ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2020ರ ಆಡಿ ಎ8 ಎಲ್ ಕಾರು
2019 ಆಟೋಮೊಬೈಲ್ ಕ್ಷೇತ್ರಕ್ಕೆ ತುಂಬಾ ನಿರಾಸೆ ಮೂಡಿಸಿದ ವರ್ಷವಾಗಿದೆ. ಕಳೆದ ಹಲವು ತಿಂಗಳುಗಳಿಂದ ಆಟೋಮೊಬೈಲ್ ಕ್ಷೇತ್ರದಲ್ಲಿ ಕುಸಿತವಾಗಿರುವುದರಿಂದ ಕಾರುಗಳ ಮಾರಾಟವು ಕಡಿಮೆಯಾಗಿದೆ.

ಇದಕ್ಕೆ ಆಡಿ ಕಂಪನಿ ಸಹ ಹೊರತಲ್ಲ. ಆಡಿ ಕಂಪನಿಯ ಕಾರುಗಳ ಮಾರಾಟವು ಕಡಿಮೆಯಾಗಿವೆ. ಆಡಿ ಕಂಪನಿಯು ತನ್ನ 2020ರ ಆಡಿ ಎಲ್ ಕಾರ್ ಅನ್ನು ಈ ವರ್ಷದ ಅಂತ್ಯದಲ್ಲಿ ಬಿಡುಗಡೆಗೊಳಿಸಬೇಕಾಗಿತ್ತು. ಆದರೆ ಆಡಿ ಮಾರಾಟದಲ್ಲಿ ಇಳಿಕೆಯಾಗಿರುವುದರಿಂದ ಬಿಡುಗಡೆಗೊಳಿಸುವುದು ತಡವಾಗಿದೆ.

ಇದೀಗ 2020ರ ಆಡಿ ಎಲ್8 ಕಾರ್ ಅನ್ನು ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಆಡಿ ಇಂಡಿಯಾದ ಮುಖ್ಯಸ್ಥ ಬಲ್ಬೀರ್ ಸಿಂಗ್ ಧಿಲ್ಲೋನ್ ಅವರು ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಮಾದರಿಯಾದ ನಾಲ್ಕನೇ ತಲೆಮಾರಿನ ಆಡಿ ಎ8 ಎಲ್ ಕಾರು ಲಾಂಗ್ ವ್ಹೀಲ್ ಬೇಸ್ ಅನ್ನು ಹೊಂದಿದೆ.

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿರುವ ಮಾದರಿಗಿಂತ 37 ಎಂಎಂ ಉದ್ದ ಮತ್ತು 17 ಎಂಎಂ ಎತ್ತರವನ್ನು ಹೊಂದಿದೆ. ಹೊಸ ಆಡಿ ಎ8 ಎಲ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.10 ಕೋಟಿಯಾಗಿದೆ.

ಹೊಸ ಆಡಿ ಎ8 ಎಲ್ ಕಾರು ಹಿಂದಿನ ಮಾದರಿಗಿಂತ ಆಕರ್ಷಕ ಲುಕ್ ಅನ್ನು ಹೊಂದಿದೆ. ಹೊಸ ಕಾರಿನ ಮುಂಭಾಗ ಗ್ರಿಲ್ ಅನ್ನು ಹೊಂದಿದೆ, ಸ್ಲಿಕ್ ಹೆಚ್‍ಡಿ ಮ್ಯಾಟ್ರಿಕ್ಸ್ ಎಲ್‍ಇಡಿ ಹೆಡ್‍ಲ್ಯಾಂಪ್‍ಗಳನ್ನು ಹೊಂದಿದ್ದು, ಇದನ್ನು ಕ್ರೋಮ್‍ಗಳಿಂದ ಅಲಂಕರಿಸಲಾಗಿದೆ.

ಅಂದವಾಗಿ ವಿನ್ಯಾಸಗೊಳಿಸಲಾದ ಹಿಂಭಾಗದಲ್ಲಿ ಸ್ಲಿಮ್ ಎಲ್‍ಇಡಿ ಟೇಲ್ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ಕಾರಿನ ಇಂಟಿರಿಯರ್‍ನಲ್ಲಿ ವರ್ಚುವಲ್ ಕಾಕ್‍ಪಿಟ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮಧ್ಯದ ಕನ್ಸೋಲ್‍ನಲ್ಲಿ 10.1 ಇಂಚಿನ ಇನ್ಫೋಟೇನ್‍ಮೆಂಟ್ ಟಚ್‍ಸ್ಕ್ರೀನ್ ಮತ್ತು ಕ್ಲೈಮೆಂಟ್ ಕಂಟ್ರೂಲ್ ಮತ್ತು ಮಲ್ಟಿಮೀಡಿಯಾ ಸ್ಕ್ರೀನ್ ಅನ್ನು ಹೊಂದಿದೆ.

ಹೊಸ ಕಾರಿನಲ್ಲಿ ವಿವಿಧ ರೀತಿಯ ಎಂಜಿನ್‍ಗಳನ್ನು ಅಳವಡಿಸಲಾಗಿದೆ. ಇದರಲ್ಲಿ 3.0 ಲೀಟರ್ ವಿ6 ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಿದೆ. ಇನ್ನೂ 3.0 ಲೀಟರ್ ವಿ6 ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ.

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಾರು 6.3 ಲೀಟರ್ ಡಬ್ಲ್ಯು 12 ಲಾಂಗಿಟ್ಯೂಡಿನಲ್ ಎಂಜಿನ್ ಅನ್ನು ಹೊಂದಿದೆ. ಇದು 12-ಸಿಲಿಂಡರ್ ಎಂಜಿನ್ ಆಗಿದ್ದು ಅದನ್ನು ಡಬ್ಲ್ಯೂ-ಓರಿಯಂಟೇಶನ್‌ನಲ್ಲಿ ಇರಿಸಲಾಗಿದೆ.

ಈ ಎಂಜಿನ್ 6,200 ಆರ್‍ಪಿಎಂನಲ್ಲಿ 500 ಬಿಹೆಚ್‍ಪಿ ಪವರ್ ಮತ್ತು 4,750 ಆರ್‍ಪಿಎಂನಲ್ಲಿ 625 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಆಡಿ ಎ8 ಎಲ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ಈ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು 7 ಸೀರೀಸ್ ಫೇಸ್‍ಲಿಫ್ಟ್ , ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್, ಲೆಕ್ಸಕ್ಸ್ ಎಲ್‍ಎಸ್ 500ಹೆಚ್ ಮತ್ತು ಎಕ್ಸ್‌ಜೆ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.


Click it and Unblock the Notifications