ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

2020ರ ಜನವರಿಯಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಬಹುನೀರಿಕ್ಷಿತ ಜೆಡ್ಎಸ್ ಎಲೆಕ್ಟ್ರಿಕ್ ಕಾರು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ಹೊಸ ಕಾರಿನಲ್ಲಿ ವೆರಿಯೆಂಟ್‌ಗಳು ಮತ್ತು ಫೀಚರ್ಸ್‌ಗಳ ಕುರಿತಾದ ಸಂಪೂರ್ಣ ಮಾಹಿತಿ ಬಗೆಗೆ ಇಲ್ಲಿ ಚರ್ಚಿಸಲಾಗಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಭಾಗಿಯಾದ ನಂತರ ಗ್ರಾಹಕರ ಕೈ ಸೇರಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಹಲವಾರು ವಿಶೇಷತೆಗಳೊಂದಿಗೆ ಅಭಿವೃದ್ದಿ ಹೊಂದಿದೆ. ಆಕರ್ಷಕ ಬೆಲೆಯಲ್ಲಿ ಉತ್ತಮ ಮೈಲೇಜ್, ವಿಶ್ವದರ್ಜೆಯ ಫೀಚರ್ಸ್‌ಗಳು, ಬ್ಯಾಟರಿ ಮೇಲೆ ಗರಿಷ್ಠ ಮಟ್ಟದ ವಾರಂಟಿ, ಸುಲಭವಾಗಿ ಲಭ್ಯವಾಗುವ ಗ್ರಾಹಕರ ಸೇವೆಗಳು ಹೊಸ ಕಾರು ಖರೀದಿಯ ಮೌಲ್ಯವನ್ನು ಹೆಚ್ಚಿಸಲಿದ್ದು, ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರಿಗೆ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭರ್ಜರಿ ಪೈಪೋಟಿ ನೀಡಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಬ್ಯಾಟರಿ ಸಾಮರ್ಥ್ಯ

ಎಂಜಿ ಮೋಟಾರ್ ಸಂಸ್ಥೆಯು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎರಡು ಮಾದರಿಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಐಷಾರಾಮಿ ಕಾರು ಮಾದರಿಯಲ್ಲಿ ಹಲವಾರು ಗುಣಮಟ್ಟದ ಫೀಚರ್ಸ್‌ಗಳಲ್ಲಿದ್ದು, ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಮಾದರಿಗಳಲ್ಲಿ ತುಸು ವಿಭಿನ್ನವಾದ ತಾಂತ್ರಿಕ ಸೌಲಭ್ಯಗಳಿವೆ. ಸಾಮಾನ್ಯ ಕಾರು ಚಾಲನೆಗಾಗಿ ಎಕ್ಸೈಟ್ ಮತ್ತು ಐಷಾರಾಮಿ ಸೌಲಭ್ಯಗಳನ್ನು ಬಯಸುವ ಗ್ರಾಹಕರಿಗೆ ಎಕ್ಸ್‌ಕ್ಲೂಸಿವ್ ಮಾದರಿ ಖರೀದಿಗೆ ಉತ್ತಮವಾಗಿದೆ. ಆದರೆ ಎರಡು ಮಾದರಿಗಳಲ್ಲೂ ಬಹುತೇಕ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಎಕ್ಸೈಟ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

*17 ಇಂಚಿನ ಅಲಾಯ್ ವೀಲ್ಹ್‌ಗಳು

*ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್

*ಹೊಂದಾಣಿಕೆ ಮಾಡಿಕೊಳ್ಳಬಹುದಾದ ಎಲೆಕ್ಟ್ರಿಕ್ ಅಡ್ಜೆಸ್ಟೆಬಲ್ ಒಆರ್‌ವಿಎಂಎಸ್

*ಲೆದರ್ ವ್ಯಾರ್ಪ್ಡ್ ಸ್ಟಿರಿಂಗ್ ವೀಲ್ಹ್ *ಪುಶ್ ಬಟನ್ ಸ್ಟಾರ್ಟ್/ಸ್ಟಾಪ್

*ಅನ್‌ಲಾಗ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ *3.5 ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ*60:40 ಅನುಪಾತದ ಸ್ಪೀಟ್ ರಿಯರ್ ಸೀಟ್ *6 ಏರ್‌ಬ್ಯಾಗ್‌ಗಳು

*ಎಬಿಎಸ್ ಜೊತೆ ಇಬಿಡಿ *ಹಿಲ್ ಸ್ಟಾರ್ಟ್ ಅಸಿಸ್ಟ್ *ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್*ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ * ISOFIX ಚೈಲ್ಡ್ ಸೀಟ್ ಮೌಂಟ್

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿರುವ ಪ್ರಮುಖ ತಾಂತ್ರಿಕ ಅಂಶಗಳು

ಆರಂಭಿಕ ಆವೃತ್ತಿಯಾಗಿರುವ ಎಕ್ಸೈಟ್ ವೆರಿಯೆಂಟ್‌ ತಾಂತ್ರಿಕ ಅಂಶಗಳೊಂದಿಗೆ ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಇನ್ನು ಕೆಲವು ಹೆಚ್ಚುವರಿ ಪ್ರೀಮಿಯಂ ಫೀಚರ್ಸ್ ನೀಡಲಾಗಿದ್ದು, 8.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಪನೊರಮಿಕ್ ಸನ್‌ರೂಫ್, 6-ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಐ-ಸ್ಮಾರ್ಟ್ 2.0 ಕನೆಟೆಡ್ ಟೆಕ್ನಾಲಜಿ, ಹಿಟೆಡ್ ಒಆರ್‌ವಿಎಂಎಸ್, ಏರ್‌ ಫ್ಲೂರಿಫ್ಲೈರ್ ಜೊತೆ ಪಿಎಂ 2.5 ಫಿಲ್ಟರ್ ಸೌಲಭ್ಯಗಳನ್ನು ಹೊಂದಿರಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಈ ಮೂಲಕ ಮಧ್ಯಮ ಗಾತ್ರದ ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ಎನ್ನಿಸಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದ್ದು, ಎಕ್ಸೈಟ್ ವೆರಿಯೆಂಟ್ ಸಾಮಾನ್ಯ ಬೆಲೆ ಹೊಂದಲಿದ್ದರೆ ಎಕ್ಸ್‌ಕ್ಲೂಸಿವ್ ವೆರಿಯೆಂಟ್ ತುಸು ದುಬಾರಿ ಎನ್ನಿಸಲಿದೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಜೆಡ್ಎಸ್ ಎಲೆಕ್ಟ್ರಿಕ್ ಬೆಲೆ(ಅಂದಾಜು)

ಸದ್ಯ ಅನಾವರಣಗೊಳಿಸಲಾಗಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮುಂದಿನ ವರ್ಷ ಜನವರಿ ಕೊನೆಯಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿರುವ ರೂ.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.22 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನಲ್ಲಿ ಯಾವ ವೆರಿಯೆಂಟ್‌ ಖರೀದಿಗೆ ಬೆಸ್ಟ್?

ಎಂಜಿ ಸಂಸ್ಥೆಯು ಮೊದಲ ಹಂತವಾಗಿ ದೆಹಲಿ, ಬೆಂಗಳೂರು, ಮುಂಬೈ, ಹೈದ್ರಾಬಾದ್ ಮತ್ತು ಪುಣೆಯಲ್ಲಿ ಮಾತ್ರವೇ ಹೊಸ ಕಾರನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ದೇಶಾದ್ಯಂತ ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಖರೀದಿಗೆ ಲಭ್ಯವಿರಲಿದೆ. ಜೊತೆಗೆ ಹೊಸ ಕಾರು ಖರೀದಿಗೆ ಈಗಾಗಲೇ ಬುಕ್ಕಿಂಗ್ ಆರಂಭವಾಗಿದ್ದು, ಆಸಕ್ತ ಗ್ರಾಹಕರು ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಮಾಡಬಹುದಾಗಿದೆ.

Most Read Articles

Kannada
English summary
MG ZS EV Variants In Detail: Which Is The Best Model To Buy? Read mo in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X