೆಕ್ಟರ್ ಎಸ್ಯುವಿ ಬಿಡುಗಡೆಗೊಳಿಸುತ್ತಿದ್ದು, ತದನಂತರ ಡಿಸೆಂಬರ್ ಕೊನೆಯಲ್ಲಿ ಮೊದಲ ಎಲೆಕ್ಟ್ರಿಕ್ ಆವೃತ್ತಿಯಾದ ಇಜೆಡ್ಎಸ್ ಕಾರನ್ನು ಕೂಡಾ ಬಿಡುಗಡೆ ಮಾಡುವ ಸುಳಿವು ನೀಡಿರುವುದಲ್ಲೇ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಗೂ ಚಾಲನೆ ನೀಡಿದೆ.
ಇಜೆಡ್ಎಸ್ ಎಲೆಕ್ಟ್ರಿಕ್ ಹೊರತುಪಡಿಸಿ ಸಾಮಾನ್ಯ ಮಾದರಿಯ ಜೆಡ್ಎಸ್ ಕಾರು ಈಗಾಗಲೇ ಚೀನಿ ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿದ್ದು, ಮೂಲ ಕಾರಿನ ಮಾದರಿಯಲ್ಲೇ ವಿನೂತನ ವಿನ್ಯಾಸಗಳನ್ನು ಹೊತ್ತುಬರುತ್ತಿರುವ ಇಜೆಡ್ಎಸ್ ಕೂಡಾ ಅತ್ಯುತ್ತಮ ಮೈಲೇಜ್ ರೇಂಜ್ ಪ್ರೇರಣೆಯ ಬ್ಯಾಟರಿ ಸೌಲಭ್ಯಗಳನ್ನು ಹೊಂದಿರಲಿದೆ.
ಸದ್ಯ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿರುವ ಹ್ಯುಂಡೈ ಕೊನಾ ಮತ್ತು ಮಹೀಂದ್ರಾ ಎಕ್ಸ್ಯುವಿ300 ಎಲೆಕ್ಟ್ರಿಕ್ ಕಾರುಗಳ ಮೈಲೇಜ್ ರೇಂಜ್ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸುತ್ತಿರುವ ಇಜೆಡ್ಎಸ್ ಕಾರು ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅಚ್ಚರಿಯ ಬೆಲೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ ಎನ್ನಲಾಗಿದೆ.
ಮಾಹಿತಿಗಳ ಪ್ರಕಾರ, ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಮೈಲೇಜ್ ರೇಂಜ್ ಆಧಾರದ ಮೇಲೆ ದೆಹಲಿ ಎಕ್ಸ್ಶೋರೂಂ ಪ್ರಕರ ರೂ.12 ಲಕ್ಷದಿಂದ ರೂ.15 ಲಕ್ಷದೊಳಗೆ ಬೆಲೆ ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ಕೊನಾ ಮತ್ತು ಎಕ್ಸ್ಯುವಿ ಕಾರುಗಳಿಂತಲೂ ಇದು ಅತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆಯೆಂತೆ.
MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್ಗೆ ಬಿತ್ತು ರೂ. 50 ಸಾವಿರ ದಂಡ..!
ಮಾಹಿತಿಗಳ ಪ್ರಕಾರ, ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಮೈಲೇಜ್ ರೇಂಜ್ ಆಧಾರದ ಮೇಲೆ ದೆಹಲಿ ಎಕ್ಸ್ಶೋರೂಂ ಪ್ರಕರ ರೂ.12 ಲಕ್ಷದಿಂದ ರೂ.15 ಲಕ್ಷದೊಳಗೆ ಬೆಲೆ ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ಕೊನಾ ಮತ್ತು ಎಕ್ಸ್ಯುವಿ ಕಾರುಗಳಿಂತಲೂ ಇದು ಅತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆಯೆಂತೆ.
Source: Rushlane