ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಮುಂದಿನ ತಿಂಗಳು ಡಿಸೆಂಬರ್ 5ಕ್ಕೆ ಎಂಜಿ ಮೋಟಾರ್ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಇಜೆಡ್ಎಸ್ ಕಾರು ಭಾರತದಲ್ಲಿ ಅನಾವರಣಗೊಳ್ಳುತ್ತಿದ್ದು, ಇಜೆಡ್ಎಸ್ ಬಿಡುಗಡೆಯ ನಂತರ ಭಾರತದಲ್ಲಿ ಮತ್ತಷ್ಟು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುವ ಬಗ್ಗೆ ಎಂಜಿ ಮೋಟಾರ್ ಸುಳಿವು ನೀಡಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಮುಂದಿನ 3 ವರ್ಷಗಳಿಗೆ ಬೃಹತ್ ಯೋಜನೆ ರೂಪಿಸಿರುವ ಎಂಜಿ ಮೋಟಾರ್ಸ್ ಸಂಸ್ಥೆಯು ಭಾರತದಲ್ಲೇ ಬ್ಯಾಟರಿ ನಿರ್ಮಾಣ ಘಟಕ ಸ್ಥಾಪನೆಗಾಗಿ ಎದುರು ನೋಡುತ್ತಿದ್ದು, ಇದಕ್ಕಾಗಿ ಬರೋಬ್ಬರಿ 5 ಸಾವಿರ ಕೋಟಿ ಹೂಡಿಕೆ ಮಾಡಲು ಸಿದ್ದವಾಗಿದೆ.

ಇದರಿಂದ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮಹತ್ವದ ಮುನ್ನಡೆ ಕಾಯ್ದುಕೊಳ್ಳಲಿರುವ ಎಂಜಿ ಸಂಸ್ಥೆಯು ಮುಂದಿನ 2 ವರ್ಷದೊಳಗೆ ರೂ.10 ಲಕ್ಷದೊಳಗೆ ಅತ್ಯುತ್ತಮ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡುವ ಬಗ್ಗೆ ಯೋಜನೆ ರೂಪಿಸುತ್ತಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಈ ಬಗ್ಗೆ ಮಾತನಾಡಿರುವ ಎಂಜಿ ಮೋಟಾರ್ ಇಂಡಿಯಾ ಎಂಡಿ ರಾಜೀವ್ ಛಬ್ಬಾ ಅವರು, ಇಜೆಡ್ಎಸ್ ಬಿಡುಗಡೆಯ ನಂತರ ಬ್ಯಾಟರಿ ಉತ್ಪಾದನಾ ಘಟಕ ನಿರ್ಮಾಣವೇ ಪ್ರಮುಖ ಯೋಜನೆಯಾಗಿದ್ದು, 2025ರ ವೇಳೆಗೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಹೊಸ ಸಂಚಲನ ಪಡೆದುಕೊಳ್ಳುವುದಕ್ಕೆ ಪೂರಕವಾಗಿ ಹಲವು ಮಹತ್ವದ ಯೋಜನೆಗಳನ್ನು ಸಿದ್ದಗೊಳಿಸಿರುವುದಾಗಿ ಹೇಳಿಕೊಂಡಿದ್ದಾರೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಜೊತೆಗೆ ಇಜೆಡ್ಎಸ್ ನಂತರ ಮುಂಬರುವ ಎಲೆಕ್ಟ್ರಿಕ್ ಕಾರುಗಳು ಮಧ್ಯಮ ವರ್ಗದ ಗ್ರಾಹಕರು ಖರೀದಿಸಬಹುದಾದ ಬೆಲೆಗಳಲ್ಲಿ ಬಿಡುಗಡೆಗೊಳಿಸುವುದಾಗಿ ಹೇಳಿಕೊಂಡಿದ್ದು, ಇದೀಗ ಬಿಡುಗಡೆಯಾಗುತ್ತಿರುವ ಇಜೆಡ್ಎಸ್ ಕಾರು ತುಸು ದುಬಾರಿ ಬೆಲೆ ಪಡೆದುಕೊಂಡಿರುವುದನ್ನು ಪರೋಕ್ಷವಾಗಿ ಮಾಹಿತಿ ನೀಡಿದ್ದಾರೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಮತ್ತು ಬ್ಯಾಟರಿ ಸಾಮಾರ್ಥ್ಯದ ಕುರಿತು ವಿವಿಧ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಹೊಸ ಕಾರು ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ. ಇಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 320ರಿಂದ 350ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಹಾಗೆಯೇ ಇಜೆಡ್ಎಸ್ ಮೇಲೆ ಎಂಜಿ ಮೋಟಾರ್ ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯ ಇರಲಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇದರೊಂದಿಗೆ ಹೊಸ ಕಾರು ಹೆಕ್ಟರ್ ಕಾರಿಗಿಂತಲೂ ತಳಮಟ್ಟದ ಕಾರು ಮಾದರಿಯಾಗಿ ರಸ್ತೆಗಿಳಿಯಲಿದ್ದು, ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್, ಏರ್ ಫಿಲ್ಟರ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ರೂ.10 ಲಕ್ಷದೊಳಗೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.21 ಲಕ್ಷದಿಂದ ರೂ.24 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

Source: ET Auto

Most Read Articles

Kannada
English summary
According to report, MG Motors is planning to launch new electric car with affordable price tag in India.
Story first published: Thursday, November 14, 2019, 13:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X