ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ವಾಹನ ವಾಹನ ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಹೊಸ ವಾಹನ ಮಾದರಿಗಳನ್ನು ಬಿಡುಗಡೆಗೊಳಿಸಿದ್ದು, ಆಟೋ ಉದ್ಯಮದ ಏರಿಳಿತದ ನಡುವೆಯೂ ಬಿಡುಗಡೆಗೊಂಡ ಕೆಲವು ಹೊಸ ಕಾರು ಆವೃತ್ತಿಗಳು ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿವೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಅಗಸ್ಟ್ ಅವಧಿಯಲ್ಲೇ ಅತಿ ಹೆಚ್ಚು ಹೊಸ ಕಾರು ಮಾದರಿಗಳು ಬಿಡುಗಡೆಗೊಂಡಿದ್ದು, ದೇಶದಲ್ಲಿ ಮೊದಲ ಬಾರಿಗೆ ಕಾರು ಮಾರಾಟ ಆರಂಭಿಸಿದ ಕಿಯಾ ಸೆಲ್ಟೊಸ್ ಕಾರು ಗ್ರಾಹಕರ ನೀರಿಕ್ಷೆಯಿಂತೆಯೇ ಬಿಡುಗಡೆಗೊಳ್ಳುವ ಮೂಲಕ ಭಾರೀ ಸದ್ದು ಮಾಡುತ್ತಿದೆ. ಇದೇ ಇನ್ನು ಕೆಲವು ಕಾರು ಉತ್ಪಾದನಾ ಸಂಸ್ಥೆಗಳು ಕೆಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳ ಮಾಹಿತಿ, ಬೆಲೆ ಮತ್ತು ಮಾರಾಟದ ಕುರಿತು ಇಲ್ಲಿ ಚರ್ಚಿಸಲಾಗಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಕಿಯಾ ಸೆಲ್ಟೊಸ್

ಪ್ರೀಮಿಯಂ ಸೌಲಭ್ಯಗಳೊಂದಿಗೆ ಸ್ಪೋರ್ಟಿ ಲುಕ್‌ ಮತ್ತು ಬಲಿಷ್ಠ ಬಾಡಿ ಕಿಟ್ ಹೊಂದಿರುವ ಸೆಲ್ಟೊಸ್ ಕಾರು ಒಟ್ಟು ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಾಗಿದೆ. ಸಾಮಾನ್ಯ ಕಾರು ಖರೀದಿದಾರರಿಗೆ ಟೆಕ್ ಲೈನ್ ಮತ್ತು ಸ್ಪೋರ್ಟಿ ಕಾರು ಪ್ರಿಯರಿಗೆ ಜಿಟಿ ಲೈನ್ ಮಾದರಿಯನ್ನು ಖರೀದಿ ಮಾಡಬಹುದುದಾಗಿದ್ದು, ಟೆಕ್ ಲೈನ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್ ಖರೀದಿ ಲಭ್ಯವಾದಲ್ಲಿ ಜಿಟಿ ಲೈನ್‌ನಲ್ಲಿ ಕೇವಲ ಪೆಟ್ರೋಲ್ ಆವೃತ್ತಿ ಮಾತ್ರವೇ ಖರೀದಿಗೆ ಲಭ್ಯವಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಸೆಲ್ಟೊಸ್ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು 15.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಿದ್ದು ಸೆಲ್ಟೊಸ್ ಕಾರು ಡೀಸೆಲ್ ಎಂಜಿನ್‌ನಲ್ಲಿ ಒಟ್ಟು 5 ವೆರಿಯೆಂಟ್‌ಗಳನ್ನು ಮತ್ತು ಪೆಟ್ರೋಲ್ ಎಂಜಿನ್‌ನಲ್ಲಿ 8 ವೆರಿಯೆಂಟ್‌ಗಳನ್ನು ಹೊಂದಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗೆ ಅನ್ವಯದಂತೆ ಕಿಯಾ ಸೆಲ್ಟೊಸ್ ಕಾರು ಸುಧಾರಿತ ಎಂಜಿನ್ ಮಾದರಿಯನ್ನು ಪಡೆದುಕೊಂಡಿದ್ದು, ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆಯ ಜೊತೆಗೆ ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಹೀಗಾಗಿ ಇದು ದೇಶದಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಬಿಎಸ್-6 ನಿಯಮವನ್ನು ಡೆಡ್‌ಲೈನ್‌ಗೂ ಮುನ್ನವೇ ಪರಿಚಯಿಸಿದ ಮೊದಲ ಕಾರು ಉತ್ಪಾದನಾ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ರೆನಾಲ್ಟ್ ಟ್ರೈಬರ್

ರೆನಾಲ್ಟ್ ಇಂಡಿಯಾ ಸಂಸ್ಥೆಯು ಇದೇ ಮೊದಲ ಬಾರಿಗೆ ಎಂಟ್ರಿ ಲೆವಲ್ ಎಂಪಿವಿ ಆವೃತ್ತಿಯಲ್ಲಿ ಟ್ರೈಬರ್ ಕಾರನ್ನು ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದ್ದು, ಹೊಸ ಕಾರು ಸಬ್ 4 ಮೀಟರ್ ವಿನ್ಯಾಸದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ. ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಎಸ್ ಮತ್ತು ಎರ್‌ಎಕ್ಸ್‌ಜೆಡ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಸದ್ಯಕ್ಕೆ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿದೆ.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಮಾರುತಿ ಸುಜುಕಿ ಎಕ್ಸ್ಎಲ್6

ಎರ್ಟಿಗಾಗಿಂತ ತುಸು ಭಿನ್ನವಾಗಿರುವ ಎಕ್ಸ್ಎಲ್6 ಕಾರು 6 ಸೀಟರ್ ಸೌಲಭ್ಯದೊಂದಿಗೆ ಕೇವಲ ಪೆಟ್ರೋಲ್ ಎಂಜಿನ್ ಮಾತ್ರವೇ ಖರೀದಿಗೆ ಲಭ್ಯವಿದ್ದು, ಇದು ವ್ಯಯಕ್ತಿಯ ಕಾರು ಬಳಕೆದಾರನ್ನೇ ಗುರಿಯಾಗಿಸಿ ಬಿಡುಗಡೆ ಮಾಡಲಾಗಿದೆ. ಹೊಸ ಕಾರು ಬಿಎಸ್-6 ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ಕೆ15ಬಿ ಪೆಟ್ರೋಲ್ ಎಂಜಿನ್ ಮೂಲಕ 105-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಸಾಮಾನ್ಯ ಎರ್ಟಿಗಾಗಿಂತ ರೂ.70 ಸಾವಿರ ಹೆಚ್ಚುವರಿ ಬೆಲೆ ಪಡೆದಿರುವ ಎಕ್ಸ್‌ಎಲ್6 ಮಾದರಿಯು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9.79 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.46 ಲಕ್ಷ ಬೆಲೆ ಪಡೆದುಕೊಂಡಿದೆ. ಎಕ್ಸ್ಎಲ್6 ಕಾರು ಎರ್ಟಿಗಾ ಕಾರಿನ ಜೆಟಾ ಮತ್ತು ಅಲ್ಫಾ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಒಟ್ಟು ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಎಕ್ಸ್ಎಲ್6 ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

MOST READ: ಜೆ‍‍ಸಿ‍‍ಬಿ ಯಂತ್ರವು ಹಳದಿ ಬಣ್ಣದಲ್ಲೇ ಏಕಿರುತ್ತೆ?

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಹ್ಯುಂಡೈ ಗ್ರಾಂಡ್ ಐ10 ನಿಯೋಸ್

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ರಸ್ತೆಗಿಳಿದಿರುವ ಗ್ರಾಂಡ್ ಐ10 ನಿಯೋಸ್ ಕಾರು ಸಾಮಾನ್ಯ ಗ್ರಾಂಡ್ ಐ10 ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಉದ್ದಳತೆಯನ್ನು ಹೊಂದಿದ್ದು, ನಿಯೋಸ್ ಪದಕ್ಕೆ ತಕ್ಕಂತೆ ಹೊಸ ಕಾರು ಹಲವಾರು ಬದಲಾವಣೆಗಳೊಂದಿಗೆ ಈ ಬಾರಿ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರಸ್ತುತ ತಲೆಮಾರಿನ ಗ್ರಾಂಡ್ ಐ10 ಮತ್ತು ಎಲೈಟ್ ಐ20 ನಡುವಿನ ಸ್ಥಾನ ಗಿಟ್ಟಿಸಿಕೊಂಡಿರುವ ಗ್ರಾಂಡ್ ಐ10 ನಿಯೋಸ್ ಆವೃತ್ತಿಯು ಇತರೆ ಹ್ಯಾಚ್‌ಬ್ಯಾಕ್ ಆವೃತ್ತಿಗಳಿಂತಲೂ ಅತಿಹೆಚ್ಚು ಪ್ರೀಮಿಯಂ ಸೌಲಭ್ಯಗಳನ್ನು ಪಡೆದಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.99 ಲಕ್ಷ ಬೆಲೆ ಹೊಂದಿದ್ದರೆ ಹೈ ಎಂಡ್ ಮಾದರಿಯಾದ ಆಸ್ಟಾ ಮ್ಯಾನುವಲ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ.7.99 ಲಕ್ಷ ಬೆಲೆ ಪಡೆದಿದ್ದು, ಬಿಎಸ್-6 ಮಾದರಿಯ 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು ಬಿಎಸ್-4 ಮಾದರಿಯ 1.2-ಲೀಟರ್ ಡೀಸೆಲ್ ಎಂಜಿನ್(2020ರ ನಂತರ ಬಿಎಸ್-6) ಹೊಂದಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಬಿಎಂಡಬ್ಲ್ಯು 3 ಸೀರಿಸ್

ಬಿಎಂ‍‍ಡಬ್ಲ್ಯು ಇಂಡಿಯಾ ಸಂಸ್ಥೆಯು ಹೊಸ ತಲೆಮಾರಿನ 3 ಸೀರಿಸ್ ಬಿಡುಗಡೆಗೊಳಿಸಿದ್ದು, 3 ಸೀರಿಸ್ ಕಾರಿನ ಆರಂಭಿಕ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.41.40 ಲಕ್ಷ ದರ ನಿಗದಿಪಡಿಸಲಾಗಿದೆ. 2019ರ 3 ಸೀರಿಸ್ ಸೆಡಾನ್ ಕಾರ್ ಅನ್ನು 2 ಡೀಸೆಲ್ ಮಾದರಿ ಹಾಗೂ ಒಂದು ಪೆಟ್ರೋಲ್ ಮಾದರಿಗಳಲ್ಲಿ ಖರೀದಿ ಲಭ್ಯವಿದ್ದು, ಹೊಸ ಕಾರು ಭಾರತದಲ್ಲಿ ಎಳನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಹೊಸ ಬಿಎಂಡಬ್ಲ್ಯು 3 ಸೀರಿಸ್ ಕಾರು 320ಡಿ ಸ್ಪೋರ್ಟ್, 320ಡಿ ಐಷಾರಾಮಿ ಲೈನ್ ಹಾಗೂ 330ಐ ಎಂ ಸ್ಪೋರ್ಟ್ ಎಂಬ ಮೂರು ಮಾದರಿಗಳಲ್ಲಿ ಖರೀದಿಸಬಹುದಾಗಿದ್ದು, 2.0-ಲೀಟರಿನ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಮತ್ತು 2.0-ಲೀಟರಿನ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಇಸುಝು ವಿ-ಕ್ರಾಸ್ 1.9-ಲೀಟರ್ ಡೀಸೆಲ್ ಎಟಿ

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಬಿಡುಗಡೆಯಾಗಿ ಮಾರಾಟಗೊಳ್ಳುತ್ತಿರುವ ಇಸುಝು ವಿ-ಕ್ರಾಸ್ ಪಿಕ್ ಅಪ್ ಟ್ರಕ್ ಆಟೋಮ್ಯಾಟಿಕ್ ಡೀಸೆಲ್ ಮಾದರಿಯನ್ನು ಇದೇ ಮೊದಲ ಬಾರಿಗೆ ಭಾರತದಲ್ಲೂ ಬಿಡುಗಡೆಗೊಳಿಸಲಾಗಿದ್ದು, ಹೊಸ ಪಿಕ್ ಅಪ್ ಟ್ರಕ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.19.99 ಲಕ್ಷಕ್ಕೆ ಬೆಲೆ ನಿಗದಿಪಡಿಸಲಾಗಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ವಿ-ಕ್ರಾಸ್ ಜೆಡ್-ಪ್ರೆಸ್ಟಿಜ್ ಆವೃತ್ತಿಯು 1.9-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯವನ್ನು ಹೊಂದಿದ್ದು, ಲಿಮಿಟೆಡ್ ಆವೃತ್ತಿಯಾಗಿರುವ ವಿ-ಕ್ರಾಸ್ ಜೆಡ್-ಪ್ರೆಸ್ಟಿಜ್ ಮಾದರಿಯು ಸಾಮಾನ್ಯ ಮಾದರಿಯ ಡಿ-ಮ್ಯಾಕ್ಸ್ ವಿ-ಕ್ರಾಸ್ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳೊಂದಿಗೆ ಕ್ಲಾಸ್ ಲಿಡಿಂಗ್ ಪ್ರೀಮಿಯಂ ಸೌಲಭ್ಯಗಳ ಜೋಡಣೆಯನ್ನು ಹೊಂದಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ಟಾಟಾ ಹ್ಯಾರಿಯರ್ ಡಾರ್ಕ್ ಎಡಿಷನ್

ಟಾಟಾ ತನ್ನ ಜನಪ್ರಿಯ ಹ್ಯಾರಿಯರ್‌ನಲ್ಲಿ ಹೊಸದಾಗಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಕಾರು ಸಂಪೂರ್ಣವಾಗಿ ಕಪ್ಪು ಬಣ್ಣದ ವಿನ್ಯಾಸ ಹೊಂದಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.16.76 ಲಕ್ಷ ಬೆಲೆ ಹೊಂದಿರುವ ಡಾರ್ಕ್ ಎಡಿಷನ್ ಜೆಡ್ಎಕ್ಸ್ ಆವೃತ್ತಿಯಲ್ಲಿ ಆಯ್ಕೆ ಮಾಡಬಹುದಾಗಿದ್ದು, ಎಂಜಿನ್ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಸಾಮಾನ್ಯ ಮಾದರಿಯೆಂತೆ ಪಡೆದುಕೊಂಡಿದೆ.

ಅಗಸ್ಟ್‌‌ನಲ್ಲಿ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದ ಟಾಪ್ 5 ಹೊಸ ಕಾರುಗಳಿವು..!

ನಿಸ್ಸಾನ್ ಕಿಕ್ಸ್ ಹೊಸ ಡೀಸೆಲ್ ಆವೃತ್ತಿ

ಈ ಮೊದಲ ಜನವರಿ ಆರಂಭದಲ್ಲಿ ಹೊಸದಾಗಿ ಬಿಡುಗಡೆಗೊಂಡಾಗ ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀ ಎಂಬ ಡೀಸೆಲ್ ವೆರಿಯೆಂಟ್‍‍ಗಳಲ್ಲಿ ಖರೀದಿಗೆ ಲಭ್ಯವಿದ್ದ ಕಿಕ್ಸ್ ಕಾರು ಇದೀಗ ಎಂಟ್ರಿ ಲೆವಲ್‌ನಲ್ಲಿ ಮತ್ತೊಂದು ಹೊಸ ಡೀಸೆಲ್ ಆವೃತ್ತಿಯನ್ನು ಪಡೆದುಕೊಂಡಿದೆ. ಇದೀಗ ಕಿಕ್ಸ್ ಕಾರು ಒಟ್ಟು ನಾಲ್ಕು ಪೆಟ್ರೋಲ್ ಮತ್ತು ನಾಲ್ಕು ಡೀಸೆಲ್ ಆವೃತ್ತಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಎಂಟ್ರಿ ಲೆವಲ್ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 9.89 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
New cars launched in August 2019. India saw a number of cars launched in the previous month, ahead of the arrival of the year’s festive season. Here is the entire list of cars launched in India in August.
Story first published: Saturday, August 31, 2019, 19:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X