ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ ರೇಟಿಂಗ್ ಗಿಟ್ಟಿಸಿಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್
ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮುಂಬರುವ 2020ರ ಜನವರಿ ಅಂತ್ಯಕ್ಕೆ ಭಾರತದಲ್ಲೂ ಬಿಡುಗಡೆಯಾಗಲಿದ್ದು, ಯುರೋ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ತನ್ನದಾಗಿಸಿಕೊಂಡಿದೆ.

ಯುರೋಪ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಯುರೋ ಎನ್‍ಸಿಎಪಿಯಲ್ಲಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಭಾಗಿಯಾಗಿದ್ದು, ಪ್ರಯಾಣಿಕರ ಸುರಕ್ಷಾ ವಿಭಾಗದಲ್ಲಿ ಗರಿಷ್ಠ ಮಟ್ಟದ ಅಂಕವನ್ನು ಪಡೆದುಕೊಂಡಿದೆ. ಕ್ರ್ಯಾಶ್ ಟೆಸ್ಟಿಂಗ್‍ನಲ್ಲಿ ಜೆಡ್ಎಸ್ ಇವಿ ಕಾರು 5ಕ್ಕೆ 5 ಅಂಕಗಳನ್ನು ತನ್ನದಾಸಿಕೊಂಡಿದ್ದು, ವಿವಿಧ ವಿಭಾಗಗಳಲ್ಲಿ ನಡೆಸಲಾದ ಟೆಸ್ಟಿಂಗ್‌ನಲ್ಲಿ ಗರಿಷ್ಠ ಅಂಕಗಳೊಂದಿಗೆ ಜೆಡ್ಎಸ್ ಕಾರು ಗುಣಮಟ್ಟ ಮತ್ತು ಸುರಕ್ಷತೆಯಲ್ಲಿ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಇನ್ನು 2020ರ ಜನವರಿ ಕೊನೆಯಲ್ಲಿ ಬಿಡುಗಡೆಯಾಗಲಿರುವ ಜೆಡ್ಎಸ್ ಇವಿ ಕಾರು ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿಯಾದ ನಂತರ ಗ್ರಾಹಕರ ಕೈ ಸೇರಲಿದ್ದು, ಹೆಕ್ಟರ್ ಬಿಡುಗಡೆಯ ಯಶಸ್ವಿ ನಂತರ ಹೊಸ ಕಾರುಗಳ ಬಿಡುಗಡೆಯ ವಿಚಾರದಲ್ಲಿ ಮಹತ್ವದ ಹೆಜ್ಜೆಯಿಡುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಭಾರತೀಯ ಗ್ರಾಹಕರ ಬೇಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಸುರಕ್ಷಾ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ, ಸುಲಭವಾಗಿ ಲಭ್ಯವಾಗುವ ಗ್ರಾಹಕರ ಸೇವೆಗಳು ಹೊಸ ಕಾರು ಖರೀದಿಯ ಮೌಲ್ಯವನ್ನು ಹೆಚ್ಚಿಸಲಿದ್ದು, ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭರ್ಜರಿ ಪೈಪೋಟಿ ನೀಡಲಿದೆ.

ಬ್ಯಾಟರಿ ಸಾಮರ್ಥ್ಯ
ಎಂಜಿ ಮೋಟಾರ್ ಸಂಸ್ಥೆಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ 44.5kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 1 ಗಂಟೆಯಲ್ಲಿ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದ್ದು, ಫಾಸ್ಟ್ ಚಾರ್ಜಿಂಗ್ ಮಾತ್ರವಲ್ಲದೇ ಸಾಮಾನ್ಯ ಚಾರ್ಜಿಂಗ್ ಸಾಕೆಟ್ ಜೊತೆ ಐದು ವಿವಿಧ ಮಾರ್ಗಗಳಲ್ಲಿ ಚಾರ್ಜ್ ಮಾಡಿಕೊಳ್ಳಬಹುದಾದ ಅವಕಾಶ ಈ ಕಾರಿನಲ್ಲಿದೆ.

ಜೊತೆಗೆ ಹೊಸ ಕಾರು ಮೈಲೇಜ್‌ನಲ್ಲಿ ಮಾತ್ರವಲ್ಲದೇ ಪರ್ಫಾಮೆನ್ಸ್‌ನಲ್ಲೂ ಕೂಡಾ ಗಮನಸೆಳೆಯಲಿದ್ದು, ಮುಂಭಾಗದ ಚಕ್ರಗಳಿಗೆ ಶಕ್ತಿ ಒದಗಿಸುವ ಮೂಲಕ 141-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಇನ್ನು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಮುಂಭಾಗದಲ್ಲಿ ಎಂಜಿ ಸಿಗ್ನಿಚೆರ್ ಗ್ರಿಲ್, ಗ್ರಿಲ್ ಒಳಭಾಗದಲ್ಲೇ ಚಾರ್ಜಿಂಗ್ ಪೋರ್ಟ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ ಗಳು ಮತ್ತು 17-ಇಂಚಿನ ಅಲಾಯ್ ವೀಲ್ಹ್ ಸೌಲಭ್ಯವನ್ನು ಪಡೆದಿದೆ.

ಹೊಸ ಕಾರಿನಲ್ಲಿ ಹೊರಭಾಗದ ಫೀಚರ್ಸ್‌ಗಳು ಮಾತ್ರವಲ್ಲದೇ ಒಳಭಾಗದ ಫೀಚರ್ಸ್‌ಗಳು ಕೂಡಾ ಗಮನಸೆಳೆಯಲಿದ್ದು, ಪ್ರೀಮಿಯಂ ಕ್ಯಾಬಿನ್ ವೈಶಿಷ್ಟ್ಯತೆಯು ಎಸ್‌ಯುವಿ ಪ್ರಿಯರ ಗಮನಸೆಳೆಯಲಿದೆ. ಸಿಲ್ವರ್ ಆಕ್ಸೆಂಟ್ ಹೊಂದಿರುವ ಡ್ಯಾಶ್‌ಬೋರ್ಡ್, ಐ-ಸ್ಮಾರ್ಟ್ ಕನೆಕ್ಟಿವಿಟಿ ಹೊಂದಿರುವ 8-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಯುನಿಟ್, ಆಂಡ್ರಾಯಿಡ್ ಆಟೋ, ಆಟೋ ಕಾರ್ ಪ್ಲೇ ಮತ್ತು ನ್ಯಾವಿಗೇಷನ್ ಸೌಲಭ್ಯವಿದೆ.

ಹಾಗೆಯೇ ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್, ತಾಪಮಾನವನ್ನು ಸರಿದೂಗಿಸಿಕೊಳ್ಳಬಹುದಾದ ಮುಂಭಾಗ ಸೀಟುಗಳು, ಎಲೆಕ್ಟ್ರಿಕಲ್ ಅಡ್ಜೆಸ್ಟ್ ಮಾಡಬಹುದು ಚಾಲನಕ ಸೀಟು ಮತ್ತು ಹಿಂಬದಿ ಪ್ರಯಾಣಿಕರಿಗೂ ಎಸಿ ವೆಂಟ್ಸ್ ಜೊತೆಗೆ ಗುಣಮಟ್ಟದ ಲೆದರ್ ಸೀಟುಗಳನ್ನು ನೀಡಲಾಗಿದೆ.
ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಫೀಚರ್ಸ್‌ಗಳನ್ನು ನೀಡಿರುವ ಎಂಜಿ ಮೋಟಾರ್ ಸಂಸ್ತೆಯು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, 4 ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 360 ಡಿಗ್ರಿ ವ್ಯೂವ್ ಕ್ಯಾಮೆರಾ, ಏರ್ ಫಿಲ್ಟರ್, ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವನ್ನು ಹೊಂದಿರಲಿವೆ. ಹಾಗಾದ್ರೆ ಕ್ರ್ಯಾಶ್ ಟೆಸ್ಟ್‌ನಲ್ಲಿ ಹೊಸ ಜೆಡ್ಎಸ್ ಇವಿ ಕಾರಿನ ಪ್ರದರ್ಶನ ಹೇಗಿತ್ತು ಎನ್ನುವುದನ್ನು ಈ ವಿಡಿಯೋದಲ್ಲಿ ನೋಡಿರಿ.

ಜೆಡ್ಎಸ್ ಎಲೆಕ್ಟ್ರಿಕ್ ಬೆಲೆ(ಅಂದಾಜು)
ಸದ್ಯ ಅನಾವರಣಗೊಳಿಸಲಾಗಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮುಂದಿನ ವರ್ಷ ಜನವರಿ ಕೊನೆಯಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿರುವ ರೂ.19 ಲಕ್ಷದಿಂದ ರೂ.22 ಲಕ್ಷ ಬೆಲೆ ಹೊಂದಲಿದೆ.


Click it and Unblock the Notifications








