ಹೊಸ ಫೋರ್ಡ್ ಎಂಡೀವರ್ ಕಾರು ಖರೀದಿಗಾಗಿ ಬುಕ್ಕಿಂಗ್ ಶುರು...
ಟೊಯೊಟಾ ಫಾರ್ಚೂನರ್ ಹಿಂದಿಕ್ಕುವ ಏಕೈಕ ಕಾರು ಮಾದರಿ ಅಂದ್ರೆ ಅದು ಫೋರ್ಡ್ ಎಂಡೀವರ್ ಮಾತ್ರ. ಯಾಕೆಂದ್ರೆ ಫಾರ್ಚೂನರ್ ಮಾದರಿಯಲ್ಲೇ ಎಲ್ಲಾ ಹಂತದಲ್ಲೂ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ಫೇಸ್‌ಲಿಫ್ಟ್ ಸೌಲಭ್ಯದೊಂದಿಗೆ ಮತ್ತಷ್ಟು ಜನಪ್ರಿಯತೆ ಸಾಧಿಸುವ ತವಕದಲ್ಲಿದೆ.

ಈ ನಿಟ್ಟಿನಲ್ಲಿ ಇದೇ ತಿಂಗಳ 22ರಂದು ಬಿಡುಗಡೆಯಾಗಲಿರುವ ಫೋರ್ಡ್ ಎಂಡೀವರ್ ಕಾರುಗಳನ್ನು ಖರೀದಿಸಲು ಬಯಸುವ ಗ್ರಾಹಕರು ಇದೀಗ ಪ್ರೀ-ಬುಕ್ಕಿಂಗ್ ಮಾಡಿಕೊಳ್ಳುವ ಸೇವೆಯನ್ನು ಸಂಸ್ಥೆಯ ಡೀಲರ್‍ಗಳು ಶುರು ಮಾಡಿದ್ದಾರೆ. ಆಸಕ್ತ ಗ್ರಾಹಕರು ರೂ. 1 ಲಕ್ಷದ ಹಣವನ್ನು ನೀಡಿ ಪ್ರೀ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಈ ಕಾರಿನ ಬಗ್ಗೆ ಹೆಚ್ಚು ತಿಳಿಯಲು ಮುಂದಕ್ಕೆ ಓದಿರಿ...
ಫೇಸ್‌ಲಿಫ್ಟ್ ಎಂಡೀವರ್ ಹೊಸ ಕಾರಿನಲ್ಲಿ ಸುಧಾರಿತ ಗ್ರಿಲ್, ಫಾಗ್ ಲ್ಯಾಂಪ್, ಫ್ರಂಟ್ ಬಂಪರ್, ಚಕ್ರಗಳು ಮತ್ತು ಕಾರಿನ ಇಂಟಿರಿಯರ್ ವಿಭಾಗದಲ್ಲಿ ಗುರುತರ ಬದಲಾವಣೆ ತರುತ್ತಿರುವ ಫೋರ್ಡ್ ಸಂಸ್ಥೆಯು ಫಾರ್ಚೂನರ್ ಮತ್ತು ಮಹೀಂದ್ರಾ ಅಲ್ಟಾರಾಸ್ ಜಿ4 ಕಾರಿಗೆ ಪ್ರಬಲ ಪೈಪೋಟಿ ನೀಡಲಿದೆ.
ಜೊತೆಗೆ 7-ಸೀಟರ್ ವೈಶಿಷ್ಟ್ಯತೆಗಳನ್ನು ಮತ್ತಷ್ಟು ಆರಾಮದಾಯಕಗೊಳಿಸಲಿದ್ದು, ಕೀ ಲೆಸ್ ಎಂಟ್ರಿ, ಸ್ಟಾರ್ಟ್/ಸ್ಟಾಪ್ ಪುಶ್ ಬಟನ್, ಸಿಕ್ಸ್ ಸ್ಪೋರ್ಕ್ 20-ಇಂಚಿನ ಅಲಾಯ್ ವೀಲ್ಹ್ ಸೇರಿದಂತೆ ಕಾರಿನ ಹೊರ ಭಾಗದ ವಿನ್ಯಾಸದಲ್ಲೂ ಕೆಲವು ಬದಲಾವಣೆ ಮಾಡಲಾಗುತ್ತಿದೆ.

ಎಂಜಿನ್ ಸಾಮರ್ಥ್ಯ
ವಿದೇಶಿ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಿರುವ ಫೇಸ್‌ಲಿಫ್ಟ್ ಎಂಡೀವರ್(ಎವೆರೆಸ್ಟ್) ಕಾರುಗಳು 2.0-ಲೀಟರ್ ಫೌರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 10-ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್‌ನೊಂದಿಗೆ ಸಿಂಗಲ್ ಟರ್ಬೋ ವರ್ಷನ್ ಮತ್ತು ಟ್ವಿನ್ ಟರ್ಬೋ ವರ್ಷನ್ ಎಂಬ ಎರಡು ಎಂಜಿನ್ ಆಯ್ಕೆ ಹೊಂದಿವೆ.
ಈ ಮೂಲಕ ಸಿಂಗಲ್ ಟರ್ಬೋ ವರ್ಷನ್ ಕಾರುಗಳು 180ಬಿಎಚ್‌ಪಿ, 420ಎನ್ಎಂ ಟಾರ್ಕ್ ಉತ್ಪಾದಿಸಿದಲ್ಲಿ ಟ್ವಿನ್ ಟರ್ಬೋ ವರ್ಷನ್ ಕಾರುಗಳು 213ಬಿಎಚ್‌ಪಿ, 500 ಟಾರ್ಕ್ ಉತ್ಪಾದನಾ ಶಕ್ತಿ ಹೊಂದಿವೆ.
ಆದ್ರೆ, ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ಎಂಡೀವರ್ ಕಾರುಗಳು 2.2-ಲೀಟರ್ ಫೋರ್ ಸಿಲಿಂಡರ್ ಡಿಸೇಲ್ ಎಂಜಿನ್ ಮತ್ತು 3.2-ಲೀಟರ್ ಫೈವ್ ಸಿಲಿಂಡರ್ ಡಿಸೇಲ್ ಎಂಜಿನ್‌ನೊಂದಿಗೆ ಮಾರಾಟವಾಗುತ್ತಿದ್ದು, ಫೇಸ್‌ಲಿಫ್ಟ್ ಎಂಡೀವರ್‌ನಲ್ಲೂ ಹಳೆಯ ಕಾರಿನ ಮಾದರಿಯಲ್ಲೇ ಎಂಜಿನ್ ಆಯ್ಕೆ ಮುಂದುವರಿಸುವ ಸಾಧ್ಯತೆಗಳಿವೆ.

ಹೀಗಾಗಿ 2.2-ಲೀಟರ್ ಡಿಸೇಲ್ ಎಂಜಿನ್ ಮಾದರಿಯು 158ಬಿಎಚ್‌ಪಿ, 385ಎನ್ಎಂ ಟಾರ್ಕ್ ಉತ್ಪಾದಿಸಿದಲ್ಲಿ, 3.2-ಲೀಟರ್ ಡಿಸೇಲ್ ಎಂಜಿನ್ ಮಾದರಿಯು 197ಬಿಎಚ್‌ಪಿ, 470ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಎರಡು ಮಾದರಿಯಲ್ಲೂ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹಾಗೂ ಆಲ್ ವೀಲ್ಹ್ ಡ್ರೈವ್ ಸೌಲಭ್ಯ ಜೋಡಿಸಲಾಗಿದೆ.
ಒಟ್ಟಿನಲ್ಲಿ 7-ಸೀಟರ್ ಫುಲ್ ಎಸ್‌ಯುವಿಗಳಲ್ಲೇ ಉತ್ತಮ ಕಾರು ಮಾದರಿಯಾಗಿರುವ ಫೋರ್ಡ್ ಎಂಡೀವರ್ ಇದೀಗ ಫೇಸ್‌ಲಿಫ್ಟ್ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದ್ದು, ಜನಪ್ರಿಯ ಫಾರ್ಚೂನರ್, ಮಹೀಂದ್ರಾ ಅಲ್ಟಾರಾಸ್ ಜಿ4, ಇಸುಝು ಎಂಯುಎಕ್ಸ್ ಫೇಸ್‌ಲಿಫ್ಟ್ ಕಾರು ಮಾರಾಟಕ್ಕೆ ತೀವ್ರ ಪೈಪೋಟಿ ನೀಡುವತ್ತ ಗಮನಹರಿಸಲಾಗಿದೆ.


Click it and Unblock the Notifications