ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಚೀನಾದ ದೈತ್ಯ ಕಾರು ಉತ್ಪಾದನಾ ಸಂಸ್ಥೆಯಾದ ಎಸ್ಎಐಸಿ ಮೋಟಾರ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ರಿಟಿಷ್ ಮೂಲದ ಎಂಜಿ ಮೋಟಾರ್ ಸಂಸ್ಥೆಯು ಭವಿಷ್ಯ ಯೋಜನೆಗಳಿಗಾಗಿ ಭಾರತದಲ್ಲಿ ಭಾರೀ ಪ್ರಮಾಣ ಹೂಡಿಕೆ ಮುಂದಾಗಿದ್ದು, ಹೊಸ ಕಾರುಗಳ ಉತ್ಪಾದನೆ ಹೆಚ್ಚಳ ಮತ್ತು ಮಾರಾಟ ಜಾಲದ ವಿಸ್ತರಣೆಗಾಗಿ ಬರೋಬ್ಬರಿ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಸಿದ್ದತೆ ನಡೆಸಿದೆ.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಎಂಜಿ ಮೋಟಾರ್ ನಿರ್ಮಾಣ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದ್ದು, ಸದ್ಯದಲ್ಲೇ ಮತ್ತೊಂದು ಬಹುನೀರಿಕ್ಷಿತ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಕೂಡಾ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ. ಹೀಗಾಗಿ ಹೊಸ ಉತ್ಪನ್ನಗಳ ಮಾರಾಟವನ್ನು ಹೆಚ್ಚಿಸಿದಂತೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನಾ ಸಾಮರ್ಥ್ಯವನ್ನು ಕೂಡಾ ಹೆಚ್ಚಿಸಬೇಕಿದ್ದು, ಮಾರಾಟಜಾಲವನ್ನು ವಿಸ್ತರಣೆಗೆ ಹೆಚ್ಚಿನ ಒತ್ತು ನೀಡುತ್ತಿದೆ.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಸದ್ಯ ಎಂಜಿ ಮೋಟಾರ್ ಕಾರು ಮಾರಾಟ ಮಳಿಗೆಗಳು ಹೆಚ್ಚಾಗಿ ಮೆಟ್ರೊ ನಗರಗಳಿಗೆ ಮಾತ್ರವೇ ಸೀಮಿತವಾಗಿದ್ದು, ಎರಡನೇ ಮತ್ತು ಮೂರನೇ ದರ್ಜೆಯ ನಗರಗಳಲ್ಲೂ ಹೆಚ್ಚಿನ ಮಟ್ಟದ ಕಾರು ಮಾರಾಟಕ್ಕಾಗಿ ಯೋಜನೆ ರೂಪಿಸುತ್ತಿದೆ.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಇದಕ್ಕಾಗಿಯೇ ಎಸ್ಎಐಸಿ ಮೋಟಾರ್ ಸಂಸ್ಥೆಯು ಎಂಜಿ ಮೋಟಾರ್ ಕಾರು ಮಾರಾಟದ ಮೇಲೆ ಹೆಚ್ಚಿನ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ರೂ.3 ಸಾವಿರ ಕೋಟಿ ಬಂಡವಾಳ ಹೂಡಿಕೆ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸಲಿದೆ.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಇನ್ನು ಎಂಜಿ ಮೋಟಾರ್ ಸಂಸ್ಥೆಯು ಈಗಾಗಲೇ ರೂ.2 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಮೂಲಕ ಕಳೆದ ಜುಲೈನಲ್ಲಿ ತನ್ನ ಮೊದಲ ಕಾರು ಮಾದರಿಯಾದ ಹೆಕ್ಟರ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡಿ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 12.18 ಲಕ್ಷದಿಂದ ಆರಂಭಿಕ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ.16.88 ಲಕ್ಷ ಬೆಲೆ ಹೊಂದಿದೆ. ಗ್ರಾಹಕ ಬೇಡಿಕೆಗೆ ಅನುಗುಣವಾಗಿ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದಿದೆ.

MOST READ: ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಹೆಕ್ಟರ್ ಹೊಸ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಬಿಡುಗಡೆಗೆ ಸಜ್ಜಾದ ಹೋಂಡಾ ಆಕ್ಟಿವಾ 6ಜಿ ಸ್ಪೆಷಲ್ ಏನು?

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಇದರೊಂದಿಗೆ 2020ರ ಜನವರಿಯಿಂದ ಮಾರಾಟಕ್ಕೆ ಲಭ್ಯವಾಗಲಿರುವ ಜೆಎಸ್ ಎಲೆಕ್ಟ್ರಿಕ್ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದ್ದು, ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ 44.5kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದೆ. ಇದು ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 1 ಗಂಟೆಯಲ್ಲಿ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದ್ದು, ಫಾಸ್ಟ್ ಚಾರ್ಜಿಂಗ್ ಮಾತ್ರವಲ್ಲದೇ ಸಾಮಾನ್ಯ ಚಾರ್ಜಿಂಗ್ ಸಾಕೆಟ್ ಜೊತೆ ಐದು ವಿವಿಧ ಮಾರ್ಗಗಳಲ್ಲಿ ಚಾರ್ಜ್ ಮಾಡಿಕೊಳ್ಳಬಹುದಾದ ಅವಕಾಶ ಈ ಕಾರಿನಲ್ಲಿದೆ. ಜೊತೆಗೆ ಹೊಸ ಕಾರು ಮೈಲೇಜ್‌ನಲ್ಲಿ ಮಾತ್ರವಲ್ಲದೇ ಪರ್ಫಾಮೆನ್ಸ್‌ನಲ್ಲೂ ಕೂಡಾ ಗಮನಸೆಳೆಯಲಿದ್ದು, ಮುಂಭಾಗದ ಚಕ್ರಗಳಿಗೆ ಶಕ್ತಿ ಒದಗಿಸುವ ಮೂಲಕ 141-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.19 ಲಕ್ಷದಿಂದ ರೂ.22 ಲಕ್ಷ ಬೆಲೆ ಹೊಂದಬಹುದೆಂದು ನೀರಿಕ್ಷಿಸಲಾಗಿದೆ.

ಹೊಸ ಯೋಜನೆಗಾಗಿ ಭಾರೀ ಪ್ರಮಾಣ ಹೂಡಿಕೆ ಮಾಡಲಿದೆ ಎಂಜಿ ಮೋಟಾರ್

ಜೆಡ್ಎಸ್ ಎಲೆಕ್ಟ್ರಿಕ್ ನಂತರ ಮತ್ತಷ್ಟು ಎಲೆಕ್ಟ್ರಿಕ್ ಕಾರುಗಳನ್ನು ಹೊರತರಲಿರುವ ಎಂಜಿ ಮೋಟಾರ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ರೂ.10 ಲಕ್ಷದೊಳಗೆ ವಿವಿಧ ಮಾದರಿಯ ಎಲೆಕ್ಟಿಕ್ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ಹೊಸ ಬಂಡವಾಳ ಹೂಡಿಕೆಯು ಭವಿಷ್ಯದ ಯೋಜನೆಗಳಿಗೆ ಸಾಕಷ್ಟು ಸಹಕಾರಿಯಾಗಲಿದೆ.

Most Read Articles

Kannada
English summary
Morris Garages (MG), is planning to invest Rs 3,000 crore more in India, a company official said. MG Motor India has already spent ₹ 2,000 crore in the country and commenced manufacturing operations at its plant at Halol in Gujarat, the official said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X