Just In
- 9 hrs ago
ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ
- 23 hrs ago
ನೆಚ್ಚಿನ ವಾಹನದ 50ನೇ ಹುಟ್ಟುಹಬ್ಬವನ್ನು ಆಚರಿಸಿದ ಅಪ್ಪ-ಮಗ
- 24 hrs ago
ಗ್ರಾಹಕರ ಕೈಸೇರಲು ಸಿದ್ದವಾದ ಬಿಎಸ್-6 ಎಂಜಿನ್ ಪ್ರೇರಿತ ಯಮಹಾ ಆರ್15 ವಿ3.0
- 1 day ago
ಆಟೋ ಮಾರುಕಟ್ಟೆ ಕುಸಿತದ ನಡುವೆಯೂ ಭರ್ಜರಿ ಮಾರಾಟವಾದ ಮಹೀಂದ್ರಾ ಸ್ಕಾರ್ಪಿಯೋ
Don't Miss!
- News
ಸಂಚಾರ ನಿಯಮ ಉಲ್ಲಂಘನೆ; 15 ಸಾವಿರ ದಂಡ ಕಟ್ಟಿದ ವ್ಯಾಪಾರಿ
- Finance
ಸಾವಯವ ಬೆಲ್ಲದ ಬಿಜಿನೆಸ್ ಹೇಗಿದೆ, ಎಷ್ಟು ಬೇಕು ಬಂಡವಾಳ?
- Technology
ಆನ್ಲೈನ್ ಜಾಹೀರಾತುಗಳಿಂದ ಬೇಸರವಾಗಿದ್ದೀರಾ..? ಇಲ್ಲಿದೆ ಪರಿಹಾರ..!
- Movies
ಮಸ್ತ್ ಮಜಾ ನೀಡುವ 'ಬಡ್ಡಿ ಮಗನ್ ಲೈಫು' ಟ್ರೇಲರ್
- Sports
ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್ಗೆ ಮರುಳುತ್ತಾರಾ ಎಬಿ ಡಿವಿಲಿಯರ್ಸ್?
- Lifestyle
ವಾರ ಭವಿಷ್ಯ- ಡಿಸೆಂಬರ್ 15ರಿಂದ ಡಿಸೆಂಬರ್ 21ರ ತನಕ
- Education
KSP: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಇಟಿ- ಪಿಎಸ್ಟಿ ಪ್ರವೇಶ ಪತ್ರ ಬಿಡುಗಡೆ
- Travel
ಹಳ್ಳಿಗಾಡಿನ ಸೊಗಡನ್ನು ಅನುಭವಿಸಲು ಬೆಂಗಳೂರಿನ ಸುತ್ತಮುತ್ತ ಇರುವ ಈ ಸುಂದರ ಗ್ರಾಮಗಳಿಗೆ ಹೋಗಿ ಬನ್ನಿ
ಎಂಜಿ ಇಜೆಡ್ಎಸ್ ಕಾರು ಖರೀದಿಸುವ ಗ್ರಾಹಕರಿಗೆ ಸಿಗಲಿದೆ ವಿಶೇಷ ಕೊಡುಗೆ..!
ಮುಂದಿನ ತಿಂಗಳು ಡಿಸೆಂಬರ್ 5ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿರುವ ಎಂಜಿ ಮೋಟಾರ್ ಬಹುನೀರಿಕ್ಷಿತ ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಗ್ರಾಹಕರ ಆಕರ್ಷಣೆ ಕಾರಣವಾಗಿದ್ದು, ಸೀಮಿತ ಅವಧಿಯೊಳಗೆ ಹೊಸ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡಲು ಎಂಜಿ ಮೋಟಾರ್ ಮಹತ್ವದ ನಿರ್ಣಯ ಕೈಗೊಂಡಿದೆ.

ಅನಾವರಣಗೊಂಡ ನಂತರ 2020ರ ಜನವರಿವರಿ ಆರಂಭದಲ್ಲಿ ಇಜೆಡ್ಎಸ್ ಕಾರು ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದ್ದು, ಸೀಮಿತ ಅವಧಿಯೊಳಗೆ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಖರೀದಿಸುವ ಗ್ರಾಹಕರಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಹೇಳಿಕೊಂಡಿದೆ. ಇನ್ನುಳಿದಂತೆ ಹೊಸ ಕಾರು ಬಿಡುಗಡೆಗೂ ಮುನ್ನ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿರುವ ಎಂಜಿ ಸಂಸ್ಥೆಯು ಗರಿಷ್ಠ ಪ್ರಮಾಣದ ಗ್ರಾಹಕರನ್ನು ಸೆಳೆಯಲು ಮುಂದಾಗಿದ್ದು, ವಾರ್ಷಿಕವಾಗಿ 3 ಸಾವಿರ ಎಲೆಕ್ಟ್ರಿಕ್ ಕಾರುಗಳ ಮಾರಾಟ ಗುರಿಹೊಂದಿದೆ.

ಇನ್ನು ಇಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆ ನಡೆಸಿರುವ ಎಂಜಿ ಮೋಟಾರ್ ಸಂಸ್ಥೆಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಮತ್ತು ಬ್ಯಾಟರಿ ಸಾಮಾರ್ಥ್ಯದ ಕುರಿತು ವಿವಿಧ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಹೊಸ ಕಾರು ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ.

ಇಜೆಡ್ಎಸ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಹೊಸ ಕಾರಿನಲ್ಲಿರುವ ತಾಂತ್ರಿಕ ಅಂಶಗಳ ಕುರಿತಾದ ಮಹತ್ವದ ಮಾಹಿತಿಗಳು ಒಂದೊಂದಾಗಿ ಸೋರಿಕೆಯಾಗುತ್ತಿದ್ದು, ಐಷಾರಾಮಿ ಕಾರುಗಳ ಮಾದರಿಯಲ್ಲಿ ಶುದ್ದಗಾಳಿ ಒದಗಿಸುವ ಏರ್ ಫಿಲ್ಟರ್ ಸೌಲಭ್ಯವನ್ನು ಒದಗಿಸಲಿದೆಯೆಂತೆ. ಇದು ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಹಾಗೆಯೇ ಜೆಡ್ಎಸ್ ಕಾರು ಎಲೆಕ್ಟ್ರಿಕ್ ವರ್ಷನ್‌ನಲ್ಲಿ ಮಾತ್ರವಲ್ಲದೇ ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಆಯ್ಕೆಯಲ್ಲೂ ಸಹ ಬಿಡುಗಡೆಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ಜೆಡ್ಎಸ್ ಕಾರು ಬಿಡುಗಡೆಗೂ ಮುನ್ನ ಇಜೆಡ್ಎಸ್ ಕಾರು ಬಿಡುಗಡೆಯಾಗಲಿದ್ದು, ತದನಂತರವಷ್ಟೇ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರವಷ್ಟೇ ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ರಸ್ತೆಗಿಳಿಯಲಿವೆ. ಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಚಾರ್ಜ್‌ಗೆ 320ರಿಂದ 350ಕಿ.ಮೀ ಮೈಲೇಜ್ ಸಾಮರ್ಥ್ಯ ಹೊಂದಿರಲಿದೆ.

ಹಾಗೆಯೇ ಇಜೆಡ್ಎಸ್ ಮೇಲೆ ಎಂಜಿ ಮೋಟಾರ್ ಗರಿಷ್ಠ 7 ವರ್ಷಗಳ ಕಾಲ ವಾರಂಟಿ ನೀಡಲಿದ್ದು, ಕಾರಿನಲ್ಲಿ ಐಷಾರಾಮಿ ಚಾಲನಾ ಅನುಭವಕ್ಕಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದೆ.

ಹೊಸ ಕಾರಿನಲ್ಲಿ ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಆಕ್ಟಿವ್ ಎರ್ಮಜೆನ್ಸಿ ಬ್ರೆಕಿಂಗ್, ಲೆನ್ ಕಿಪಿಂಗ್ ಅಸಿಸ್ಟ್, ಟ್ರಾಫಿಕ್ ಜಾಮ್ ಅಸಿಸ್ಟ್, ಇಂಟಲಿಜೆಂಟ್ ಸ್ಪೀಡ್ ಲಿಮಿಟ್ ಅಸಿಸ್ಟ್ ಮತ್ತು ಟಾಪ್ ಎಂಡ್ ಮಾದರಿಯಲ್ಲಿ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಸಿಸ್ಟಂ ಸೌಲಭ್ಯ ಇರಲಿದೆ.
MOST READ: ನಮ್ಮ ಬೆಂಗಳೂರು ತಲುಪಿದ ವೆಲ್‌ಫೈರ್- ಹೊಸ ಕಾರು ಬಿಡುಗಡೆಗೆ ಟೊಯೊಟಾ ಭರ್ಜರಿ ತಯಾರಿ..!

ಇದರೊಂದಿಗೆ ಹೊಸ ಕಾರು ಹೆಕ್ಟರ್ ಕಾರಿಗಿಂತಲೂ ತಳಮಟ್ಟದ ಕಾರು ಮಾದರಿಯಾಗಿ ರಸ್ತೆಗಿಳಿಯಲಿದ್ದು, ಸಿಗ್ನೆಚರ್ ಹನಿಕೊಂಬ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಅಲ್ಯುನಿಯಂ ಸ್ಕಿಡ್ ಪ್ಲೇಟ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಪ್ರೀಮಿಯಂ ಕ್ಯಾಬಿನ್, ಎಂಟು ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಜೊತೆ ಅಂಡ್ರಾಯಿಡ್ ಆಟೋ, ರೈನ್ ಸೆನ್ಸಾರ್ ವೈಪರ್, ವೆಂಟಿಲೆಟೆಡ್ ಲೆದರ್ ಸೀಟುಗಳು, ಕ್ಲೈಮೆಟ್ ಕಂಟ್ರೊಲ್, ಏರ್ ಫಿಲ್ಟರ್ ಮತ್ತು ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ಸ್ ಹೊಂದಿದೆ.
MOST READ: ಕಾರು ಅಪ್ಪಚ್ಚಿಯಾದರೂ ಬದುಕುಳಿದ ಕಾರು ಚಾಲಕ

ಹೊಸ ಕಾರಿನಲ್ಲಿ ಇಕೊ, ನಾರ್ಮಲ್ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳನ್ನು ಸಹ ನೀಡಲಾಗಿದ್ದು, ಪನೆರೊಮಿಕ್ ಸನ್‌ರೂಫ್ ಸೌಲಭ್ಯವು ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಎರ್ಮಜೆನ್ಸಿ ಬ್ರೇಕಿಂಗ್, ಲೈನ್ ಕೀಪ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, ಹಿಲ್ ಲಾಂಚ್ ಅಸಿಸ್ಟ್ ಸೌಲಭ್ಯ ಹೊಂದಿದೆ.
MOST READ: ಈ 6 ಕಾರಣಗಳಿಂದಾಗಿ ಫುಲ್ ಫೇಮಸ್ ಆಯ್ತು ಕಿಯಾ ಸೆಲ್ಟೊಸ್

ಈ ಮೂಲಕ ಎಲೆಕ್ಟ್ರಿಕ್ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿರುವ ಇಜೆಡ್ಎಸ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.17 ಲಕ್ಷದಿಂದ ರೂ.20 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.