ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ದೇಶಿಯ ಮಾರುಕಟ್ಟೆಯಲ್ಲಿ ಇದೇ ತಿಂಗಳು 5ರಂದು ಅನಾವರಣಗೊಂಡಿದ್ದ ಎಂಜಿ ಮೋಟಾರ್ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಖರೀದಿಗೆ ಶೀಘ್ರದಲ್ಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಮಾಹಿತಿಗಳ ಪ್ರಕಾರ, ಹೊಸ ಕಾರು ಖರೀದಿಗೆ ಇದೇ ತಿಂಗಳು 26ರಿಂದ ಬುಕ್ಕಿಂಗ್ ಆರಂಭವಾಗಲಿದ್ದು, ರೂ.50 ಸಾವಿರ ಮುಂಗಡ ಪಾವತಿ ನಿಗದಿಪಡಿಸಲಾಗಿದೆ. 2020ರ ಜನವರಿ ಕೊನೆಯಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿಯಾದ ನಂತರ ಗ್ರಾಹಕರ ಕೈ ಸೇರಲಿದೆ. ಹೆಕ್ಟರ್ ಕಾರು ಬಿಡುಗಡೆಯ ಯಶಸ್ವಿ ನಂತರ ಹೊಸ ಕಾರುಗಳ ಬಿಡುಗಡೆಯ ವಿಚಾರದಲ್ಲಿ ಮಹತ್ವದ ಹೆಜ್ಜೆಯಿಡುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಭಾರತೀಯ ಗ್ರಾಹಕರ ಬೇಡಿಕೆಗೆ ಹೆಚ್ಚಿನ ಆದ್ಯತೆ ನೀಡಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ, ಸುಲಭವಾಗಿ ಲಭ್ಯವಾಗುವ ಗ್ರಾಹಕರ ಸೇವೆಗಳು ಹೊಸ ಕಾರು ಖರೀದಿಯ ಮೌಲ್ಯವನ್ನು ಹೆಚ್ಚಿಸಲಿದ್ದು, ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭರ್ಜರಿ ಪೈಪೋಟಿ ನೀಡಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಬ್ಯಾಟರಿ ಸಾಮರ್ಥ್ಯ

ಎಂಜಿ ಮೋಟಾರ್ ಸಂಸ್ಥೆಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ 44.5kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 1 ಗಂಟೆಯಲ್ಲಿ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದ್ದು, ಫಾಸ್ಟ್ ಚಾರ್ಜಿಂಗ್ ಮಾತ್ರವಲ್ಲದೇ ಸಾಮಾನ್ಯ ಚಾರ್ಜಿಂಗ್ ಸಾಕೆಟ್ ಜೊತೆ ಐದು ವಿವಿಧ ಮಾರ್ಗಗಳಲ್ಲಿ ಚಾರ್ಜ್ ಮಾಡಿಕೊಳ್ಳಬಹುದಾದ ಅವಕಾಶ ಈ ಕಾರಿನಲ್ಲಿದೆ. ಜೊತೆಗೆ ಹೊಸ ಕಾರು ಮೈಲೇಜ್‌ನಲ್ಲಿ ಮಾತ್ರವಲ್ಲದೇ ಪರ್ಫಾಮೆನ್ಸ್‌ನಲ್ಲೂ ಕೂಡಾ ಗಮನಸೆಳೆಯಲಿದ್ದು, ಮುಂಭಾಗದ ಚಕ್ರಗಳಿಗೆ ಶಕ್ತಿ ಒದಗಿಸುವ ಮೂಲಕ 141-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಇನ್ನು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಮುಂಭಾಗದಲ್ಲಿ ಎಂಜಿ ಸಿಗ್ನಿಚೆರ್ ಗ್ರಿಲ್, ಗ್ರಿಲ್ ಒಳಭಾಗದಲ್ಲೇ ಚಾರ್ಜಿಂಗ್ ಪೋರ್ಟ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ ಗಳು ಮತ್ತು 17-ಇಂಚಿನ ಅಲಾಯ್ ವೀಲ್ಹ್ ಸೌಲಭ್ಯವನ್ನು ಪಡೆದಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಹೊಸ ಕಾರಿನಲ್ಲಿ ಹೊರಭಾಗದ ಫೀಚರ್ಸ್‌ಗಳು ಮಾತ್ರವಲ್ಲದೇ ಒಳಭಾಗದ ಫೀಚರ್ಸ್‌ಗಳು ಕೂಡಾ ಗಮನಸೆಳೆಯಲಿದ್ದು, ಪ್ರೀಮಿಯಂ ಕ್ಯಾಬಿನ್ ವೈಶಿಷ್ಟ್ಯತೆಯು ಎಸ್‌ಯುವಿ ಪ್ರಿಯರ ಗಮನಸೆಳೆಯಲಿದೆ. ಸಿಲ್ವರ್ ಆಕ್ಸೆಂಟ್ ಹೊಂದಿರುವ ಡ್ಯಾಶ್‌ಬೋರ್ಡ್, ಐ-ಸ್ಮಾರ್ಟ್ ಕನೆಕ್ಟಿವಿಟಿ ಹೊಂದಿರುವ 8-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಯುನಿಟ್, ಆಂಡ್ರಾಯಿಡ್ ಆಟೋ, ಆಟೋ ಕಾರ್ ಪ್ಲೇ ಮತ್ತು ನ್ಯಾವಿಗೇಷನ್ ಸೌಲಭ್ಯವಿದೆ.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಹಾಗೆಯೇ ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್, ತಾಪಮಾನವನ್ನು ಸರಿದೂಗಿಸಿಕೊಳ್ಳಬಹುದಾದ ಮುಂಭಾಗ ಸೀಟುಗಳು, ಎಲೆಕ್ಟ್ರಿಕಲ್ ಅಡ್ಜೆಸ್ಟ್ ಮಾಡಬಹುದು ಚಾಲನಕ ಸೀಟು ಮತ್ತು ಹಿಂಬದಿ ಪ್ರಯಾಣಿಕರಿಗೂ ಎಸಿ ವೆಂಟ್ಸ್ ಜೊತೆಗೆ ಗುಣಮಟ್ಟದ ಲೆದರ್ ಸೀಟುಗಳನ್ನು ನೀಡಲಾಗಿದೆ.

MOST READ: ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಫೀಚರ್ಸ್‌ಗಳನ್ನು ನೀಡಿರುವ ಎಂಜಿ ಮೋಟಾರ್ ಸಂಸ್ತೆಯು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, 4 ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 360 ಡಿಗ್ರಿ ವ್ಯೂವ್ ಕ್ಯಾಮೆರಾ, ಏರ್ ಫಿಲ್ಟರ್, ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವನ್ನು ಹೊಂದಿರಲಿವೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಜೆಡ್ಎಸ್ ಎಲೆಕ್ಟ್ರಿಕ್ ಬೆಲೆ(ಅಂದಾಜು)

ಸದ್ಯ ಅನಾವರಣಗೊಳಿಸಲಾಗಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮುಂದಿನ ವರ್ಷ ಜನವರಿ ಕೊನೆಯಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿರುವ ರೂ.19 ಲಕ್ಷದಿಂದ ರೂ.22 ಲಕ್ಷ ಬೆಲೆ ಹೊಂದಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಬುಕ್ಕಿಂಗ್ ಆರಂಭ

ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಮೊದಲ ಹಂತವಾಗಿ ದೆಹಲಿ, ಬೆಂಗಳೂರು, ಮುಂಬೈ, ಹೈದ್ರಾಬಾದ್ ಮತ್ತು ಪುಣೆಯಲ್ಲಿ ಮಾತ್ರವೇ ಹೊಸ ಕಾರುಗಳನ್ನು ಮಾರಾಟ ಮಾಡಲಿದೆ.

Via - NDTV Auto

Article Published On: Thursday, December 19, 2019, 14:37 [IST]
English summary
MG Motor is planning to start pre bookings for the ZS electric SUV in India from December 21 for an amount of ₹ 50,000.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+