ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಹೆಕ್ಟರ್ ಎಸ್‌ಯುವಿ ಬಿಡುಗಡೆಯ ಯಶಸ್ವಿ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲು ಸಜ್ಜಾಗುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು 2ನೇ ಕಾರು ಮಾದರಿಯಾಗಿ ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸಲು ಸಿದ್ದತೆ ನಡೆಸಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಮತ್ತು ಬ್ಯಾಟರಿ ಸಾಮಾರ್ಥ್ಯದ ಕುರಿತು ವಿವಿಧ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. ಹೊಸ ಕಾರು ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದ್ದು, ಡಿಸೆಂಬರ್ 5ರಂದು ಅನಾವರಣಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಎಂಜಿ ಸಂಸ್ಥೆಯು ಹೆಕ್ಟರ್ ನಂತರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಹೊಸ ಕಾರಿನಲ್ಲಿರುವ ತಾಂತ್ರಿಕ ಅಂಶಗಳ ಕುರಿತಾದ ಮಹತ್ವದ ಮಾಹಿತಿಗಳು ಒಂದೊಂದಾಗಿ ಸೋರಿಕೆಯಾಗುತ್ತಿದ್ದು, ಇಜೆಡ್ಎಸ್‌ನಲ್ಲಿ ಐಷಾರಾಮಿ ಕಾರುಗಳ ಮಾದರಿಯಲ್ಲಿ ಶುದ್ದಗಾಳಿ ಒದಗಿಸುವ ಏರ್ ಫಿಲ್ಟರ್ ಸೌಲಭ್ಯವನ್ನು ಹೊಂದಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇದು ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಹಾಗೆಯೇ ಜೆಡಎಸ್ ಕಾರು ಎಲೆಕ್ಟ್ರಿಕ್ ವರ್ಷನ್‌ನಲ್ಲಿ ಮಾತ್ರವಲ್ಲದೇ ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಆಯ್ಕೆಯಲ್ಲೂ ಸಹ ಬಿಡುಗಡೆಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ಜೆಡ್ಎಸ್ ಕಾರು ಬಿಡುಗಡೆಗೂ ಮುನ್ನ ಇಜೆಡ್ಎಸ್ ಕಾರು ಬಿಡುಗಡೆಯಾಗಲಿದ್ದು, ತದನಂತರವಷ್ಟೇ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರವಷ್ಟೇ ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ರಸ್ತೆಗಿಳಿಯಲಿವೆ. ಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 320ರಿಂದ 350ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.18 ಲಕ್ಷದಿಂದ ರೂ.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಹಾಗೆಯೇ ಇಜೆಡ್ಎಸ್ ಮೇಲೆ ಎಂಜಿ ಮೋಟಾರ್ ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯ ಇರಲಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇದರೊಂದಿಗೆ ಹೊಸ ಕಾರು ಹೆಕ್ಟರ್ ಕಾರಿಗಿಂತಲೂ ತಳಮಟ್ಟದ ಕಾರು ಮಾದರಿಯಾಗಿ ರಸ್ತೆಗಿಳಿಯಲಿದ್ದು, ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್, ಏರ್ ಫಿಲ್ಟರ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂಜಿ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು

ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.17 ಲಕ್ಷ ರೂ.20 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

Article Published On: Wednesday, November 6, 2019, 14:40 [IST]
English summary
MG ZS Electric SUV Set To Be Unveiled In India On December 5 - Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+